ಅ.6ರಂದು ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಒಂದು ದಿನದ ವಿಶೇಷ ತರಬೇತಿ

by | 05/10/23 | ಸುದ್ದಿ

ಚಿತ್ರದುರ್ಗ ಅ.05:
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ, ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಇವರ ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕುಗಳಲ್ಲಿ ಬರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 6ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಹಕಾರ ಭವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಕಾರ ರತ್ನ ಪುರಸ್ಕøತರು ಹಾಗೂ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಆರ್. ರಾಮರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜೆ.ಶಿವಪ್ರಕಾಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಹಕಾರ ರತ್ನ ಪುರಸ್ಕøತರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿರ್ದೇಶಕ ಎಸ್.ಆರ್.ಗಿರೀಶ್, ಸಹಕಾರ ರತ್ನ ಪುರಸ್ಕøತರು ಹಾಗೂ ಕೆ.ಎಂ.ಎಫ್ ನಿರ್ದೇಶಕ ಸಿ.ವೀರಭದ್ರಬಾಬು, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷೆ ಮಾತೃಶ್ರೀ ಎನ್. ಮಂಜುನಾಥ್, ಸಹಕಾರ ರತ್ನ ಪುರಸ್ಕøತರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶರಕರಾದ ಜಿಂಕಲ್ ಬಸವರಾಜ್, ಪಿ.ತಿಪ್ಪೇಸ್ವಾಮಿ, ಜಿ.ಪಿ. ಯಶವಂತ್‍ರಾಜ್, ಎನ್.ಹೆಚ್. ಭಾಗ್ಯ, ಬಿ.ಸಿ. ಸಂಜೀವಮೂರ್ತಿ, ಹೆಚ್.ಎಂ. ದ್ಯಾಮಣ್ಣ, ಹೆಚ್.ಎನ್ ತಿಪ್ಪೇಸ್ವಾಮಿ, ಹೆಚ್.ವಿ. ಪ್ರತಾಪಸಿಂಹ, ಜಿ.ಈ. ಅಜ್ಜಪ್ಪ, ಕೆ.ಹೆಚ್. ಜಗನ್ನಾಥ್, ರತ್ನಮ್ಮ, ಟಿ. ಮಹಾಂತೇಶ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ಕಾರ್ಯದರ್ಶಿ ಲಕ್ಷ್ಮೀಪತಯ್ಯ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕದ ನಿರ್ದೇಶಕ ಇಲ್ಯಾಸ ಉಲ್ಲಾ ಷರೀಫ್, ಶಿವಮೊಗ್ಗ ಹಾಲು ಒಕ್ಕೂಟ ವ್ಯವಸ್ಥಾಪಕದ ನಿರ್ದೇಶಕ ಎಸ್.ಜೆ. ಶೇಖರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ಕೆ. ಮಹೇಶ್ವರಪ್ಪ, ಸಹಕಾರ ಸಂಘಗಳ ಉಪನಿಬಂಧಕ ಟಿ. ಮಧು ಶ್ರೀನಿವಾಸ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಸಹಾಯಕ ನಿರ್ದೇಶಕ ಪಿ. ಅಂಜನಮೂರ್ತಿ, ಶಿಮುಲ್ ವ್ಯವಸ್ಥಾಪಕ ಎಸ್.ಎಂ. ಮೂರ್ತಿ, ಶಿಮುಲ್ ವ್ಯವಸ್ಥಾಪಕ ಉಪ ವ್ಯವಸ್ಥಾಪಕ ಕೆ.ಪಿ. ಸಂಜಯ್, ಶಿಮುಲ್ ವಿಸ್ತರಣಾಧಿಕಾರಿ ವಿನೂತ್ ಕುಮಾರ್, ಶಿಮುಲ್ ವಿಸ್ತರಣಾಧಿಕಾರಿ ಜಿ. ರವಿಚಂದ್ರ, ಶಿಮುಲ್ ವಿಸ್ತರಣಾಧಿಕಾರಿ ಎಸ್. ನಯಾಜ್ ಬೇಗ್ ಭಾಗವಹಿಸುವರು.
ಈ ತರಬೇತಿಗೆ ಉಪನ್ಯಾಸಕರಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಜಿ.ಕುಲಕರ್ಣಿ ಅವರು ಸಹಕಾರ ಸಂಘಗಳಲ್ಲಿ ಇತ್ತೀಚೆಗೆ ತಿದ್ದುಪಡಿಯಾದ ಕಾಯ್ದೆ, ಕಾನೂನು ಮುಖ್ಯಾಂಶಗಳು, ಸಹಕಾರ ಸಂಘಗಳಲ್ಲಿ ಸಭೆಯನ್ನು ನಡೆಸುವ ವಿಧಾನಗಳು ಮತ್ತು ಚುನಾವಣೆ ಜರುಗಿಸುವ ಕುರಿತು ಹಾಗೂ ಸಹಕಾರ ಸಂಘಗಳಲ್ಲಿ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರಗಳ ನಿರ್ವಹಣೆ ಕುರಿತು ಉಪನ್ಯಾಸ ನೀಡುವರು ಎಂದು ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾಗರಾಜ ಪಾಟೀಲ್ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page