ಚಿತ್ರದುರ್ಗ ಅ.05:
ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇದೇ ಅಕ್ಟೋಬರ್ 6ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ಜೊತೆಯಲ್ಲಿ ಸಚಿವರು ಅಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಮುರುಘಾ ಮಠ ಆವರಣದ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹಿರಿಯೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್‍ಗೆ ಆಗಮಿಸುವರು. ಮಧ್ಯಾಹ್ನ 12.10 ಗಂಟೆಗೆ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂಗೆ ತೆರಳಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ಆಯೋಜಿಸಿರುವ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.10ಕ್ಕೆ ಮುಖ್ಯಮಂತ್ರಿಗಳ ಜೊತೆಯಲ್ಲಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್ ತಿಳಿಸಿದ್ದಾರೆ.
ಅ.6ರಂದು ಕೃಷಿ ಸಚಿವರ ಜಿಲ್ಲಾ ಪ್ರವಾಸ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments