ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ಯಿಂದ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ:ಅಧ್ಯಕ್ಷರಾದ ರಾಮಚಂದ್ರ

by | 12/06/24 | ಸುದ್ದಿ


ಹಿರಿಯೂರು:
ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಮತ್ತು ಪ್ರೊ.ಬಿ. ಕೃಷ್ಣಪ್ಪ ರವರ ಜಯಂತಿ ಅಂಗವಾಗಿ ಮೊದಲ ಬಾರಿಗೆ 2023-2024 ನೇ ಸಾಲಿನ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು 21-ಜುಲೈ -2024 ಭಾನುವಾರ ದಂದು ನಗರದ ಗುರು ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷರಾದ ಕೆ. ರಾಮಚಂದ್ರ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ವಿವರಗಳನ್ನು ತಿಳಿಸಿದ ಅವರು 2023-2024 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ಹಿರಿಯೂರು ತಾಲೂಕಿನ ಎಲ್ಲಾ ಜಾತಿಯ ವಿದ್ಯಾರ್ಥಿಗಳು ಈ ಪ್ರತಿಭಾ ಪುಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಎಂಬುದಾಗಿ ಅವರು ತಿಳಿಸಿದರಲ್ಲದೆ,
ಆಸಕ್ತ ವಿದ್ಯಾರ್ಥಿಗಳು ಸ್ವವಿವರದ ಅರ್ಜಿಯೊಂದಿಗೆ ಅಂಕಪಟ್ಟಿ, ಪೋಟೋ ಲಗತ್ತಿಸಿ ಆರ್.ರಾಘವೇಂದ್ರ ತಾಲ್ಲೂಕು ಅಧ್ಯಕ್ಷರು ಟಿಬಿ ಸರ್ಕಲ್ ಕೋರ್ಟ್ ಪಕ್ಕ ಹಿರಿಯೂರು ಟೌನ್ ಹಿರಿಯೂರು ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ವಿಳಾಸಕ್ಕೆ 12 ಜುಲೈ 2024ರ ಒಳಗಾಗಿ ಅರ್ಜಿ ಸಲ್ಲಿಸಿದವರಿಗೆ ಪ್ರತಿಭಾ ಪುರಸ್ಕಾರಕ್ಕೆ ಪರಿಗಣಿಸಲಾಗುವುದು ಎಂಬುದಾಗಿ ಅವರು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ರಾಜ್ಯಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷರು ಕೆ. ರಾಮಚಂದ್ರ, ತಾಲ್ಲೂಕು ಅಧ್ಯಕ್ಷರು ಆರ್. ರಾಘವೇಂದ್ರ ಅವರನ್ನು 9945454690, 9535616655 ಮೊಬೈಲ್ ಮೂಲಕ ಸಂಪರ್ಕಿಸಬಹುದಾಗಿದೆ ಎಂಬುದಾಗಿ ತಾಲ್ಲೂಕು ಅಧ್ಯಕ್ಷರು ಆರ್. ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page