ಅದ್ದೂರಿ ಭಗೀರಥ ಜಯಂತೋತ್ಸವ ಕಾರ್ಯಕ್ರಮ ಉಪ್ಪಾರ ಸಮಾಜದ ಯುವಗೌರವಾಧ್ಯಕ್ಷ ಕನಕದಾಸ್

by | 13/06/24 | ಸುದ್ದಿ

ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಜೂನ್ 14ರಂದು

ಹಿರಿಯೂರು:
ತಾಲ್ಲೂಕಿನ ಆಲೂರು ಗ್ರಾಮದಲ್ಲಿ ದಿನಾಂಕ 14-ಜೂನ್-2024 ನೇ ಶುಕ್ರವಾರದಂದು ಶ್ರೀ ಭಗೀರಥ ಜಯಂತೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಉಪ್ಪಾರ ಸಮಾಜದ ಯುವ ಗೌರವಾಧ್ಯಕ್ಷರಾದ ಕನಕದಾಸ್ ತಿಳಿಸಿದ್ದಾರೆ.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹೊಸದುರ್ಗ ಭಗೀರಥ ಪೀಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಪುರುಷೋತ್ತಮಾನಂದ ಮಹಾಸ್ವಾಮಿಗಳು ವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಗಂಗಾ ಪೂಜೆ, ಬೆಳಗ್ಗೆ 9.30 ರಿಂದ ಅನ್ನ ದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬೆಳಗ್ಗೆ 11ಗಂಟೆಗೆ ಸರಿಯಾಗಿ ವೇದಿಕೆ ಕಾರ್ಯಕ್ರಮ ಶುಭಾರಂಭವಾಗಲಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.
ಸಂಜೆ 5 ಗಂಟೆಗೆ ವಿಜೃಂಭಿತ ವಾದ್ಯಗೋಷ್ಟಿಗಳೊಂದಿಗೆ ಹಾಗೂ ಮಹಿಳೆಯರಿಂದ ಪೂರ್ಣ ಕುಂಭ ಕಳಶಗಳೊಂದಿಗೆ ಶ್ರೀ ಭಗೀರಥ ಭಾವಚಿತ್ರದ ಮೆರವಣಿಗೆಯನ್ನು ಡಿ.ಜೆ.ಯೊಂದಿಗೆ ಬೆಳ್ಳಿ ರಥದಲ್ಲಿ ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು ಎಂಬುದಾಗಿ ಅವರು ತಿಳಿಸಿದರು.
ಈ ಕಾರ್ಯಕ್ರಮದ ಉದ್ಗಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಾರ ಸಮಾಜದ ರಾಜ್ಯಾಧ್ಯಕ್ಷರು, ಚಾಮರಾಜ ಕ್ಷೇತ್ರದ ಮಾಜಿ ಸಚಿವರು, ಹಾಲಿ ಶಾಸಕರಾದ ಪುಟ್ಟರಂಗಶೆಟ್ಟಿ ವಹಿಸಲಿದ್ದಾರೆ. ಎಂಬುದಾಗಿ ಅವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್, ಕೇಂದ್ರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ವೆಂಕೋಬ, ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷರು, ಉಪ್ಪಾರ ಸಮಾಜ, ಚಿತ್ರದುರ್ಗ ಆರ್.ಮೂರ್ತಿ, ಆಲೂರು ಶ್ರೀ ಭಗೀರಥ ಯುವಕ ಸಂಘದ ಅಧ್ಯಕ್ಷ ಎಚ್. ನೀಲಕಂಠ, ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್. ಆರ್. ಲಕ್ಷ್ಮೀಕಾಂತ್, ಕರ್ನಾಟಕ ಪ್ರವರ್ಗ 1 ಒಕ್ಕೂಟ, ರಾಜ್ಯ ಕಾರ್ಯಾಧ್ಯಕ್ಷ ಎಚ್.ವಿ.ಬಂಡ್ಡಿ, ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು, ನಿವೃತ್ತಿ ಉಪ ನಿರ್ದೇಶಕ ಶ್ರೀನಿವಾಸ್, ಶ್ರೀ ಭಗೀರಥ ಯುವಕ ಸಂಘ, ಸಂಸ್ಥಾಪಕ ಆಲೂರು ಆರ್. ಮಾಣಿಕ್ಯ, ಮಾಜಿ ನಿಗಮದ ನಿರ್ದೇಶಕ ಬೆಂಗಳೂರು( ಗೌರಿಬಿದ್ದನೂರು) ಎ.ಜಿ. ನಾಗರಾಜು, ಜಿಲ್ಲಾ ಅಧ್ಯಕ್ಷರು, ಉಪ್ಪಾರ ಸಮಾಜ ಬೆಂಗಳೂರು ಸುನಿಲ್, ತಾಲ್ಲೂಕು ಉಪ್ಪಾರ ಸಮಾಜದ ಅಧ್ಯಕ್ಷರಾದ ಆಲೂರು ರಾಮಣ್ಣ, ಯುವ ಗೌರವಾಧ್ಯಕ್ಷರಾದ ಕನಕದಾಸ್, ಬಿ.ಜೆ.ಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರು ಚಿಕ್ಕಮಗಳೂರು ಲಕ್ಕಪ್ಪ, ಉಪ್ಪಾರ ಸಮಾಜಮುಖಂಡರು ಬೊಮ್ಮಸಮುದ್ರ ಭೀಮರಾಜ್ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಉತ್ಸವದ ಆಯೋಜಕರು ಭಗೀರಥ ಸಮಾಜದ ಬಂಧುಗಳು, ರಾಜ್ಯದ ಹೆಸರಾಂತ ಮಠಾಧಿಪತಿಗಳು, ರಾಜಕಾರಣಿಗಳು ಆಗಮಿಸಲಿದ್ದು ಸರ್ವರಿಗೂ ಆದರದ ಸ್ವಾಗತ ಕೋರಿದ್ದಾರೆ.ಈ ಪ್ರಯುಕ್ತ ರಾಜ್ಯಾದ್ಯಂತ ಉಪ್ಪಾರ ಕುಲಬಾಂಧವರು, ಆಲೂರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕಾರ್ಯಕ್ರಮದ ಸಂಘಟಕರು ವಿನಂತಿಸಿದ್ದಾರೆ.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page