ಚಿತ್ರದುರ್ಗ ಆ.17:
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಆಗಸ್ಟ್ 28 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಹಿರಿಯೂರು ತಾಲೂಕು ಪರಮನಹಳ್ಳಿಯ ಕಿರ್ಲೋಸ್ಕರ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ “ನಿಧಿ ಆಪ್ಕೆ ನಿಕಟ್: ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಮಿಕ ಪಿಂಚಣಿದಾರರು ಮತ್ತು ಉದ್ಯೋಗದಾತರ ಕುಂದು ಕೊರತೆ ಪರಿಹಾರ ಮತ್ತು ಮಾಹಿತಿ ವಿನಿಮಯಕ್ಕೆ ವಿಶಾಲ ವೇದಿಕೆಯಾಗಿ, ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ.
ಉದ್ಯೋಗದಾತರ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರುವ ಆನ್ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು, ಸುಧಾರಣೆಗಳ ಮಾಹಿತಿಯನ್ನು ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು.
ಜಿಲ್ಲೆಯ ಎಲ್ಲಾ ಕಾರ್ಮಿಕರು, ಪಿಂಚಣಿದಾರರು, ಉದ್ಯೋಗದಾತರು ಕಾರ್ಯಕ್ರಮಕ್ಕೆ ಹಾಜರಾಗಿ ಪ್ರಯೋಜನ ಪಡೆಯುವಂತೆ ಎಂದು ಬಳ್ಳಾರಿ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ. ವೆಂಕಟ ಸುಬ್ಬಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments