ಆಕಸ್ಮಿಕ ಬೆಂಕಿ ತಗುಲಿ ನಡುರಸ್ತೆಯಲ್ಲೇ ಸಾರಿಗೆ ಬಸ್ ಹೊತ್ತಿ ಉರಿದ ಘಟನೆ ಬೆಳಗಾವಿ

by | 18/11/23 | ಕ್ರೈಂ

ಬೆಳಗಾವಿ, ನ.18: ಆಕಸ್ಮಿಕ ಬೆಂಕಿ ತಗುಲಿ ನಡುರಸ್ತೆಯಲ್ಲೇ ಸಾರಿಗೆ ಬಸ್ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನರಸಿಂಗಪೂರ‌ ಬಳಿ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಬಸ್​ಗೆ ಬೆಂಕಿ ತಗಲುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದಭಾರಿ ದುರಂತ ತಪ್ಪಿದೆ. ಬಸ್​ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂಬ ಮಾಹಿತಿ ಸಿಕ್ಕಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅಪಾಯ ಆಗಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ. ಇನ್ನು ದುರ್ಘಟನೆ ಕುರಿತು ತಿಳಿಯುತ್ತಿದ್ದಂತೆ ಸ್ಥಳಕ್ಕೆ NWKRTC ಅಧಿಕಾರಿಗಳು ದೌಡಾಯಿಸಿದ್ದು, ಬಸ್‌ಗೆ ಹೇಗೆ ಬೆಂಕಿ ತಗುಲಿತು ಎಂಬ ಬಗ್ಗೆ ಪರಿಶೀಲಿಸುತ್ತಿದ್ದಾರೆ. ಈ ಘಟನೆ ಯಮಕನಮರಡಿ ಪೋಲಿಸ್ ಠಾಣೆ‌ ವ್ಯಾಪ್ತಿಯಲ್ಲಿ ನಡೆದಿದೆ

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *