ಚಿತ್ರದುರ್ಗ: ಅಕ್ರಮವಾಗಿ ಮನೆಯಲ್ಲಿ ಆನೆ ದಂತ, ಶ್ರೀಗಂಧವನ್ನು ಸಂಗ್ರಹಿಸಿದ್ದ ಮನೆಯ ಮೇಲೆ ಚಿತ್ರಹಳ್ಳಿ ಪೊಲೀಸ್ ದಾಳಿ ನಡೆಸಿ ಅಪಾರ ಪ್ರಮಾಣದ ಶ್ರೀಗಂಧ ಹಾಗೂ ಆನೆ ದಂತವನ್ನು ವಶಪಡಿಸಿಕೊಂಡಿದ್ದಾರೆ.
ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿರುವ ಮನೆಯ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮನೆಯನ್ನು ಪರಿಶೀಲಿಸಿದಾಗ ಅಪಾರ ಪ್ರಮಾಣದ ಶ್ರೀಗಂಧ ಹಾಗೂ ಆನೆ ದಂತ ಸಿಕ್ಕಿದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ.ತರೀಕೆರೆ ಮೂಲದ ಚಂದ್ರಶೇಖರ್ ಹಾಗೂ ತಮಿಳುನಾಡು ಮೂಲದ ಕಲೀಲ್ ಬಂಧಿತ ಆರೋಪಿಗಳಿಗಿದ್ದಾರೆ.
ಬುಧವಾರ ಸಂಜೆಯ ದಾಳಿ ನಡೆಸಿದ್ದು, ಗುರುವಾರ ಹಾಗೂ ಶುಕ್ರವಾರ ಪರಿಶೀಲನೆ ನಡೆಸಿದ್ದಾರೆ. ಇಂದು ಆ ಎಲ್ಲಾ ವಸ್ತುಗಳನ್ನು ಮಾಜೂರು ಮಾಡಿದ್ದು, ಚಿತ್ರದುರ್ಗ ಪೊಲೀಸ್ ಕಚೇರಿಗೆ ಅಧಿಕಾರಿಗಳ ತಂಡ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ತಿಳಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಕ್ರಮವಾಗಿ ಮನೆಯಲ್ಲಿ ಆನೆ ದಂತ, ಶ್ರೀಗಂಧವನ್ನು ಸಂಗ್ರಹಿಸಿದ್ದ ಮನೆಯ ಮೇಲೆ ಚಿತ್ರಹಳ್ಳಿ ಪೊಲೀಸ್ ದಾಳಿ ನಡೆಸಿ ಅಪಾರ ಪ್ರಮಾಣದ ಶ್ರೀಗಂಧ ಹಾಗೂ ಆನೆ ದಂತವನ್ನು ವಶಪಡಿಸಿಕೊಂಡಿದ್ದಾರೆ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments