ಅಪಘಾತ ಪರಿಹಾರ: ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನ

by | 15/03/24 | ಸುದ್ದಿ

ಚಿತ್ರದುರ್ಗ ಮಾ.15:
ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ 2021ರ ಆಗಸ್ಟ್ 26 ರಿಂದ ನೋಂದಾಯಿಸಲಾಗುತ್ತಿದ್ದು, 2022ರ ಮಾರ್ಚ್ 31 ರವರೆಗೆ ನೋಂದಣಿಯಾಗಿ ಮತ್ತು ಈ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ರೂ.2 ಲಕ್ಷಗಳ ಅಪಘಾತ ಪರಿಹಾರ ಒದಗಿಸಲಾಗುವುದು. ಈ ಸಂಬಂಧ ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಪಘಾತದಿಂದ ಮರಣ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ, UAN ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್‍ಐಆರ್/ಪಂಚನಾಮ, In case claimant is minor, Guardian should produce certificate of guardianship issued by District Court while filling the claim.
ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ, UAN ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶವನ್ನು ಒಳಗೊಂಡಿರುವ ಆಸ್ಪತ್ರೆಯ ದಾಖಲೆ, Disability certificate issued by the authorised personnel of State/UT Govt.or Unique Disability Identity Card (permanent) issued by Department of Empowerment of Persons with Disabilities, M/O Social Justice & Empowerment, Govt. of India.
ಈ ಮೇಲೆ ತಿಳಿಸಿದ ಸೂಕ್ತ ದಾಖಲೆಯೊಂದಿಗೆ ಕಾರ್ಮಿಕ ಅಧಿಕಾರಿಗಳ ಕಛೇರಿ, ಜೆ.ಸಿ.ಆರ್ ಬಡಾವಣೆ, ಎಸ್.ಬಿ.ಐ ಬ್ಯಾಂಕ್ ಹತ್ತಿರ, 1ನೇ ಮಹಡಿ, ಚಿತ್ರದುರ್ಗ ಇಲ್ಲಿಗೆ ಮಾರ್ಚ್ 25ರೊಳಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಣೆಯಲ್ಲಿ ತಿಳಿಸಿದ್ದಾರೆ.
========

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page