ಅಮ್ಮನ ಕೈತುತ್ತು, ಅಪ್ಪನ ದುಡಿಮೆಯ ಪರಿಶ್ರಮದ ಮಹತ್ವ ತಿಳಿದು ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಬೇಕೆಂದು ಡಿವೈಎಸ್ ಪಿ ಟಿ.ಬಿ. ರಾಜಣ್ಣ

by | 06/07/24 | ಶಿಕ್ಷಣ


ಚಳ್ಳಕೆರೆ.
ಅಮ್ಮನ ಕೈತುತ್ತು, ಅಪ್ಪನ ದುಡಿಮೆಯ ಪರಿಶ್ರಮದ ಮಹತ್ವ ತಿಳಿದು ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಬೇಕೆಂದು ಡಿವೈಎಸ್ ಪಿ ಟಿ.ಬಿ. ರಾಜಣ್ಣ ವಿದ್ಯಾರ್ಥಿ ಗಳಿಗೆ ಸಲಹೆ ನೀಡಿದರು.

ಚಳ್ಳಕೆರೆ ನಗರದ ಸೋಮಗುದ್ದು ರಸೆಯಲ್ಲಿನ ಸರ್ಕಾರಿ ಪಧವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಎನ್‌ಎಸ್‌ಎಸ್ ಘಟಕ ವತಿಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ವ್ಯಸನ ಮುಕ್ತ ಸಮಾಜ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಯುವ ಸಮುದಾಯದ ಮೇಲೆ ದೇಶದ ಸಾಮಾಜಿಕ ಜವಾಬ್ದಾರಿಯಿದೆ. ತಮ್ಮ ಮಕ್ಕಳು ಸಮಾಜದಲ್ಲಿ ಒಳ್ಳೆಯ ಗೌರವ ಮತ್ತು ಸಾಧಕರಾಗಿ ಬೆಳೆಯಬೇಕು ಎನ್ನುವ ಪಾಲಕರ ಆಸೆ ಈಡೇರಿಸುವ ಜವಾಬ್ದಾರಿಯೂ ಇದೆ. ಮಾದಕ ವಸ್ತುಗಳಿಗೆ ಬಲಿಯಾಗುವ ಯುವ ಸಮುದಾಯ ಜಾಗೃತವಾಗಬೇಕು. ಗೆಳೆತ ಮತ್ತು ಸಂಭ್ರಮ ಆಚರಿಸುವ ಜಾಗಗಳಲ್ಲಿ ಮಾದಕ ವಸ್ತಗಳಿಗೆ ಪ್ರೇರಿತರಾಗುತ್ತಾರೆ. ಇದಕ್ಕೆ ಮನಸ್ಸುಕೊಟ್ಟವರು ಸುಳ್ಳು, ಕಳ್ಳತನ ಮತ್ತು ಸಮಾಜಘಾತುಕ ಶಕ್ತಿಗಳಾಗಿ ಬೆಳೆಯುತ್ತಾರೆ. ಪೊಲೀಸ್ ಪ್ರಕರಣಗಳಲ್ಲಿ ಸೇರ್ಪಡೆಯಾಗಿ ಜೀವನವೇ ನಾಶವಾಗುತ್ತದೆ. ವಿದ್ಯಾರ್ಥಿ ದಿಸೆಯಲ್ಲಿ ಕುಟುಂಬದವರ ಆಸೆಯಂತೆ ಶಿಕ್ಷಣದಲ್ಲಿ ಜಾಣರಾಗಿ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.


ಪ್ರಾಚಾರ್ಯ ಎಂ.ರವೀಶ್ ಮಾತನಾಡಿ, ಅಂದು ಹೆಚ್ಚು ಪುಸ್ತಕಗಳನ್ನ ಓದುತ್ತಿದ್ದರು ಪುಸ್ತಕದಲ್ಲಿನ ವಿಷಯಗಳನ್ನು ತಿಳಿದುಕೊಳ್ಳುತ್ತಿದ್ದರು. ಇಂದು ಮೊಬೈಲ್ ಹೆಚ್ಚು ಬಳಕೆ ಆಗುತ್ತಿವೆ ಇದರಿಂದಾಗಿ ಇತ್ತೀಚಿನ ದಿನಗಳಲ್ಲಿ ಅಪರಾಧಗಳು ಸಹ ಹೆಚ್ಚುತ್ತಿವೆ.ಬದಲಾದ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗೆ ಸಂಪೂರ್ಣ ಸ್ವತಂತ್ರ್ಯ ಇದೆ. ಇದನ್ನು ದುರುಪಯೋಗ ಮಾಡಿಕೊಳ್ಳಬಾರದು. ಮನೆಯಲ್ಲಿ ಪಾಲಕರು ಮತ್ತು ಶಿಕ್ಷಕರ ಮಾರ್ಗದರ್ಶನ ಬದುಕಿಗೆ ಅಳವಡಿಸಿಕೊಳ್ಳಬೇಕು. ಸ್ಪರ್ಧಾ ಪರೀಕ್ಷೆಗೆ ಸಿದ್ದತೆಯಾಗುವ ಮಾಹಿತಿಯನ್ನು ಮೊಬೈಲ್‌ನಲ್ಲಿ ಕಲಿಯಬಹುದು. ದಯಮಾಡಿ ಮೊಬೈಲ್ ಒಳ್ಳೆಯ ಅಭ್ಯಾಸಕ್ಕೆ ಬಳಸಬೇಕೆಂದು ಹೇಳಿದರು.
ಎನ್‌ಎಸ್‌ಎಸ್ ಅಧಿಕಾರಿ ಬಿ. ಶಾಂತಕುಮಾರಿ ಮಾತನಾಡಿ ಇಂದು ವ್ಯಸನಗಳಿಂದ ಆಗುತ್ತಿರುವ ಅನಾಹುತಗಳನ್ನು ಪ್ರತಿನಿತ್ಯ ನೋಡುತ್ತೇವೆ. ಕೆಲವು ಸಮಯದಲ್ಲಿ ಸಹವಾಸ ದೋಷದಿಂದ ಇಂತಹ ದುಷ್ಪರಿಣಾಮಗಳು ಉದ್ಭವವಾಗುತ್ತವೆ. ಇಂತಹ ಹಲವು ವಿಷಯಗಳಿಂದ ದೂರವಿದ್ದರೆ ಜೀವನ ಸುಖಮಯವಾಗುತ್ತದೆ ಎಂದರು .ಉಪನ್ಯಾಸಕರಾದ ವಸಂತಕುಮಾರ್, ಪುಟ್ಟರಂಗಪ್ಪ, ಮಾತನಾಡಿದರು. ಕುಮಾರಸ್ವಾಮಿ, ರೇಖಮ್ಮ, ಪುಷ್ಪಲತಾ, ಜಾನಕಮ್ಮ ಮತ್ತಿತರು ಇದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page