ಚಳ್ಳಕೆರೆ ಜನಧ್ವನಿ ವಾರ್ತೆ ನ.8 ಸಂಚಾರಿ ನಿಯಮ ಉಲ್ಲಂಘನೆ. ಸಮವಸ್ತ್ರ ಧರಿಸದೆ ವಾಹನ ಚಾಲನೆ ಮಾಡುವ ಆಟೋ ಚಾಲಕಿಗೆ ಪೋಲಿಸರ್ ಬಿಸಿ ಮುಟ್ಟಿಸಿದ್ದಾರೆ. ಹೌದು ಇದು ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣ. ನೆಹರು ವೃತ್ತ ಸೇರಿದಂತೆ ಮುಖ್ಯ ರಸ್ತೆಯಲ್ಲಿ ಆಟೋ ಚಾಲಕರು ಅಡ್ಡಾ ದಿಡ್ಡಿ ಸಂಚಾರ. ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ದಾಣಕ್ಕೆ ಬಂದ ತಕ್ಷಣ ಆಟೋಗಳು ಸುತ್ತಿವರಿದು ಪ್ರಯಾಣಿಕರಿಗೆ . ಪಾದಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಕಿರಿಕಿರಿ. ಆಟೋಚಾಲಕರು ಕಡ್ಡಾಯವಾಗಿ ವಾಹನಗಳಿಗೆ ವಿಮೆ ಅಗತ್ಯ ದಾಖಲೆಗಳನ್ನು ಹೊಂದಿರ ಬೇಕು ವಾಹನ ಸವಾರರು ಸನವಸ್ತ್ರ ಧರಿಸಬೇಕು.ವಾಹನ ಪರವಾನಿಗೆ. ಚಾಲನಾ ಪ್ರಮಾಣ ಪತ್ರ ಹೊಂದಿರ ಬೇಕು ಸಂಚಾರಿ ನಿಯಗಳ ಉಲ್ಲಂಘನೆ ಮಾಡಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ ಐ ಧೆರಪ್ಪ ಆಟೋ ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ಪಿಎಸ್ಐ ಶಿವರಾಜ್ ಮಾತನಾಡಿ ಆಟೋ ಚಾಲಕರು ಸಮವಸ್ತ್ರ ಧರಿಸದೇ ಇರುವುದರಿಂದ ಚಾಲಕರು ಯಾರು ಎಂಬುದು ಗೊತ್ತಾಗುವುದಿಲ್ಲ ಸಮವಸ್ತ್ರ ಹಾಕುವುದರಿಂದ ಶಿಸ್ತು ಮೂಡುತ್ತದೆ. ಸಂಚಾರಿ ನಿಯಮಗಳ ಉಲ್ಲಂಘನೆಯಿಂದ ಅಪಘಾತಗಳಿಗೆ ಕಾರಣವಾಗುತ್ತದೆ.
ಸೈಡ್ ಡ್ರೈವಿಂಗ್, ಚಕ್ರದಲ್ಲಿದ್ದಾಗ ಸೆಲ್‌ಫೋನ್‌ನಲ್ಲಿ ಮಾತನಾಡುವುದು. ನಿಗಧಿತ ಪ್ರಯಾಣಿಕರಿಗಿಂತ ಹೆಚ್ಚಿಗೆ ತುಂಬಿಕೊಳ್ಳುವುದು ಮತ್ತು ಟ್ರಾಫಿಕ್‌ಗೆ ಅಡ್ಡಿಯಾಗುವ ರೀತಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡುವುದು ರಸ್ತೆಯಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ನಿಲ್ಲಿಸುವುದು ಸಾರ್ವಜನಿಕ ಆಸ್ಪತ್ರೆಯ. ಪ್ರವೇಶ ಗೇಟ್ ನಲ್ಲಿ ವಾಹನ ನಿಲುಗಡೆ ಮಾಡುವುದರಿಂದ ಆಸ್ಪತ್ರೆಗೆ ರೋಗಿಗಳನ್ನು ಕರೆತರುವ ತುರ್ತು ವಾಹನಗಳಿಗೆ ಕಿರಿಯನ್ನುಂಟು ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಟೋ ಚಾಲಕರಿಗೆ ಅರಿವು ಮೂಡಿಸಿದರು
ಈ ಸಂದರ್ಭದಲ್ಲಿ ಪೋಲಿಸ್ ಸಿಬ್ಬಂದಿ ಹಾಗೂ ಆಟೋ ಚಾಲಕರು ಉಪಸ್ಥಿತರಿದ್ದರು.
ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೋಲಿಸ್ ಅಧಿಕಾರಿಗಳು.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments