ಅ. 06 ರಂದು ಬಬ್ಬೂರು ಫಾರಂ ಶತಮಾನೋತ್ಸವ ಸಮಾರಂಭ ಮುಖ್ಯಮಂತ್ರಿಗಳಿಂದ ಸಿರಿಧಾನ್ಯ ಮೇಳ ಮತ್ತು ತೋಟಗಾರಿಕೆ ಬೆಳೆಗಳ ವಿಚಾರಸಂಕಿರಣ ಉದ್ಘಾಟನೆ

by | 05/10/23 | ಸುದ್ದಿ


ಚಿತ್ರದುರ್ಗ ಅ. 05:
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭ ಹಾಗೂ ಸಿರಿಧಾನ್ಯ ಮೇಳ ಮತ್ತು ತೋಟಗಾರಿಕೆ ಬೆಳೆಗಳ ವಿಚಾರಸಂಕಿರಣದ ಉದ್ಘಾಟನಾ ಕಾರ್ಯಕ್ರಮ ಅ. 06 ರಂದು ಬೆಳಿಗ್ಗೆ 10 ಗಂಟೆಗೆ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ಆವರಣದಲ್ಲಿ ಆಯೋಜಿಸಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ ಅವರು ಕೃಷಿ ಪ್ರಕಟಣೆಗಳನ್ನು ಬಿಡುಗಡೆ ಮಾಡುವರು. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಭೂವಿಜ್ಞಾನ, ಗಣಿಗಾರಿಕೆ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಹಸ್ತ ಪ್ರತಿಗಳ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಟಿ. ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ, ಡಾ. ಎಂ. ಚಂದ್ರಪ್ಪ, ಬಿ.ಜಿ. ಗೋವಿಂದಪ್ಪ, ಕೆ.ಸಿ. ವೀರೇಂದ್ರ ಪಪ್ಪಿ, ವಿಧಾನಪರಿಷತ್ ಸದಸ್ಯರುಗಳಾದ ಡಾ. ವೈ.ಎ. ನಾರಾಯಣಸ್ವಾಮಿ, ಕೆ.ಎಸ್. ನವೀನ್, ಚಿದಾನಂದ ಎಂ. ಗೌಡ, ಬಬ್ಬೂರು ಗ್ರಾ.ಪಂ. ಅಧ್ಯಕ್ಷ ಪಿ. ಕರಿಯಣ್ಣ ಪಾಲ್ಗೊಳ್ಳುವರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ. ಜಗದೀಶ್ ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನಾಡುವರು. ಬೆಂಗಳೂರು ಕೃಷಿ ವಿ.ವಿ. ಕುಲಪತಿ ಡಾ. ಎಸ್.ವಿ. ಸುರೇಶ, ಧಾರವಾಡ ಕೃಷಿ ವಿವಿ ಕುಲಪತಿ ಡಾ. ಪಿ.ಎಲ್. ಪಾಟೀಲ, ರಾಯಚೂರು ಕೃಷಿ ವಿವಿ ಕುಲಪತಿ ಡಾ. ಎಂ. ಹನುಮಂತಪ್ಪ, ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿ ಡಾ. ಎನ್.ಕೆ. ಹೆಗಡೆ, ಬೀದರ್‍ನ ಪಶುಸಂಗೋಪನೆ ವಿವಿ ಕುಲಪತಿ ಡಾ. ಕೆ.ಸಿ. ವೀರಣ್ಣ, ಮಾಜಿ ಸಹಕಾರ ಸಚಿವ ಡಾ. ಹೆಚ್. ಏಕಾಂತಯ್ಯ, ಕೃಷಿಕ ಸಮಾಜ ತಾಲ್ಲೂಕು ಅಧ್ಯಕ್ಷ ಹೆಚ್.ಆರ್. ತಿಮ್ಮಯ್ಯ ಅತಿಥಿಗಳಾಗಿ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ನವದೆಹಲಿ ಐಸಿಎಆರ್ ಮಹಾನಿರ್ದೇಶಕ ಡಾ. ಹಿಮಾಂಶು ಪಾಠಕ್, ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಕೃಷಿ ಆಯುಕ್ತ ವೈ.ಎಸ್. ಪಾಟೀಲ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿ.ಪಂ. ಸಿಇಒ ಸೋಮಶೇಖರ್ ಎಸ್.ಜೆ., ತೋಟಗಾರಿಕೆ ನಿರ್ದೇಶಕ ರಮೇಶ್ ಡಿ.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ ಸೇರಿದಂತೆ ವಿವಿಧ ಗಣ್ಯರು, ಅಧಿಕಾರಿಗಳು, ವ್ಯವಸ್ಥಾಪನಾ ಮಂಡಳಿ ಸದಸ್ಯರು, ವಿಶ್ವವಿದ್ಯಾಲಯದ ಅಧಿಕಾರಿಗಳು ಭಾಗವಹಿಸುವರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *