ಬಳ್ಳಾರಿ,ನ.02
ಪ್ರತಿಯೊಬ್ಬ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ತಿಳಿಸಿದರು.
ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಮ್ಮ ದೇಶ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರ ಪ್ರಮುಖ ಅಡಚಣೆ ಆಗಿದೆ. ಇದನ್ನು ಹೋಗಲಾಡಿಸಲು ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಪೊಲೀಸ್ ಅಧೀಕ್ಷಕ ಎಂ.ಎನ್.ಶಶಿಧರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದ ಹಲವಾರು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ದೊರೆಯದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಪಾರದರ್ಶಕವಾಗಿ ಸಾರ್ವಜನಿಕರಿಗೆ ದೊರೆಯುವಂತೆ ಅಧಿಕಾರಿ ವರ್ಗದವರು ಗಮನಹರಿಸಬೇಕು. ಈ ನಿಟ್ಟಿನಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಒಂದು ವಾರಗಳ ಕಾಲ ಜಾಗೃತಿ ಅರಿವು ಸಪ್ತಾಹ ಆಚರಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಭಿತ್ತಿಪತ್ರ ಗಣ್ಯರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಅಧಿಕಾರಿಗಳು ಪ್ರಮಾಣಿಕತೆಯಿಂದ ಕೆಲಸ ಮಾಡಿ: ಎಸ್‍ಪಿ ರಂಜೀತ್ ಕುಮಾರ್ ಬಂಡಾರು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments