
ಚಳ್ಳಕೆರೆ ಜನಧ್ವನಿ ವಾರ್ತೆ ಮಾ. 5.
ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ ಸಹಿತ ಆರೋಪಿಯನ್ನು ಅಬಕಾರಿ ಅಧಿಕಾರಿಗಳು ಬಂದಿಸಿದ್ದಾರೆ.
ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಪಂ ವ್ಯಾಪ್ತಿಯ ಡಿ.ಉಪ್ಪಾರಹಟ್ಟಿ ಗ್ರಾಮದ ಮಹಾಲಿಂಗ(26) ಟಿವಿಎಸ್ ಎಕ್ಸ್ಲ್ ನಲ್ಲಿ 7200ಲೀಟರ್ ಮದ್ಯವನ್ನು ಸಾಗಾಟ ಮಾಡುವಾಗ ಪಾವಗಡ ರಸ್ತೆಯ ಪೆಟ್ರೋಲ್ ಬಂಕ ಬಳಿ ಅಬಕಾರಿ ಉಪನಿರೀಕ್ಷಕರು ಸಿಬ್ಬಂದಿಯೊಂದಿಗೆ ಗಸ್ತು ತಿರುವಾಗ ಖಚಿತ ಮಾಹಿತಿ ಮೇರೆಗೆ ತಪಾಸಣೆಮಾಡಿದಾಗ ಅಕ್ರಮ ಮದ್ಯವನ್ನು ಹೊಂದಿ ಯಾವುದೇ ರಹದಾರಿ/ ಪರವಾನಗಿ ಇಲ್ಲದೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದುದ್ದು ಕಂಡುಬಂದಿದ್ದು, ಕರ್ನಾಟಕ ಅಬಕಾರಿ ಕಾಯಿದೆ ೧೯೬೫ ರ ಕಾಯ್ದೆಯ ಕಲಂ ರನ್ವಯ ಶಿಕ್ಷಾರ್ಹ ಅಪರಾಧವಾಗಿರುವುದರಿಂದ. ಈ ಮೇಲೆ ವಿವರಿಸಲಾದ ವಾಹನ ಮತ್ತು ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಸೂಕ್ತ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
0 Comments