ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಸಾಂಕ್ರಮಿಕ ರೋಗ ಮಾದರಿಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ವಹಿಸಿಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ

by | 06/07/24 | ಸುದ್ದಿ

ಚಿತ್ರದುರ್ಗ ಜುಲೈ.06:
ಕೋವಿಡ್ ಸಾಂಕ್ರಮಿಕ ರೋಗ ಉಲ್ಬಣಗೊಂಡಿದ್ದ ಸಮಯದಲ್ಲಿ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಮಾದರಿಯಲ್ಲಿ ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳು ಡೆಂಗ್ಯೂ ನಿಯಂತ್ರಣಕ್ಕೂ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಡೆಂಗ್ಯೂ ನಿಯಂತ್ರಣದ ಕುರಿತು ಜರುಗಿದ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆಂತಕದ ಸಂಗತಿಯಾಗಿದೆ. ನಗರ ಪ್ರದೇಶ ಹಾಗೂ ಗ್ರಾಮಗಳಲ್ಲಿ ಡೆಂಗ್ಯೂ ಕುರಿತು ಜನರಲ್ಲಿ ಅರಿವು ಮೂಡಿಸುವದರೊಂದಿಗೆ, ಜಾಗರೂಕತೆಯಿಂದ ಡೆಂಗ್ಯೂ ಪ್ರಕರಣಗಳನ್ನು ನಿರ್ವಹಿಸಬೇಕು. ಯಾವುದೇ ಜೀವ ಹಾನಿ ಉಂಟಾಗದಂತೆ ಚಿಕಿತ್ಸೆ ನೀಡಬೇಕು. ಸರ್ಕಾರದ ಆದೇಶದಂತೆ ಪ್ರತಿ ಶುಕ್ರವಾರ ಆಂದೋಲನದ ಮಾದರಿಯಲ್ಲಿ ಈಡಿಸ್ ಈಜಿಪ್ಟೈ ಸೊಳ್ಳೆಗಳ ಲಾರ್ವ ನಾಶದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹೆಚ್ಚಿನ ಪ್ರಕಣಗಳು ವರದಿಯಾದ ಸ್ಥಳಗಳಲ್ಲಿ ಮಂಗಳವಾರ ಹಾಗೂ ಶುಕ್ರವಾರ ಲಾರ್ವ ನಾಶದ ಕಾರ್ಯಕ್ರಮ ಕೈಗೊಳ್ಳಬೇಕು. ಡೆಂಗ್ಯೂ ನಿಯಂತ್ರಣ ಕಾರ್ಯಗಳ ಮೇಲ್ವಿಚಾರಣೆಗಾಗಿ ಪ್ರತಿ ತಾಲ್ಲೂಕಿಗೆ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಡೆಂಗ್ಯೂ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇರುವುದಿಲ್ಲವಾದ್ದರಿಂದ, ಈ ರೋಗ ಬಾರದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು, ಅಂದರೆ ಇದಕ್ಕೆ ಕಾರಣವಾಗುವ ಈಡಿಸ್ ಈಜಿಪ್ಟೈ ಸೊಳ್ಳೆಗಳು ಹುಟ್ಟುವ ಮೂಲವನ್ನೇ ಇಲ್ಲವಾಗಿಸಬೇಕು. ಸಾರ್ವಜನಿಕರು ತಮ್ಮ ಮನೆಯ ಒಳಗೆ ಹಾಗೂ ಸುತ್ತಮುತ್ತ ಎಲ್ಲೂ ಕೂಡ ನೀರು ನಿಲ್ಲದಂತೆ ನೋಡಿಕೊಂಡಲ್ಲಿ, ನೀರು ಸಂಗ್ರಹಿಸುವ ತೊಟ್ಟಿ, ಡ್ರಂ ಇತ್ಯಾದಿಗಳನ್ನು ಸೊಳ್ಳೆ ನುಸುಳದಂತೆ ಮುಚ್ಚಿಯೇ ಶೇಖರಿಸಬೇಕು, ವಾರಕ್ಕೊಮ್ಮೆ ಸ್ವಚ್ಛವಾಗಿ ತೊಳೆದು, ಒಣಗಿಸಿದ ಬಳಕವೇ ಮತ್ತೆ ನೀರು ಸಂಗ್ರಹಿಸಬೇಕು. ಹೀಗಾದಲ್ಲಿ ಮಾತ್ರ ಡೆಂಗ್ಯೂ ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ. ಇದಕ್ಕೆ ಸಾರ್ವಜನಿಕರು ಸ್ಥಳೀಯ ಸಂಸ್ಥೆಯೊಂದಿಗೆ ಸಹಕರಿಸುವ ಅಗತ್ಯವಿದೆ ಎಂದು ಮನವಿ ಮಾಡಿದರು.
ತುರ್ತು ಸ್ಪಂದನೆ ಹಾಗೂ ಡೆಂಗ್ಯೂ ಪರೀಕ್ಷೆಗೆ ದರ ನಿಗದಿ :
ಡೆಂಗ್ಯೂ ಜ್ವರ ಕಂಡುಬಂದ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ತುರ್ತು ಸ್ಪಂದನೆ ದೊರಯಬೇಕು. ರೋಗ ಲಕ್ಷಣ ಆಧರಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಎಲ್ಲಾ ಪ್ರಾಥಮಿಕ, ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಹಾಜರಿದ್ದು ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಸರ್ಕಾರ ಖಾಸಗಿ ಆಸ್ಪತ್ರೆ ಹಾಗೂ ಲ್ಯಾಬ್‍ಗಳಲ್ಲಿ ಡೆಂಗ್ಯೂ ಪತ್ತೆ ಪರೀಕ್ಷೆಗೆ ಏಕರೂಪ ದರ ನಿಗದಿ ಪಡಿಸಿದೆ. ಇದರ ಆಧಾರದಲ್ಲಿ ಡೆಂಗ್ಯೂ ಎಲಿಸಾ ಎನ್.ಎಸ್.1 ಹಾಗೂ ಎಲಿಸಾ ಐ.ಜಿ.ಎಂ. ಪರೀಕ್ಷೆಗೆ ತಲಾ 300, ಎನ್.ಎಸ್.1, ಐಜಿಎಂ ಮತ್ತು ಐಜಿಜಿ ರ್ಯಾಪಿಡ್ ಕಾರ್ಡ್ ಪರೀಕ್ಷೆಗೆ ರೂ.250 ಮಾತ್ರ ಪಡೆಯಬೇಕು. ಹೆಚ್ಚಿನ ದರ ವಿಧಿಸುವುದು ಕಂಡುಬಂದರೆ ತಕ್ಷಣವೇ ಅಂತಹ ಖಾಸಗಿ ಆಸ್ಪತ್ರೆ ಹಾಗೂ ಲ್ಯಾಬ್‍ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ವೆಂಕಟೇಶ್ ಎಚ್ಚರಿಕೆ ನೀಡಿದರು.
ನಾಲಾ ಸ್ವಚ್ಚತೆಗೆ ಸೂಚನೆ : ಡೆಂಗ್ಯೂ ಪ್ರಕರಣಗಳು ನಗರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿವೆ. ಎಲ್ಲಾ ನಗರ ಸಭೆ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ನಾಲಾ ಸ್ವಚ್ಛತೆಯನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು. ಇದೇ ಮಾದರಿಯಲ್ಲಿ ಗ್ರಾಮಗಳಲ್ಲಿಯೂ ಚರಂಡಿಗಳ ಸ್ವಚ್ಛತೆ ಕೈಗೊಳ್ಳಬೇಕು. ಡೆಂಗ್ಯೂ ಹರಡುವ ಸೊಳ್ಳೆ ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ನಡೆಸುವುದರಿಂದ ಪ್ರತಿ ಮನೆಗಳಿಗೂ ತೆರಳಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಡೆಂಗ್ಯೂ ಸೊಳ್ಳೆ ಹಗಲಿನಲ್ಲಿ ಕಚ್ಚುತ್ತದೆ. ಆದ್ದರಿಂದ ಹಗಲಿನ ವೇಳೆ ಮಲಗುವ ಅಭ್ಯಾಸ ಇರರುವರು ಸೊಳ್ಳೆ ಪರದೆ ಉಪಯೋಗಿಸುವಂತೆ ತಿಳಿ ಹೇಳಿ. ಡೆಂಗ್ಯೂ ಜಾಗೃತಿ ಕುರಿತು ಆರೋಗ್ಯ ಇಲಾಖೆ ಸಿದ್ದಪಡಿಸಿದ ಜಿಂಗಲ್ಸ್‍ಗಳನ್ನು ಕಸ ಸಂಗ್ರಹಿಸುವ ವಾಹನಗಳಲ್ಲಿ ತಪ್ಪದೇ ಪ್ರಸಾರ ಮಾಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಡೆಂಗ್ಯೂ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಹೇಳಿದರು.
ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಜೊತೆಗೆ ವಿವಿಧ ಇಲಾಖೆಗಳು ಸಹ ತಪ್ಪದೇ ಕೈಜೋಡಿಸಬೇಕು. ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಕೈಗೊಳ್ಳುವ ಲಾರ್ವ ನಾಶದ ಕಾರ್ಯಕ್ರಮಕ್ಕೆ ನಗರ ಸಭೆ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಬೇಕು. ಗಣಿ ಇಲಾಖೆ ಅಧಿಕಾರಿಗಳು ಕಲ್ಲು ಕ್ವಾರಿಗಳಲ್ಲಿ ಲಾರ್ವ ನಾಶದ ಕಾರ್ಯಕೈಗೊಳ್ಳಬೇಕು. ಎಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿವೆಯೇ ಅಂತಹ ಪ್ರದೇಶಗಳಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಂದ ಮನೆ ಮನೆ ಭೇಟಿ ಕಾರ್ಯಕ್ರಮ ಹಮ್ಮಿಕೊಂಡು, ಲಾರ್ವಾ ಸಮೀಕ್ಷೆ ಮತ್ತು ಜ್ವರ ಪೀಡಿತರ ಸಮೀಕ್ಷೆ ನಡೆಸಿ, ವರದಿ ಪಡೆದು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಮೀನುಗಾರಿಕೆ ಇಲಾಖೆಯಿಂದ ವಾಣಿ ವಿಲಾಸ ಸಾಗರ ಮತ್ಸ್ಯ ಪಾಲನ ಕೇಂದ್ರದಲ್ಲಿ ಸೊಳ್ಳೆ ಲಾರ್ವಾಹಾರಿಗಳಾದ ಗಪ್ಪಿ ಹಾಗೂ ಗಾಂಬೂಸಿಯಾ ಮೀನು ಮರಿಗಳನ್ನು ಉತ್ಪತ್ತಿ ಮಾಡಿ ಆರೋಗ್ಯ ಇಲಾಖೆಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ 275 ಡೆಂಗ್ಯೂ ಪ್ರಕರಣ ಧೃಡ :
ಜಿಲ್ಲೆಯಲ್ಲಿ 2573 ಡೆಂಗ್ಯೂ ಶಂಕಿತ ಪ್ರಕರಣಗಳು ಇದ್ದು, ಇದರಲ್ಲಿ 2033 ಪ್ರಕರಣಗಳಲ್ಲಿ ಡೆಂಗ್ಯೂ ಪರೀಕ್ಷೆ ನಡೆಸಲಾಗಿದೆ. ಜುಲೈ 5 ತಾರೀಖಿನ ಅಂತ್ಯಕ್ಕೆ ಒಟ್ಟು 275 ಡೆಂಗ್ಯೂ ಪ್ರಕರಣಗಳು ಧೃಡಪಟ್ಟಿವೆ. ಡೆಂಗ್ಯೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. 2023ರಲ್ಲಿ ಜನವರಿಯಿಂದ ಡಿಸೆಂಬರ್ ವರೆಗೆ ಒಟ್ಟು 377 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು. ಈ ವರ್ಷ 2024ರಲ್ಲಿ ಜುಲೈ ವೇಳೆಗೇ 275 ಪ್ರರಣಗಳು ಧೃಡ ಪಟ್ಟಿರುವುದು ಕಳವಳಕಾರಿಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 195 ಪ್ರಕರಣಗಳು ಧೃಡಪಟ್ಟಿದ್ದು, ಇದರಲ್ಲಿ 83 ನಗರ ಪ್ರದೇಶದಲ್ಲಿ ಪತ್ತೆಯಾಗಿವೆ. ಉಳಿದ ತಾಲ್ಲೂಕುಗಳ ಪೈಕಿ ಚಳ್ಳಕೆರೆ 32, ಹಿರಿಯೂರು 18, ಹೊಳಲ್ಕೆರೆ 19, ಹೊಸದುರ್ಗ 7 ಹಾಗೂ ಮೊಳಕಾಲ್ಮೂರಿನಲ್ಲಿ 4 ಪ್ರಕರಣಗಳು ಧೃಡಪಟ್ಟಿವೆ ಎಂದು ಮಾಹಿತಿ ನೀಡಿದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಾಶಿ ಡೆಂಗ್ಯೂ ನಿಯಂತ್ರಣಕ್ಕೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕಾರ್ಯ ಕುರಿತು ಸಭೆಯಲ್ಲಿ ಪ್ರಾತ್ಯಕ್ಷತೆ ನೀಡಿದರು.
ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನಗರ ಸಭೆ ಆಯುಕ್ತೆ ಎಂ.ರೇಣುಕಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page