ಚಿತ್ರದುರ್ಗ ಅ. 09
ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಇದೇ ಅಕ್ಟೋಬರ್ 10ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 7.30ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಮಧ್ಯಾಹ್ನ 12.30 ರಿಂದ 1 ರವರೆಗೆ ಪಕ್ಷದ ಜಿಲ್ಲಾ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 2 ರಿಂದ ಸಂಜೆ 5.30 ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಸಂಜೆ 5.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ಎಂ ತಿರ್ಲಾಪೂರ ತಿಳಿಸಿದ್ದಾರೆ.
ಅ. 10ರಂದು ಕಂದಾಯ ಸಚಿವರ ಜಿಲ್ಲಾ ಪ್ರವಾಸ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments