ಅತ್ತೆ-ಸೊಸೆ ಸಮಾಲೋಚನಾ ಸಭೆಯಲ್ಲಿ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಕರೆ ಚಿಕ್ಕ ಕುಟುಂಬದ ಆದರ್ಶ ಪಾಲಿಸಲು ಸಲಹೆ

by | 15/06/24 | ಸುದ್ದಿ

ಚಿತ್ರದುರ್ಗ ಜೂನ್15:
ಸುಖಕರ ಕುಟುಂಬ ನಿಮ್ಮದಾಗಲು ಅತ್ತೆ-ಸೊಸೆಯರು ಯೋಚಿಸಿ ನಿರ್ಧಾರಕ್ಕೆ ಬನ್ನಿ. ಚಿಕ್ಕ ಕುಟುಂಬದ ಆದರ್ಶಗಳನ್ನು ಪಾಲಿಸುವಂತೆ ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಕರೆ ನೀಡಿದರು.
ಇಲ್ಲಿನ ಬುದ್ಧನಗರದ ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯ ರಾಜೇಂದ್ರ ನಗರದ ಅಂಗನವಾಡಿ “ಎ’ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜನಸಂಖ್ಯೆ ಸ್ಥಿರತೆ ಕಾಪಾಡಲು ಕುಟುಂಬ ಕಲ್ಯಾಣ ಯೋಜನೆ ಯಶಸ್ವಿ ಅನುಷ್ಟಾನಕ್ಕಾಗಿ ಅತ್ತೆ ಸೊಸೆಯರ ಸಮಾಲೋಚನಾ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಜೂನ್ 07 ರಿಂದ ಜುಲೈ 07 ನೇ ರವರೆಗೆ ಜನಸಂಖ್ಯೆ ಸ್ಥಿರತೆ ಮಾಸಿಕವನ್ನು ಎರಡು ಪಾಕ್ಷಿಕದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸರ್ಕಾರದ ಮಾರ್ಗಸೂಚಿಯಂತೆ ನಡೆಸಲಾಗುತ್ತದೆ. ಜೂನ್ 07 ರಿಂದ ಜೂನ್ 20 ರ ತನಕ ದಂಪತಿ ಸಂಪರ್ಕ ಪಾಕ್ಷಿಕ ಇದರಲ್ಲಿ ಅರ್ಹ ದಂಪತಿಗಳ ಮನೆ ಮನೆ ಭೇಟಿ, ಆರೋಗ್ಯ ಇಲಾಖೆಯಲ್ಲಿ ದೊರೆಯುವ ಕುಟುಂಬ ಯೋಜನೆಗಳ ಪರಿಚಯ, ದಂಪತಿ ಸಂಪರ್ಕ ಸಭೆ, ತಾಯಂದಿರ ಸಭೆ, ಗುಂಪು ಸಭೆ ಮತ್ತು ಅತ್ತೆ-ಸೊಸೆಯೊಂದಿಗೆ ಸಮಾಲೋಚನಾ ಸಭೆಗಳನ್ನ ನಡೆಸಿ ಜನಸಂಖ್ಯೆ ಸ್ಥಿರತೆ ಶಿಕ್ಷಣ ನೀಡುವುದು, ಕುಟುಂಬ ಯೋಜನೆಗಳ ಅನುಷ್ಟಾನಕ್ಕೆ ಮನ ಒಲಿಸುವುದಾಗಿದೆ ಎಂದರು.
