ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಉಪವಿಭಾಗಧಿಕಾರಿ‌ ಎಂ.ಕಾರ್ತಿಕ್ ಭೇಟಿ, ಪರಿಶೀಲನೆ

by | 28/03/24 | ಲೋಕಸಭಾ ಚುನಾವಣೆ-2024

ಚಿತ್ರದುರ್ಗ ಮಾರ್ಚ್.28:

ಸೂಕ್ಷ್ಮ ಮತ್ತು ಕಡಿಮೆ ಮತದಾನ ದಾಖಲಾಗಿರುವ ಚಿತ್ರದುರ್ಗ ನಗರದ 7 ಮತಗಟ್ಟೆಗಳಿಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಗುರುವಾರ ಭೇಟಿ ನೀಡಿ ಪರಿಶೀಲನೆ ನೆಡೆಸಿದರು.

ಈ ವೇಳೆ ಸ್ಥಳೀಯರನ್ನು ಭೇಟಿ ಮಾಡಿ, ಮುಂಬರುವ ಲೋಕಸಭಾ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ತಪ್ಪದೇ ಎಲ್ಲರೂ ಮತದಾನ ಮಾಡಬೇಕು. ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾವುದು ಭಯ ಹಾಗೂ ಆತಂಕಕ್ಕೆ ಒಳಗಾಗದೆ ಮತದಾನ ಮಾಡುವಂತೆ ಸ್ಥಳೀಯರನ್ನು ಪ್ರೇರೇಪಿಸಿದರು.

ಬುರುಜನಹಟ್ಟಿಯ‌ ಹಿರಿಯ ಪ್ರಾಥಮಿಕ ಪಾಠಶಾಲೆ, ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢ ಶಾಲೆ, ನೆಹರುನಗರದ ಮಿಲ್ಲತ್ ಸಂಯುಕ್ತ ಪಿ.ಯು. ಕಾಲೇಜ್, ಉಮ‌ರ್ ಮಸೀದಿ ಹತ್ತಿರ ರಾಮದಾಸ ಕಾಂಪೌಂಡ್ ಇಲ್ ಮುಲ್ ಹುದಾ ಇಸ್ಲಾಮಿಯಾ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಜೆ.ಜೆ,ಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ, ಸಿ.ಕೆ.ಪುರ ಬಡಾವಣೆಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಪಾಠಶಾಲೆ,‌ಐ.ಯು.ಡಿ.ಪಿ, ಲೇ ಔಟ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾಕ್ಟರ್ ನಾಗವೇಣಿ, ನಗರ ಸಭೆ ಆಯುಕ್ತೆ ಎಂ.ರೇಣುಕಾ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page