ಅಗತ್ಯ ಸರಕಾರಿ ಸೇವೆಗಳನ್ನು ಪಡೆಯಲು ನಗರದ ಕಚೇರಿಗಳಿಗೆ ಅಲೆದಾಡುವುದನ್ನು ಬಿಡಿ ನಿಮ್ಮ ಗ್ರಾಮದ ಬಾಪೂಜಿ ಸೇವಾಕೇಂದ್ರದಲ್ಲಿ ಅಗತ್ಯ ದಾಖಲೆಗಳನ್ನು ಪಡೆಯುವಂತೆ ತಹಶೀಲ್ದಾರ್ ರೇಹಾನ್ ಪಾಷ.

by | 19/01/24 | ಜನಧ್ವನಿ

ಚಳ್ಳಕೆರೆ ಜನಧ್ವನಿ ವಾರ್ತೆ ಜ.19.ಗ್ರಾಮೀಣ ಭಾಗದ ಜನರು ಅನಾವಶ್ಯಕವಾಗಿ ಪಹಣಿ ಹಾಗೂ ಇತರೆ ದಾಖಲೆಗಳನ್ನು ಪಡೆಯಲು ನಗರಕ್ಕೆ ಅಲೆದಾಡಾದೆ ನಿಮ್ಮ ಗ್ರಾಪಂ ಕಚೇರಿಯ ಬಾಪೂಜಿ ಸೇವಾ ಕೇಂದ್ರದಲ್ಲಿ ಪಡೆಯುವಂತೆ ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.


ತಾಲೂಕಿನ 40 ಗ್ರಾಮಪಂಚಾಯಿತಿ ಕೇಂದ್ರಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಗ್ರಾಮೀಣ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಈಗಾಗಲೇ ಒದಗಿಸುತ್ತಿರುವ 28 ಸೇವೆಗಳ ಜೊತೆಗೆ ನಾಡ ಕಚೇರಿಗಳ ಅಟಲ್ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ ಇನ್ನೂ 44 ಸೇವೆಗಳನ್ನು ಪಡೆದುಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅನುವು ಮಾಡಿಕೊಟ್ಟಿದೆ.
ಬಾಪೂಜಿ ಕೇಂದ್ರಗಳಲ್ಲಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಿದ್ದು,ಆಧಾರ್ ಸೇವೆಗಳ ಸೌಲಭ್ಯವನ್ನು ಹೊಂದಬಹುದಾಗಿದೆ.
ಪಹಣಿ, ಸಾಮಾಜಿಕ ಭದ್ರತಾಪಿಂಚಿಣಿ ಸೇರಿದಂತೆ ವಿವಿಧ ಸರಕಾರಿ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ನಗರ ಪ್ರದೇಶದ ಕಚೇರಿಗಳಿಗೆ ಅಲೆಯುತ್ತಿರುವುದು ಕಂಡು ಬರುತ್ತಿದ್ದು 50 ರೂ ದಾಖಲೆ ಪಡೆಯಲು 200 ರೂ ಗಳನ್ನು ಖರ್ಚು ಮಾಡಿಕೊಳ್ಳುವ ಜತೆಗೆ ಸಮಯವೂ ಸಹ ವ್ಯರ್ಥವಾಗುತ್ತದೆ ಆದ್ದರಿಂದ ನಿಮ್ಮ ಗ್ರಾಪಂ ವ್ಯಾಪ್ತಿಯ ಗ್ರಾಮಪಂಚಾಯಿತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಗತ್ಯ ಸೇವೆಗಳನ್ನು ಪಡೆಯುವಂತೆ ಗ್ರಾಮೀಣ ಭಾಗದ ಜನರಲ್ಲಿ ಸಾರ್ವಜನಿಕರಿಗೆ ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page