ಅ.27 ರಿಂದ 29 ರವರೆಗೆ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

by | 17/10/23 | ಕ್ರೇಡೆ

ಚಿತ್ರದುರ್ಗ ಅ.17:
2022-23ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಇದೇ ಅಕ್ಟೋಬರ್ 27 ರಿಂದ 29 ರವರೆಗೆ ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
2022-23ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಯ ವೈಯುಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ಈ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಇಲಾಖೆಯಿಂದ ಗುರುತಿನ ಪತ್ರ ಪಡೆದು ಭಾಗವಹಿಸಬಹುದಾಗಿರುತ್ತದೆ.
ಕ್ರೀಡಾಪಟುಗಳು ಅಕ್ಟೋಬರ್ 27ರಂದು ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಗುರುತಿನ ಪತ್ರವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಘಟಕದ ಜಿಲ್ಲಾ ಕಾರ್ಯದರ್ಶಿ ಎಸ್.ಕೆ. ಮಂಜುನಾಥ ಅವರ ದೂರವಾಣಿ ಸಂಖ್ಯೆ 9844412448, ಜಿಲ್ಲಾ ಖಜಾಂಚಿ ಬಿ. ವಿರೇಶ್ ದೂರವಾಣಿ ಸಂಖ್ಯೆ 9880409874 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *