ಆಂದ್ರ ಪ್ರದೇಶದಲ್ಲಿ ರೈಲು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ.

by | 29/10/23 | ಅಪಘಾತ

ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ವಿಜಯನಗರ ಜಿಲ್ಲೆ ಕೊತ್ತವಲಸ ಮಂಡಲಮ್ ಕಂಟಕಾಪಲ್ಲಿ ವಿಶಾಖಪಟ್ಟಣ -ಫಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣ -ರಾಯಗಢ ರೈಲುಗಳ ಮಧ್ಯೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಂಭವ ಇದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ರೈಲ್ವೆ ಸಿಬ್ಬಂದಿ, ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *