ಅಕ್ರಮ ಮದ್ಯ ಮಾರಾಟ ಜೋರು. ಕೆಅರ್ ಎಸ್ ಸೈನಿಕರಿಂದ ರಿಯಾಲಿಟಿ ಚೆಕ್- ಅಪ್ರಪ್ತ ಬಾಲಕರಿಂದ ಅಕ್ರಮದ್ಯ ಮಾರಾದಲ್ಲಿ ತೊಡಗಿಸಿಕೊಂಡಿರುವುದು ಬಯಲು ಕಣ್ಣು ಮುಚ್ಚಿಕುಳಿತ ಅಬಕಾರಿ ಅಧಿಕಾರಿಗಳು.

by | 11/10/23 | ತನಿಖೆ ವರದಿ

ಅಪ್ತಪ್ತ ಬಾಲಕ ಮದ್ಯ ಬಾಡಲು ವಿತರಣೆ ವೀಡಿಯೋ ವೈರಲ್.


ಚಳ್ಳಕೆರೆ ಅ.11. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ಗ್ರಾಮೀಣ ಭಾಗದ, ಚಿಲ್ಲರೆ, ಚಹಾದ ಅಂಗಡಿ, ಸೇರಿದಂತೆ ಹಲವು ಮನೆಗಳಲ್ಲೂ ಸಹ ಕದ್ದುಮುಚ್ಚಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ. ಅದರಲ್ಲೂ ಕೆ ಆರ್ ಪಕ್ಷ ರಿಯಾಲಿಟಿ ಚೆಕ್ ನಲ್ಲಿ ಅಪ್ರಾಪ್ತ ಬಾಲಕನೊಬ್ಬ ಮದ್ಯದ ಬಾಟಲು ತಂದುಕೊಡುತ್ತಿರುವ ವೀಡಿಯೋ ವೈರಲ್ ಆಗಿದೆ.

ತಾಲೂಕಿನಲ್ಲಿ ಮಳೆ ಬೆಳೆಯಿಲ್ಲದೆ ದುಡಿಯುವ ಕೈಗಳಿಗೆ ಕೆಲಸ ಇಲ್ಲದೆ.ರೈತರು ಬೆಳೆದ ಬೆಳೆಗಳು ಒಣಗಿ ಹೋಗಿದ್ದು ಬೆಳೆದ ಅಲ್ಪಸ್ವಲ್ಪ ಬೆಳೆಗಳಿಗೆ ಸೂಕ್ತ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನಡುವೆಯೂ ವಿದ್ಯುತ್ ಸಮಸ್ಯೆಯಿಂದ ಕುಡಿತುವ ನೀರಿಗೂ ಪರದಾಡುವ ಪರಿಸ್ಥಿತಿಯಲ್ಲಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯಮಾರಾಟ ಜೋರಾಗಿದೆ. ಜನರು ಆರ್ಥಿಕ ಸಂಕಷ್ಟದಲ್ಲಿದ್ದರೂ ಕೆಲವರು ಗ್ರಾಮದಲ್ಲಿಯೇ ಸುಲಭವಾಗಿ ಸಿಗುವ ಮದ್ಯ ಸೇವನೆಯಿಂದ ಇದರ ಚಟಕ್ಕೆ ಬಿದ್ದಿದ್ದಾರೆ. ಇದರಿಂದ ಮತ್ತಷ್ಟು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ.

ಗ್ರಾಮೀಣ ಭಾಗದ ಕೆಲವು ಗೂಡಂಗಡಿ, ಸಣ್ಣಪುಟ್ಟ ಮಾಂಸಾಹಾರಿ ಹೋಟೆಲ್‌ಗ‌ಳು, ಕೆಲವರು ಮನೆಗಳಲ್ಲಿ, ಅಂಗಡಿಗಳೂ ಸಹ ಮದ್ಯ ಮಾರಾಟ ಕೇಂದ್ರವಾಗಿ ಮಾರ್ಪಟ್ಟಿದೆ. ನಗರದ ವೈನ್‌ಶಾಪ್‌ ಗಳಿಂದ ಖರೀದಿಸಿ 10ರಿಂದ 20 ರೂ. ಹೆಚ್ಚುವರಿ ದರ ವಿಧಿಸಿ ಮಾರಾಟ ಸಹ ಮಾಡುತ್ತಾರೆ. ಮದ್ಯ ಮಾರಾಟಕ್ಕೆ ಕೊನೆ ಇಲ್ಲ: ಕೆಲವರು ಮನೆಗಳಲ್ಲಿ ತೋಟ, ಕೊಟ್ಟಿಗೆ, ನೆಲದೊಳಗೆ ಹೊಂಡ ಮಾಡಿ, ಮನೆಯ ಅಟ್ಟ, ಶೌಚಗೃಹಗಳಲ್ಲೂ ಮಾರಾಟ ಮಾಡಲು ಮದ್ಯ ಶೇಖರಿಸಿ ಇಡುತ್ತಾರೆ. ಈ ಬಗ್ಗೆ ಗ್ರಾಮೀಣ ಭಾಗದಲ್ಲಿ ಕಠಿಣ ಕ್ರಮ ವಹಿಸದ ಪೊಲೀಸ್‌ ಮತ್ತು ಅಬಕಾರಿ ಇಲಾಖೆ ಆಗಾಗ ದಾಳಿ ನಡೆಸಿ ಪ್ರಕರಣ ದಾಖಲಿಸಿದರೂ ಅಕ್ರಮ ಮದ್ಯ ಮಾರಾಟಕ್ಕೆ ಕೊನೆ ಇಲ್ಲದಂತಾಗಿದೆ ಎಂಬುದು ಗ್ರಾಮೀಣ ಭಾಗದ ಮಹಿಳೆಯರ ಅಳಲು.
ಅಪ್ರಪ್ತ ಬಾಲಕನಿಂದ ಮದ್ಯಮಾರಾಟ.

ತಾಲೂಕಿನ ನಾರಾಯಣಪು.ಕೋನಿಗರಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕೆ ಆರ್ ಎಸ್ ಪಕ್ಷದ ಸೈನಿಕರು ಅಕ್ರಮ ಮದ್ಯಮಾರಾಟದ ಬಗ್ಗೆ ರಿಯಾಲಿಟಿ ಚೆಕ್ ಮಾಡುವಾಗ ನಾರಾಯಾಣಪುರ ಗ್ರಾಮದ ಗೇಟ್ ಕಿರಾಣಿ ಅಂಗಡಿಯಲ್ಲಿ ಮದ್ಯ ಖರೀದಿ ನೆಪದಲ್ಲಿ ಡ್ರಿಕ್ಸ್ ಯಾವುದಿದೆ ಎಂದಾಗ ಮಹಿಳೆ ಕೆಲವು ಬ್ರಾಂಡ್ ಗಳ ಹೆಸರೇಳುತ್ತಾರೆ ಬೆಲೆಯೂ ಹೇಳುತ್ತಾರೆ ಕೊಡಿ ಎಂದು ಕೆಅರ್ ಎಸ್ ಪಕ್ಷದ ಸೈನಿಕರು ಕೇಳಿದಾಗ ಅಪ್ರಪ್ತ ಬಾಲಕೊಬ್ಬ ಬೀಯರ್ ಬಾಟಲಿ ತಂದು ಕೆಆರ್ ಎಸ್ ಪಕ್ಷದ ಸೈನಿಕರಿಗೆ ನೀಡುವ ವೀಡಿಯೋ ವೈರಲ್ ಆಗಿದೆ. ಅಪ್ರಾಪ್ತ ವಯಸ್ಕ ವ್ಯಕ್ತಿಗೆ ಮದ್ಯಮಾರಾಟ ಹಾಗೂ ನೀಡುವುದು ಅಪರಾದ ಎಂದು ನೀತಿ ಹೇಳುವ ಕಾನೂನು ಹಲ್ಲು ಕಿತ್ತಂತಾಗಿದ್ದು ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಕಾನೂನು ಬಾಹಿರ ಅದರಲ್ಲೂ ಅಪ್ರಪ್ತ ಮಕ್ಕಳನ್ನು ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿಸಿಕೊಳ್ಳುತ್ತಿರುವುದು ದುರಂತದ ಸಂಗತಿಯಾಗಿದೆ. ಅಪ್ರಪ್ತ ವ್ಯಕ್ತಿಗೆ ಆಲ್ಕೊಹಾಲ್ಯುಕ್ತ ಪಾನೀಯವನ್ನು ಮಾರಾಟ ಮಾಡುವ ಯಾವುದೇ ವ್ಯಕ್ತಿ ಅಥವಾ ಮಾರಾಟಗಾರ; ಅಥವಾ ಸೆಕ್ಷನ್ 9(3)ಗೆ ವಿರುದ್ಧವ ಮಾರಾಟ ಮಾಡುವ ವ್ಯಕ್ತಿ; ಅಥವಾ ಸೆಕ್ಷನ್ 9(4) ಗೆ ವಿರುದ್ಧವಾಗಿ ಸಕ್ಕರೆಯ ಪಾನೀಯಗಳು ಮತ್ತು ಮದ್ಯದ ವ್ಯಾಪಾರ ಮಾಡುವ ವ್ಯಕ್ತಿ ಇದರ ಹೊರತಾಗಿ, ದೇಶದ ಪ್ರತಿಯೊಂದು ರಾಜ್ಯವು ಮದ್ಯದ ಅಕ್ರಮ ಪೂರೈಕೆ ಮತ್ತು ಅಪ್ರಾಪ್ತ ವಯಸ್ಕರಲ್ಲಿ ಮದ್ಯಪಾನವನ್ನು ಉತ್ತೇಜಿಸುವ ಇತರ ಚಟುವಟಿಕೆಗಳನ್ನು ಕಡಿಮೆ ಮಾಡಲು ದಂಡ ಮತ್ತು ದಂಡವನ್ನು ವಿಧಿಸುವ ತನ್ನದೇ ಆದ ಕಾರ್ಯವಿಧಾನವನ್ನು ಹೊಂದಿದೆ ಆದರೆ ಅಬಕಾರಿ ಅಧಿಕಾರಿಗಲಕು ಮಾತ್ರ ಮೌನವಹಿಸಿರುವುದು ಸಾರ್ವಜನಿರಲ್ಲಿ ಅನುಮಾನಕ್ಕೆ ಎಡೆ ಮಾಡಿದೆ

. ಈಗಲಾದರೂ ಅಕ್ರಮ ಮದ್ಯ ಮಾರಾಟದಲ್ಲಿ ಅಪ್ರಪ್ತ ಬಾಲಕರನ್ನು ತೊಡಗಿಸಿಕೊಂಡವರ ಮೇಲೆ ಯಾವ ಕ್ರಮ ಕೈಗೊಳ್ಳುವರೋ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page