ಜೂನ್ 20 ರಿಂದ ಜುಲೈ 07 ವಿಶ್ವ ಜನಸಂಖ್ಯೆ ದಿನದವರೆಗೆ ಸೇವಾ ಪಾಕ್ಷಿಕ ಕುಟುಂಬ ಯೋಜನೆ ಸೇವೆಗಳನ್ನು ಒದಗಿಸುವುದಾಗಿರುತ್ತದೆ. ಈ ದಿನದ ಅತ್ತೆ ಸೊಸೆಯರಲ್ಲಿ ಕೇಳಿಕೊಳ್ಳುವುದೇನೆಂದರೆ ಅಂತರದ ಹೆರಿಗೆ ಅಂದರೆ ಒಂದು ಮಗುವಿಗೂ ಎರಡನೇ ಮಗುವಿಗೂ ಕನಿಷ್ಠ 5 ವರ್ಷದ ಅಂತರವನ್ನು ಕಾಪಾಡಿಕೊಳ್ಳುವುದು. ಇದಕ್ಕಾಗಿ ಆರೋಗ್ಯ ಇಲಾಖೆಯಲ್ಲಿ ವಂಕಿ ಅಳವಡಿಕೆ, ನುಂಗುವ ಮಾತ್ರೆ, ನಿರೋಧ್ ಬಳಕೆ ಡಿಂಪಾ ಚುಚ್ಚು ಮದ್ದು, ಟುಬ್ಯಕ್ಟಮಿ, ಎನ್.ಎಸ್.ವಿ.ಶಸ್ತ್ರಚಿಕಿತ್ಸೆ ಸೇವೆಗಳು ಉಚಿತವಾಗಿ ಲಭ್ಯವಿದೆ. ಇವುಗಳ ಉಪಯೋಗ ಪಡೆದುಕೊಳ್ಳಿ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಕುಟುಂಬ ಯೋಜನೆಯಲ್ಲಿ ಪುರುಷರ ಸಹ-ಭಾಗಿತ್ವಕ್ಕಾಗಿ ಅತ್ತೆ ಸೊಸೆಯರು ಒಮ್ಮತದ ತೀರ್ಮಾನಕ್ಕೆ ಬನ್ನಿ. ಮಕ್ಕಳನ್ನು ನವಮಾಸ ಹೊಟ್ಟೆಯಲ್ಲಿ ತುಂಬಿಕೊಂಡು, ಹೆರಿಗೆನೋವನ್ನು ಸಹಿಸಿಕೊಂಡು, ಹಾಲುಣಿಸುವ ಜವಾಬ್ದಾರಿ ಪಡೆದು ನಂತರ ಮಕ್ಕಳ ಲಸಿಕೆ ಲಲನೆ ಪಾಲನೆ ಸಂಸಾರದ ಪೂರ್ಣಹೊರೆಯನ್ನು ಮಹಿಳೆಯರೇ ನಿಭಾಯಿಸುವಾಗ ಕುಟುಂಬ ಯೋಜನೆ ಅನುಷ್ಟಾನಕ್ಕೆ ಪುರುಷರು ಏಕೆ ಭಾಗವಹಿಸಬಾರದು. ಪುರುಷರಿಗಾಗಿ ಹೊಲಿಗೆ ಇಲ್ಲದ, ನೋವೇ ಇಲ್ಲದ ಪುರುಷತ್ವಕ್ಕೆ ಯಾವುದೇ ತೊಂದರೆ ಇಲ್ಲದ ನೋ ಸ್ಕಾಲ್ ಪೆಲ್ ವ್ಯಾಸೆಕ್ಟಮಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅತ್ತೆಸೊಸೆಯರು ಮನೆಯಲ್ಲಿ ಒಟ್ಟಿಗೆ ಕುಳಿತು ತೀರ್ಮಾನ ಕೈಗೊಳ್ಳಿ ಆಗ ನಿಮ್ಮ ಕುಟುಂಬ ಸುಖಿ ಕುಟುಂಬ ವಾಗುತ್ತದೆ ಎಂದರು.
ಮುಖ್ಯ ಆರೋಗ್ಯ ಮೇಲ್ವಿಚಾರಣಾಧಿಕಾರಿ ಎಮ್.ಬಿ.ಹನುಮಂತಪ್ಪ, ಹಿರಿಯ ಆರೋಗ್ಯ ಸುರಕ್ಷತಾಧಿಕಾರಿ ಕಾತ್ಯಾಣಮ್ಮ ವಿವಿಧ ಕುಟುಂಬ ಯೋಜನೆಗಳ ಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಸುರಕ್ಷತಾಧಿಕಾರಿಗಳಾದ ಉಷಾ, ಏಕಾಂತಮ್ಮ ಗೀತಾ, ಅಂಗನವಾಡಿ ಕಾರ್ಯಕರ್ತೆ ಶಶಿಕಲಾ, ಮೀನಾಕ್ಷಿ, ಆಶಾ ಕಾರ್ಯಕರ್ತೆಯರು ಅತ್ತೆ ಸೊಸೆಯರು ಭಾಗವಹಿಸಿದ್ದರು. 10 ಜನ ಅತ್ತೆ-ಸೊಸೆಯರಲ್ಲಿ 4 ಜನ ಕುಟುಂಬ ಯೋಜನೆ ಅನುಸರಿಸಲು ಮುಂದೆ ಬಂದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page