ಜನಧ್ವನಿ ವಾರ್ತೆ ಮಾ.17
ಬೊಮ್ಮಂದ್ರ ಗ್ರಾಮ
ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಕಚಿತ ಮಾಹಿತ ಮೇರೆಗೆ ಮಾಲು ಸಹಿತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದು ಪ್ರಕಣ ದಾಖಲಿಸಿಕೊಂಡಿದ್ದಾರೆ.
ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ಗೆಜ್ಜಪ್ಪ (65) ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿ ಮಾಹಿತಿ ಮೇರೆಎ ಪಿಎಸ್ ಐ ಪ್ರಮೀಳಮ್ಮ ಹಾಗೂ ಸಿಬ್ಬಂದಿ ದಾಳಿ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಿ.ಉಪ್ಪಾರಹಟ್ಟಿ.
ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಪಂ ವ್ಯಾಪ್ತಿಯ ಡಿ ಉಪ್ಪಾರಹಟ್ಟಿ ಗ್ರಾಮದಲ್ಲಿ ಕಿರಾಣಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹೆಚ್.ಸಿ ಗಂಗಮ್ಮ ಹಾಗೂ ಸಿಬ್ಬಂದಿ ದಾಳಿ ನಡೆಸಿ ಶಿವಣ್ಣ(45) ಮಾಲು ಸಮೇತ ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಕೊಂಡಿದ್ದಾರೆ.
ಚಳ್ಳಕರೆ ನಗರ.
ಚಳ್ಳಕರೆ ನಗರದ ಮಹಾದೇವಿ ರಸ್ತೆಯಿಂದ ಪಾವಗಡ ರಸ್ತೆಗೆ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ಸತೀಶ್ ನಾಯ್ಕ ಹೆಚ್ ಸಿ ವೆಂಕಟೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ತಾಲೂಕಿನ ಕುರುಮರಡಿಕೆರೆ ಗ್ರಾಮದ ಮಂಜುನಾಥ(25), ಮುಸ್ಟಲಗುಮ್ಮಿ ಗ್ರಾಮದ ಮಾರುತಿ(25) ಅಕ್ರಮ ಮದ್ಯವನ್ನು ವಶಕ್ಕೆ ಪಡೆದು ಚಳ್ಳಕೆರೆ ರಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೋಪನಹಳ್ಳಿ
ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ರೈತರ ಜಮೀನೊಂದರಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ಸಿಹೆಚ್ ಸಿ ವೆಂಕಟೇಟ್ , ಮಂಜುನಾಥ ಮಡಿಕೆ ದಾಳಿ ನಡೆಸಿ ಇಸ್ಪೀಟ್ ಎಲೆ, 1500 ರೂ ಹಾಗೂ ಇಸ್ಪೀಟ್ ಆಟದಲ್ಲಿ ತೊಡಗಿದ್ದ ನಾಲ್ಕು ಜನರನ್ನು ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಕ್ರಮ ಮದ್ಯ ಮಾರಾಟ ಹಾಗೂ ಇಸ್ಪೀಟ್ ಅಡ್ಡೆಮೇಲೆ ಪೊಲೀಸರು ದಾಳಿ ಪ್ರಕರಣ ದಾಖಲು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments