ದಾವಣಗೆರೆ: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರ ಸಾವು ಕಂಡ ಘಟನೆ ದಾವಣಗೆರೆ ತಾಲೂಕಿನ ಆನಗೋಡ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ತಡರಾತ್ರಿ ನಡೆದಿದೆ.
ಪರಶುರಾಮ್ (24), ಸಂದೇಶ (23) ಹಾಗೂ ಶಿವು (26) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಯುವಕರು ನಗರದ ರಾಮನಗರದ ನಿವಾಸಿಗಳು. ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ನಡೆದ ದೇವಿ ಕಾರ್ಯಕ್ರಮಕ್ಕೆ ತೆರಳಿದ್ದರು. ಊಟ ಮಾಡಿ ವಾಪಸ್ಸಾಗುವಾಗ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿದ್ದು, ಮೃತರ ಕುಟುಂಬದವರ ಬಗ್ಗೆ ಮಾಹಿತಿ ಪೊಲೀಸರು ಮಾಹಿತಿ ಸಂಗ್ರಹಿಸಿದರು.
ಯುವಕರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಬಾಳಿ ಬದುಕಬೇಕಿದ್ದ ಯುವಕರು ಇಹಲೋಕ ತ್ಯಜಿಸಿದ್ದಾರೆ. ಜಾತ್ರಾ ಮಹೋತ್ಸವಕ್ಕೆ ಹೋದವರು ಹೆಣವಾಗಿ ವಾಪಸ್ ಆಗಿದ್ದು, ಪೋಷಕರು ಯುವಕರ ಕಳೆಬರಹ ನೋಡುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ದೃಶ್ಯ ಕರುಳು ಹಿಂಡುವಂತಿತ್ತು.
0 Comments