ಅವ್ಯವಸ್ಥೆಯ ಆಗರವಾಗಿರುವ ಮೊರಾರ್ಜಿ ವಸತಿಶಾಲೆ ವಿದ್ಯಾರ್ಥಿಗಳಿಂದಲೇ ಗ್ರಾಮದ ಅಂಗಡಿಗಳಲ್ಲಿ ಕಳ್ಳತನ

by | 04/03/24 | ಸುದ್ದಿ


ಹಿರಿಯೂರು :
ತಾಲ್ಲೂಕಿನ ದೇವರಕೊಟ್ಟ-ಈಶ್ವರಗೆರೆ ಗ್ರಾಮದ ಬಳಿಯಿರುವ ಸರ್ಕಾರದ ಮೊರಾರ್ಜಿ ವಸತಿ ಶಾಲೆಗಳು ಅವ್ಯವಸ್ಥೆಯ ಆಗರವಾಗಿದ್ದು, ಅಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾತ್ರಿಯ ವೇಳೆಯಲ್ಲಿ ಅಲ್ಲಿನ ಕೆಲವು ವಿದ್ಯಾರ್ಥಿಗಳು ಕಾಂಪೌಡ್ ಹಾರಿ ಹೊರ ಬಂದು ಗ್ರಾಮದ ಅಂಗಡಿಗಳಲ್ಲಿ ಕಳ್ಳತನಗಳಂತಹ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂಬುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.
ಸುಮಾರು 100 ಎಕರೆಯ ಸುಸಜ್ಜಿತ ಕ್ಯಾಂಪಾಸ್ ಹೊಂದಿರುವ ಈ ಮೊರಾರ್ಜಿ ವಸತಿ ಶಾಲೆಗಳ ಅಲ್ಲಿನ ಪ್ರಿನ್ಸಿಪಾಲ್, ಹಾಸ್ಟೆಲ್ ವಾರ್ಡನ್ ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೆ ಸರ್ಕಾರ ಅಗತ್ಯ ಕ್ವಾಟ್ರರ್ಸ್ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಆದರೆ ಆ ವಸತಿಗಳಲ್ಲಿ ವಸತಿ ಶಾಲೆ ಪ್ರಿನ್ಸಿಪಾಲ್, ಹಾಸ್ಟೆಲ್ ವಾರ್ಡನ್ ಸೇರಿದಂತೆ ಯಾರೂ ವಾಸಿಸದೆ ಹತ್ತಿರದ ಹಿರಿಯೂರು ಟೌನ್ ನಿಂದ ಪ್ರತಿದಿನ ಓಡಾಡುತ್ತಿರುವುದರಿಂದ, ರಾತ್ರಿವೇಳೆ ಮಕ್ಕಳು ಸ್ವೇಚ್ಛಾಚಾರದಿಂದ ವರ್ತಿಸುವಂತಾಗಿದೆ.
ಈ ಕಾರಣದಿಂದಾಗಿ ಅಲ್ಲಿ ವಿದ್ಯಾರ್ಥಿಗಳಿಗೆ ಯಾರೂ ಹೇಳುವವರೂ ಕೇಳುವವರರೂ ಇಲ್ಲದಂತಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಭಾನುವಾರ ರಾತ್ರಿ ಸುಮಾರು 2.30 ಸಮಯದಲ್ಲಿ ವಿದ್ಯಾರ್ಥಿಗಳ ಒಂದು ಗುಂಪು ಶಾಲೆ ಕಾಂಪೌಡ್ ಹಾರಿ ಬಂದು ಈಶ್ವರಗೆರೆ ಗ್ರಾಮದ ಪಿ.ಎನ್. ಪರಮೇಶ್ವರಪ್ಪ ಎಂಬುವವರಿಗೆ ಸೇರಿದ “ಲಕ್ಷ್ಮೀವೆಂಕಟೇಶ್ವರ” ಬೇಕರಿಯಲ್ಲಿ ತಮಗೆ ಬೇಕಾದ ವಸ್ತುಗಳನ್ನು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ.
ಕಳೆದ ಭಾನುವಾರ ನಡೆದಿರುವ ಈ ಘಟನೆಯಲ್ಲಿ ನಮ್ಮ ಬೇಕರಿಯಿಂದ ಬೆಲೆಬಾಳುವ ಸಿಗರೇಟ್ ಗಳು ತಂಪು ಪಾನೀಯಗಳ ಬಾಟಲ್ ಗಳು, ಚಾಕಲೇಟ್ ಗಳು, ಬಿಸ್ಕಟ್ ಗಳು ಹಾರ್ಲಿಕ್ಸ್ ಡಬ್ಬಗಳು, ಬೂಸ್ಟ್ ಡಬ್ಬಗಳು, ನವರತ್ನ ಆಯಿಲ್ ಸೇರಿದಂತೆ, ಚಕ್ಕುಲಿ, ಕೋಡುಬಳೆ ಪ್ಯಾಕೇಟ್ ಗಳು ಸೇರಿದಂತೆ ಹಲವು ಬೇಕರಿ ವಸ್ತುಗಳನ್ನು ಈ ಮೊರಾರ್ಜಿ ವಸತಿ ಶಾಲೆ ಹುಡುಗರು ದೋಚಿಕೊಂಡು ಹೋಗಿದ್ದಾರೆ ಎಂಬುದಾಗಿ ಬೇಕರಿ ಮಾಲಿಕ ಪರಮೇಶ್ವರಪ್ಪ ಆರೋಪಿಸಿದ್ದಾರೆ.
ಈ ವಿದ್ಯಾರ್ಥಿಗಳ ಗುಂಪು ಈ ವಸ್ತುಗಳನ್ನು ದೋಚಿಕೊಂಡು ಹೋಗುವಾಗ ನಾಯಿಗಳು ಬೊಗಳಿದ್ದರಿಂದ ಎಚ್ಚರಗೊಂಡ ಬೇಕರಿ ಮಾಲಿಕ ವಿದ್ಯಾರ್ಥಿಗಳಲ್ಲಿ ಒಬ್ಬನನ್ನು ಹಿಡಿದುಕೊಂಡಿದ್ದು, ಉಳಿದವರು ಕತ್ತಲಲ್ಲಿ ಪರಾರಿಯಾಗಿದ್ದಾರೆ, ಈ ಗಲಾಟೆ ಕೇಳಿ ಎದ್ದುಬಂದ ಗ್ರಾಮಸ್ಥರು ಅಬ್ಬಿನಹೊಳೆ ಪೋಲಿಸರಿಗೆ ಸುದ್ದಿ ಮುಟ್ಟಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಪೋಲಿಸರು ಆ ವಿದ್ಯಾರ್ಥಿಯನ್ನು ಗ್ರಾಮಸ್ಥರ ಜೊತೆ ವಸತಿ ಶಾಲೆಗೆ ಕರೆದುಕೊಂಡು ಹೋಗಿ ಓಡಿ ಹೋದ ಹುಡುಗರ ಬಗ್ಗೆ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಸುಮಾರು ರಾತ್ರಿ 3 ಗಂಟೆಯಿಂದ ಬೆಳಗಿನ ಜಾವದವರೆಗೂ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಪ್ರಕರಣದಲ್ಲಿ ಭಾಗಿಯಾದ ಹುಡುಗರ ಬಗ್ಗೆ ಪೋಲಿಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅಲ್ಲಿ ಇರಬೇಕಾದ ಮೊರಾರ್ಜಿ ಶಾಲೆಯ ಪ್ರಿನ್ಸಿಪಾಲರಾಗಲಿ, ಹಾಸ್ಟೆಲ್ ವಾರ್ಡನ್ ಗಳಾಗಲಿ ಅಲ್ಲಿ ಇರಲೇ ಇಲ್ಲ ಎನ್ನಲಾಗಿದ್ದು, ಈ ಹುಡುಗರ ಗುಂಪು ಗ್ರಾಮದಲ್ಲಿ ಈಗಾಗಲೇ ನಾಲ್ಕೈದು ಬಾರಿ ಇಂತಹ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ಪೋಲಿಸ್ ವಿಚಾರಣೆಯಲ್ಲಿ ತಿಳಿದು ಬಂದಿದೆ.
ಈ ಪ್ರಕರಣ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮೊರಾರ್ಜಿ ವಸತಿ ಶಾಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಜಾಗೃತಿ ವಹಿಸುವುದರ ಜೊತೆಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ರಾತ್ರಿ ವೇಳೆಯಲ್ಲಿ ಶಾಲೆಯ ವಾರ್ಡನ್ ಗಳನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಆದೇಶಿಸಿ, ಅಲ್ಲಿನ ವಿದ್ಯಾರ್ಥಿಗಳ ಚಲನವಲನಗಳ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಬೇಕು ಎಂಬುದಾಗಿ ಈ ಮೂಲಕ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page