ಚಳ್ಳಕೆರೆ ಜನಧ್ವನಿ ವಾರ್ತೆ ಅ.18.ಚಿತ್ರದುರ್ಗ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ಬ ಯಸಿದ್ದೇನೆ. ಶಾಸಕರು, ಹಿರಿಯ ನಾಯಕರು ಅವಕಾಶ ಕಲ್ಪಿಸಿದರೆ ಸ್ಪರ್ಧಿಸುತ್ತೇನೆ. ಯುವ ಕಾಂಗ್ರೆಸ್‌ನಲ್ಲಿ ಏಳು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ ಮಾಡುತ್ತೇನ ಇಲ್ಲವಾದರೆ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ ಎಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿನಯ್ ತಿಮ್ಮಾಪುರ ಹೇಳಿದರು. ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಮಾರಮ್ಮ ದೇವಿಯ ಪುಣ್ಯ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮೊಳಕಾಲ್ಮೂರು ಶಾಸಕ ಎನ್ ವೈ.ಗೋಪಲಕೃಷ್ಣ ಇವರನ್ನು ಭೇಟಿಯಾಗಿ ನಂತರ ಮಾಧ್ಯಮದವರೊಂದಿಗೆ ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದರು. ಚಿತ್ರದುರ್ಗ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದು
ನಾನೊಬ್ಬ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಚಿತ್ರದುರ್ಗ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದೇನೆ
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಆರು ಕ್ಷೇತ್ರದಲ್ಲಿ ಐದು ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ತೆಗೆದುಕೊಂಡಿದೆ
ಈ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರು ಸ್ವಾಮೀಜಿಯವರು ಹೇಳಿದ ಪ್ರಕಾರವಾಗಿ
ನಾನು ಈ ಜಿಲ್ಲೆಗೆ ನನ್ನನ್ನು ಹಿರಿಯ ನಾಯಕರು ಆಯ್ಕೆ ಮಾಡಿದರೆ ಖಂಡಿತ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು
ನಾನು ನಮ್ಮ ಪಕ್ಷದ ತತ್ವ ಸಿದ್ಧಾಂತವನ್ನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾರನ್ನು ಸೂಚಿಸುತ್ತಾರೋ ಹಿರಿಯರಿಗೆ ಬಿಟ್ಟ ವಿಷಯ ಅವರೇನಾದರೂ ನನ್ನನ್ನು ಗುರುತಿಸಿದರೆ ಈ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹಗಲಿರೊಳು ಶ್ರಮಿಸುತ್ತೇನೆ , ಈಗಾಗಲೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸಕೈಗೊಂಡು ಶಾಸಕರ. ಪಕ್ಷದ ಹಿರಿಯ ಹಾಗೂ ಕಿರಿಯ ಮುಖಂಡರನ್ನು ಕಾರ್ಯಕರ್ತರನ್ನು ಭೇಟಿ ಮಾಡಲಾಗುತ್ತಿದೆ ಎಂದು ತಿಳಿಸಿದರು
0 Comments