ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ವೇಳಾಪಟ್ಟಿ ಪ್ರಕಟ ಜಿಲ್ಲೆಯಲ್ಲಿ 4615 ಮತದಾರರು, ಜೂನ್ 3 ರಂದು ಮತದಾನ

by | 03/05/24 | ಸುದ್ದಿ

ಚಿತ್ರದುರ್ಗ .ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಮೇ 9 ರಂದು ಅಧಿಸೂಚನೆ ಪ್ರಕಟವಾಗಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೇ 16 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಮೇ.17 ನಾಮ ಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ಜರುಗಲಿದೆ. ಜೂನ್ 6 ರಂದು ಮತ ಎಣಿಕೆ ನಡೆಯಲಿದೆ. ಜೂನ್ 12 ರಂದು ಚುನಾವಣೆ ಪ್ರಕ್ರಿಯಗಳು ಪೂರ್ಣಗೊಳ್ಳಲಿವೆ. ಮೇ 2 ರಿಂದಲೇ ಮಾದರಿ ಸಂಹಿತೆ ಜಾರಿಯಲಿದೆ.

*ಜಿಲ್ಲೆಯಲ್ಲಿ 4615 ಶಿಕ್ಷಕ ಮತದಾರರು:*

ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು 2023 ಡಿಸೆಂಬರ್ 30 ರಂದು ಈಗಾಗಲೇ ಪ್ರಕಟಿಸಲಾಗಿದೆ. ಅಂತಿಮ ಮತದಾರ ಪಟ್ಟಿಯಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 3238 ಪುರುಷರು, 1377 ಮಹಿಳೆಯರು ಸೇರಿದಂತೆ ಒಟ್ಟು 4615 ಶಿಕ್ಷಕ ಮತದಾರರು ಇದ್ದಾರೆ. ಇದರ ಅನ್ವಯ ಮೊಳಕಾಲ್ಮುರು ತಾಲ್ಲೂಕಿನಲ್ಲಿ 210 ಪುರುಷರು, 43 ಮಹಿಳೆಯರು ಸೇರಿದಂತೆ ಒಟ್ಟು 253 ಶಿಕ್ಷಕ ಮತದಾರರು ಇದ್ದಾರೆ. ಚಳ್ಳಕರೆ ತಾಲ್ಲೂಕಿನಲ್ಲಿ 683 ಪುರುಷರು, 220 ಮಹಿಳೆಯರು ಸೇರಿ ಒಟ್ಟು 903 ಶಿಕ್ಷಕ ಮತದಾರರು ಇದ್ದಾರೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 929 ಪುರುಷರು, 590 ಮಹಿಳೆಯರು ಸೇರಿ ಒಟ್ಟು 1519 ಶಿಕ್ಷಕ ಮತದಾರರು ಇದ್ದಾರೆ. ಹಿರಿಯೂರು ತಾಲ್ಲೂಕಿನಲ್ಲಿ 571 ಪುರುಷರು, 251 ಮಹಿಳೆಯರು ಸೇರಿ ಒಟ್ಟು 822 ಶಿಕ್ಷಕ ಮತದಾರರು ಇದ್ದಾರೆ. ಹೊಸದುರ್ಗ ತಾಲ್ಲೂಕಿನಲ್ಲಿ 499 ಪುರುಷರು, 166 ಮಹಿಳೆಯರು ಸೇರಿ ಒಟ್ಟು 665 ಶಿಕ್ಷಕ ಮತದಾರರು ಇದ್ದಾರೆ ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 346 ಪುರುಷರು, 107 ಮಹಿಳೆಯರು ಸೇರಿ ಒಟ್ಟು 453 ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 4615 ಶಿಕ್ಷಕ ಮತದಾರರು ಇದ್ದಾರೆ.

*ಮತದಾರರ ಪಟ್ಟಿಗೆ ಸೇರ್ಪಡೆಗೆ ಮೇ 6 ಕಡೆಯ ದಿನ :*

ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಲು ಮೇ 6 ಅಂತಿಮ ದಿನವಾಗಿದೆ. ಅರ್ಹ ಮತದಾರರು ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಜನವರಿ ತಿಂಗಳಿನಿಂದ ನಿರಂತರ ಪರಿಷ್ಕರಣೆಯಲ್ಲಿ ಸ್ವೀಕೃತವಾದ ಅರ್ಜಿಗಳು ಹಾಗೂ ಮೇ 6 ಸಂಜೆ 05:30 ಗಂಟೆಯವರೆಗೆ ಸ್ವೀಕರಿಸಲ್ಪಟ್ಟ ಅರ್ಜಿಗಳನ್ನು ನಿಯಮಾನುಸಾರ ಮತದಾರರಪಟ್ಟಿಗೆ ಸೇರ್ಪಡೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page