ಅಧಿಕಾರಿಗಳ ಸಭೆಗೆ ಸೀಮಿತವಾದ ಸ್ಮಶಾನ ಭೂಮಿ- ಸ್ಮಶಾನಗಳನ್ನು ಅಕ್ರಮ ಒತ್ತುವರಿ ಮಾಡಿಕೊಂಡರೂ ತೆರವುಗೊಳಿಸಲು ಮುಂದಾಗದ ಅಧಿಕಾರಿಗಳು…?

by | 28/06/24 | ಜನಧ್ವನಿ

(ಸಾಂದರ್ಭಿಕ ಚಿತ್ರ) ಚಳ್ಳಕೆರೆ ಜನಧ್ವನಿ ವಾರ್ತೆ ಜೂ 28ಮನುಷ್ಯ ಬದುಕಿದ್ದಾಗ ಸ್ವಂತ ಭೂಮಿ, ಮನೆ ಇಲ್ಲದಿದ್ದರೂ ಸತ್ತಾಗಲಾದರೂ ಆರಡಿ, ಮೂರಡಿ ಜಾಗ ಬೇಕೆ ಬೇಕು ಸ್ಮಾಶಾನಕ್ಕೆಂದು ಮೀಸಲಿಟ್ಟು ಭೂಮಿಯನ್ನು ಸಹ ಬಿಡದೆ ಅಕ್ರಮಿಸಿಕೊಂಡಿರುವುದು ಬೆಳಕಿಗೆ ಬಂದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಪಂ ವ್ಯಾಪ್ತಿಯ ಕಾಮಸಮುದ್ರ ಗ್ರಾಮದಲ್ಲಿ ಸತ್ತವರ ಅಂತ್ಯ ಸಂಸ್ಕಾರ ಮಾಡಲೆಂದು 3 ಎಕರೆ ಭೂಮಿ ಮಂಜುರಾತಿ ಮಾಡಿದ್ದರೂ ಸಹ ಕೆಲವರು ಅಕ್ರಮವಾಗಿ ಸುಮಾರು 2 ಎಕರೆಗೂ ಹೆಚ್ಚು ಭೂಮಿಯನ್ನು ಅಕ್ರಮಿಸಿಕೊಂಡು ಉಳುಮೆ ಮಾಡಿಕೊಂಡು ಜಾನುವಾರು ಶೆಡ್ ,ರೊಪ್ಪಗಳನ್ನು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಗ್ರಾಮದಲ್ಲಿ ಹೊಲ, ತೋಟ ಹೊಂದಿರುವವರ ಕುಟುಂಬದವರು ಮೃತಪಟ್ಟರೆ ಸಮಸ್ಯೆ ಇಲ್ಲ. ಆದರೆ, ತುಂಡು ಭೂಮಿಯೂ ಇಲ್ಲದವರ ಮನೆಯಲ್ಲಿ ಯಾರಾದರೂ ಮೃತಪಟ್ಟಾಗ ಅವರ ಅಗಲಿಕೆ ನೋವು ಕುಟುಂಬದವರನ್ನು ದುಃಖದಲ್ಲಿ ಮುಳುಗಿಸುವುದಲ್ಲದೆ ಅವರ ಅಂತ್ಯ ಸಂಸ್ಕಾರ ಎಲ್ಲಿ ನಡೆಸಬೇಕೆಂಬ ಚಿಂತೆ ಕಾಡುತ್ತದೆ.
ಸತ್ತವರಿಗೆ ಮುಕ್ತಿ ದೊರಕಿಸಲು ಊರಿಗೊಂದು ಸ್ಮಶಾನ ಇರಬೇಕು ಎಂಬ ಕಾರಣಕ್ಕೆ ಬಹಳ ಹಿಂದಿನಿಂದಲೂ ಪ್ರತಿ ಗ್ರಾಮಕ್ಕೊಂದು ಸ್ಮಶಾನ ಭೂಮಿ ಗುರುತಿಸಲಾಗಿದೆ.
ಸರಕಾರಿ ಭೂಮಿ, ಕಂದಾಯ ಭೂಮಿ, ಅರಣ್ಯ ಭೂಮಿಗಳನ್ನು ಸಾಗುವಳಿ ಭೂಮಿಗಳನ್ನಾಗಿ ಮಾಡಿಕೊಂಡು ಈಗ ಸ್ಮಾಶಾನ ಭೂಮಿಯನ್ನು ಸಹ ಒತ್ತುವರಿ ಮಾಡಿಕೊಂಡರೂ ಸಹ ತೆರವುಗೊಳಿಸಿ ಸತ್ತವರಿಗೆ ಮುಕ್ತಿದೊರಕಿಸಲು ಸ್ಮಶಾನ ಭೂಮಿ ರಕ್ಷಣೆ ಮಾಡಲು ಯಾರೂ ಇಚ್ಚಾ ಶಕ್ತಿ ತೋರುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಶಾಸಕರ ಮಾತಿಗೂ ಕಿಮ್ಮತ್ತಿಲ್ಲ. ಶಾಸಕ ಟಿ, ರಘುಮೂರ್ತಿ ಕಳೆದ ಹತ್ತು ವರ್ಷಗಳಿಂದಲೂ ಸಭೆ ಸಮಾರಂಭ, ಜನಸಂಪರ್ಕ ಸಭೆ, ಜನಸ್ಪಂದನಾ ಸಭೆಗಳಲ್ಲಿ ಪ್ರತಿ ಗ್ರಾಮದಲ್ಲೂ ನಿವೇಶನ ಹಾಗೂ ವಸತಿ ವಂಚಿತರಿಗೆ ಆಶ್ರಯ ನಿವೇಶನ, ಪ್ರತಿ ಗ್ರಾಮ ಹಾಗೂಜನ ವಸತಿ ಪ್ರದೇಶಗಳಿಗೆ ಸ್ಮಶಾನ ನಿರ್ಮಿಸ ಬೇಕು ಒತ್ತುವರಿಯನ್ನು ತೆರವುಗೊಳಿಸ ಬೇಕು ಎಂದು ಸಾಕಷ್ಟು ಬಾರಿ ಸಭೆಯಲ್ಲಿ ಹೇಳಿದರೂ ಸಹ ಸ್ಮಾನ ಭೂಮಿ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ ಇದು ಕೇವಲ ಕಾಮಸಮುದ್ರ ಗ್ರಾಮದ ಕಥೆಯಲ್ಲಿ ಇನ್ನು ಕಲೆವು ಹಳ್ಳಿಗಳಲ್ಲಿ ಸ್ಮಶಾನವಿಲ್ಲದೆ ಅಂತ್ಯ ಸಂಸ್ಕಾರ ಮಾಡಲು ಮೃತ ದೇಹವನ್ನುಟ್ಟುಕೊಂಡು ಪ್ರತಿಭಟನೆ ಮಾಡಿರುವು ಪ್ರಕರಣಗಳಿದ್ದರೂ ಸಹ ಸ್ಮಶಾನ ಭೂಮಿ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಒಂದೊಲ್ಲ ಗ್ರಾಮಸ್ಥರು ಕಂದಾಯ ಇಲಾಖೆಗೆ ಮನವಿ ನೀಡಲು ಕಚೇರಿಗೆ ಬಂದರೆ ಇನ್ನು ಕೆಲವರು ಮನವಿ ಕೊಟ್ಟು ಸುಮ್ಮನಾಗಿದ್ದಾರೆ.

ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಮಶಾನ ಭೂಮಿ ಅಕ್ರಮ ಒತ್ತುವರಿಗೆ ತೆರವುಗೊಳಿಸುವರೇ ಕಾದು ನೋಡ ಬೇಕಿದೆ.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page