ಹಿರಿಯೂರು :
ಮಕ್ಕಳಿಗೆ ಮಳೆ ಹಾಗೂ ಮಳೆಗಾಲದ ವಾತಾವರಣದಲ್ಲಿ ಕೊಡೆಯ ಅಗತ್ಯತೆಯನ್ನು ತಿಳಿಸುವ ಜೊತೆಗೆ ಮಕ್ಕಳಿಗೆ ಮನೋರಂಜನೆ ನೀಡುವ ಉದ್ದೇಶದಿಂದ ನಮ್ಮ ಶಾಲೆಯಲ್ಲಿ ಅಂಬ್ರೆಲಾ-ಡೇ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಇದು ಸಂತಸವನ್ನು ಉಂಟುಮಾಡುತ್ತದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ಆವರಣದಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ.ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ “ಅಂಬ್ರೆಲಾ-ಡೇ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳನ್ನು ಕೊಡಬೇಕೆಂಬ ಉದ್ದೇಶದಿಂದ ನಮ್ಮ ಶಾಲೆಯಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಬಣ್ಣಬಣ್ಣದ ಕೊಡೆಗಳನ್ನು ಹಿಡಿದು, ವಿವಿಧ ಹಾಡುಗಳಿಗೆ ನೃತ್ಯವನ್ನು ಮಾಡುವುದರಿಂದ ಅವರ ಮನಸ್ಸಿಗೆ ಉಲ್ಲಾಸ ಉಂಟಾಗುತ್ತದೆ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಶಿಕ್ಷಕಿಯರುಗಳಾದ ಶ್ರೀಮತಿ ನಂದಿನಿ, ಶ್ರೀಮತಿ ರಚನ, ಶ್ರೀಮತಿ ಅಕ್ಷಿತಾ, ಶ್ರೀಮತಿ ಶಬಾನಾ, ಶ್ರೀಮತಿ ಮಮತಾ, ರಂಜಿತಾ, ಶಿಕ್ಷಕರುಗಳಾದ ಉಮೇಶ್ ಯಾದವ್ ಹಾಗೂ ಶಿವರಾಜ್ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments