ಅಕ್ರಮ ಮಧ್ಯ ಮಾರಾಟ ತಡೆಗಟ್ಟುವಂತೆ ಒತ್ತಾಯಿಸಿ ಅಬಕಾರಿ ಇಲಾಖೆ ಮುಂದೆ ರೈತ ಸಂಘ ಹಾಗೂ ಗ್ರಾಮಸ್ಥರ ಪ್ರತಿಭಟನೆ.

by | 02/01/24 | ಪ್ರತಿಭಟನೆ

ಚಳ್ಳಕೆರೆ: ತಾಲೂಕಿನ ತಳಕು ಹೋಬಳಿಯ ಕಾಲುವೆಹಳ್ಳಿ ಗೌಡರ ಹಟ್ಟಿ ಯಾದಲಗಟ್ಟೆ ಕ್ಯಾತಗೊಂಡನಹಳ್ಳಿ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟವನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಪಿ ಭೂತಯ್ಯನವರ ನೇತೃತ್ವದಲ್ಲಿ ರೈತ ಸಂಘ ಮತ್ತು ಮಹಿಳಾ ಸಂಘಗಳು ಹಾಗೂ ಗ್ರಾಮಸ್ಥರು ಅಬಕಾರಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ರೈತ ಮುಖಂಡ ಕೆಪಿ ಬೂತಯ್ಯ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುವವರು ಹೆಚ್ಚಾಗುತ್ತಿದ್ದು ಈ ಅಕ್ರಮ ಮಧ್ಯವನ್ನು ಸೇವಿಸಿ ಯುವಜನತೆ ಕೂಲಿ ಮಾಡಿದ ಹಣವನ್ನೆಲ್ಲ ಮಧ್ಯಪಾನಕ್ಕೆ ಖರ್ಚು ಮಾಡುತ್ತಿದ್ದು ಹೆಂಡತಿ ಮಕ್ಕಳನ್ನು ದಿನನಿತ್ಯ ಹಿಂಸಿಸುತ್ತಿದ್ದಾರೆ ಮನೆಗಳಲ್ಲಿ ನೆಮ್ಮದಿ ಇಲ್ಲದೆ ಹೆಂಡತಿ ಮಕ್ಕಳು ಉಪವಾಸವಿರುವ ಪರಿಸ್ಥಿತಿ ಬಂದೊದಗಿದೆ ಇಂತಹ ದುಷ್ಚಟಕ್ಕೆ ವಿದ್ಯಾರ್ಥಿಗಳು ಸಹ ಬಲಿಯಾಗುತ್ತಿದ್ದು ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸುತ್ತಿದ್ದಾರೆ ಕೆಲವರು ಕುಡಿತದ ಚಟಕ್ಕೆ ಬಿದ್ದು ಕೂಲಿ ಹೋಗದೆ ನಿರುದ್ಯೋಗಿಗಳಾಗಿ ಆರೋಗ್ಯವನ್ನು ಹದಗೆಡಿಸಿಕೊಳ್ಳುತ್ತಿದ್ದಾರೆ ಇದನ್ನು ಮನಗಂಡು ಗ್ರಾಮಗಳಲ್ಲಿ ಮಧ್ಯ ಮಾರಾಟ ಮಾಡದಂತೆ ಪಂಚಾಯಿತಿ ಮುಖಂಡರು ಮತ್ತು ಗ್ರಾಮದ ಮುಖ್ಯಸ್ಥರು ರಾಜಿ ಪಂಚಾಯತಿ ನಡೆಸಿ ತಿಳುವಳಿಕೆ ಹೇಳಿ ಎಚ್ಚರಿಕೆ ನೀಡಿದರೂ ಬೆಲೆ ಕೊಡದೆ ಉದಾಸೀನ ಮಾಡಿ ಕದ್ದು ಮುಚ್ಚಿ ಮಧ್ಯ ಮಾರಾಟ ಮಾಡುತ್ತಿದ್ದಾರೆ ಆದ್ದರಿಂದ ಅಬಕಾರಿ ಇಲಾಖೆ ಅಧಿಕಾರಿಗಳು ಕೂಡಲೇ ಇಂತಹ ಅಕ್ರಮ ಮಧ್ಯ ಮಾರಾಟಗಾರರ ಮೇಲೆ ದಾಳಿ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಅಬಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಅಬಕಾರಿ ನಿರೀಕ್ಷಕ ನಾಗರಾಜ್ ಮಾತನಾಡಿ ಅಕ್ರಮ ಮಧ್ಯ ಮಾರಾಟ ಮಾಡುವುದು ಕಾನೂನಿನ ರೀತಿಯಲ್ಲಿ ಅಪರಾಧವಾಗಿದ್ದು ಕೂಡಲೇ ಈ ಗ್ರಾಮಗಳಿಗೆ ಭೇಟಿ ನೀಡಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಪಾಲಣ್ಣ ರಂಗಸ್ವಾಮಿ ಬಿ ಮಹಾಂತೇಶ ಕುಮಾರ ಗ್ರಾಮ ಪಂಚಾಯತಿ ಸದಸ್ಯರಾದ ತಿಪ್ಪಕ್ಕ ತಿಪ್ಪೇಸ್ವಾಮಿ ಆಶಾ ಶಿಲ್ಪ ಪವಿತ್ರ ಬಾಲಣ್ಣ ಲಕ್ಷ್ಮಿ ದೇವಿ ಜಯಲಕ್ಷ್ಮಿ ಓಬಳಮ್ಮ ಜಯಮ್ಮ ಸರಸ್ವತಿ ಸಿದ್ದಮ್ಮ ಶಿವಮ್ಮ ಲಕ್ಷ್ಮಕ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page