ಕೂಡ್ಲಿಗಿ : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ರವರು ಭಾಗವಹಿಸಿ ಮಾತನಾಡಿ, ತಾಲೂಕಿನ ಹಳ್ಳಿಗಳಲ್ಲಿ ಅಡೆತಡೆ ಇಲ್ಲದೆ ಸಣ್ಣಪುಟ್ಟ ಅಂಗಡಿಗಳಲ್ಲಿ , ಚಿಲ್ಲರೆ ಚಹಾದ ಅಂಗಡಿ ಸೇರಿದಂತೆ ಹಲವಾರು ಮನೆಗಳಲ್ಲಿ ಅಕ್ರಮ ಮಧ್ಯ ಮಾರಾಟ ನಡೆಯುತ್ತಿರುವುದರಿಂದ ಪ್ರೌಢಾವಸ್ಥೆಯ ಮಕ್ಕಳು ಕುಡಿತ ಚಟಕ್ಕೆ ಬಿದ್ದಿದ್ದಾರೆ. ಆದ್ದರಿಂದ ಗ್ರಾಮೀಣ ಭಾಗದ ಸಾರ್ವಜನಿಕರ ದೂರಿನ ಅನ್ವಯ ಪತ್ರಿಕಾ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಪತ್ರಿಕೆ ಶಾಸಕರು ತೋರಿಸುತ್ತಿದ್ದಂತೆ ಸಚಿವರು ವಿಚಲಿತರಾದರು. ಮಧ್ಯ ಸೇವನೆಗೆ ಸಣ್ಣ ವಯಸ್ಸಿನ ಯುವಕರು ಚಟಕ್ಕೆ ಬಿದ್ದಿದ್ದಾರೆ ಎಂದರೆ ಏನು ಅರ್ಥ? ನೀವು ಏನು ಮಾಡುತ್ತಿದ್ದೀರಿ? ಎಂದು ಅಬಕಾರಿ ಅಧಿಕಾರಿಗಳ ಮೇಲೆ ಸಿಡಿಮಿಡಿಕೊಂಡರು. ಪಕ್ಕದಲ್ಲಿದ್ದ ಜಿಲ್ಲಾಧಿಕಾರಿಗಳಿಗೆ ಹಾಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಬಗ್ಗೆ ಗ್ರಾಮೀಣ ಭಾಗದಲ್ಲಿ ಕಠಿಣ ಕ್ರಮ ವಹಿಸುವಂತೆ ಹಾಗೂ ಅಕ್ರಮ ಮದ್ಯದಲ್ಲಿ ಭಾಗಿಯಾಗಿರುವ ಅಂಗಡಿಗಳ ಲೈಸನ್ಸ್ ರದ್ದು ಮಾಡಲು ಖಡಕ್ ಸೂಚನೆ ನೀಡಿದರು & ದಿನಾಲು ನನಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತೆ ಅಬಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಶಾಸಕ: ಡಾ||.ಶ್ರೀನಿವಾಸ್. ಎನ್ ಟಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments