ಅರೆ ಸೇನಾಪಡೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಚಳ್ಳಕೆರೆ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಪಥಸಂಚಲನ

by | 05/04/23 | ಸುದ್ದಿ

< ಚಳ್ಳಕೆರೆ ಜನಧ್ವನಿ ವಾರ್ತೆ ಏ.5 ಅರೆ ಸೇನಾಪಡೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಚಳ್ಳಕೆರೆ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಪಥಸಂಚಲನ ನಡೆಸಿದರು.
ಚುನಾವಣಾಧಿಕಾರಿ ಆನಂದ್ ಪೊಲೀಸ್‌ ಠಾಣೆಯ ಆವರಣದಲ್ಲಿ ಪಥಸಂಚಲಕ್ಕೆ ಚಾಲನೆ ನೀಡಿದರು. ಪೋಲಿಸ್ ಠಾಣೆಯಿಂದ ನೆಹರು ವೃತ್ತ.ಎಸ್ ಆರ್ ರಸ್ತೆ ಗಾಂಧಿನಗರ ಸೇರಿದಂತೆ ನಗರದ ವಿವಿಧ ವಾರ್ಡ್ ಗಳ ರಸ್ತೆ ಮೂಲಕ ಪಥ ಸಂಚರಿಸಿತು. ಡಿವೈಎಸ್ಪಿ ರಮೇಶ್ ಕುಮಾರ್ ಮಾತನಾಡಿ ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತದಾರರು ನಿರ್ಭೀತಿಯಿಂದ ಮತಗಟ್ಟೆಗಳಿಗೆ ಬಂದು ಮತಚಲಾಯಿಸುವಂತೆ‌ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೋಲಿಸ್ ಸಿಬ್ಬಂದಿ ಜತೆಗೆ ಅರೆಸೇನೆ‌ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಪ್ರತಿಯೊಬ್ಬ ಮತದಾರರು ಮತಗಟ್ಟೆಗೆ ಬಂದು ಮತದಾನ ಪ್ರಕ್ರಿಯೆ ಯಲ್ಲಿ ಭಾಗವಸಿ ಮತದಾನ ಮಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿರಿ ರೇಜಾನ್ ಪಾಷ.ಚಳ್ಳಕೆರೆವಠಾಣೆ ಪಿಐ ಆರ್ ಎಫ್ ದೇಸಾಯಿ. ತಳಕು ವೃತ್ಯನಿರೀಕ್ಷಕ ಸಮೀ‌ವುಲ್ಲ ನಾಯಕಮಹಟ್ಟಿ.ತಳಕು
ಪರಶುರಾಂಪುರ.ಚಳ್ಳಕೆರೆ ಠಾಣೆಯ ಪಿ ಎಸ್ ಐ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *