ಆಲೂರುಗ್ರಾಮದ ಆನಂದಾಶ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಯಜ್ಞ ಯಾಗಾದಿ ಕಾರ್ಯ ಕ್ರಮಗಳಲ್ಲಿ ಪಾಲ್ಗೊಂಡು ಶುಭಕೋರಿದ ಜಿಲ್ಲಾಉಸ್ತುವಾರಿ ಸಚಿವರಾದ ಡಿ. ಸುಧಾಕರ್

by | 19/03/24 | ಸುದ್ದಿ


ಹಿರಿಯೂರು:
ನಮ್ಮ ಕ್ಷೇತ್ರವಾದ ಆಲೂರು ಗ್ರಾಮದ ಆನಂದಾಶ್ರಮದಲ್ಲಿ ಬ್ರಹ್ಮರ್ಷಿ ಶ್ರೀ ಶಂಕರಾನಂದ ಸ್ವಾಮಿಗಳ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಶತಚಂಡಿಕಯಾಗ ಶ್ರೀ ಶತರುದ್ರಯಾಗ ಮತ್ತು ಜ್ಞಾನಯಜ್ಞ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ನಮ್ಮ ಕ್ಷೇತ್ರದಲ್ಲಿ ಉತ್ತಮ ಮಳೆ-ಬೆಳೆ ಸಮೃದ್ಧಿಯಾಗಿ ರೈತರ ಬದುಕು ಹಸನಾಗಲಿ ಗ್ರಾಮಕ್ಕೂ ಸಹ ಒಳ್ಳೆಯದಾಗಲಿ ಎಂಬುದಾಗಿ ಕ್ಷೇತ್ರದ ಶಾಸಕರಾದ ಡಿ. ಸುಧಾಕರ್ ಹೇಳಿದರು.
ನಗರದ ಆಲೂರುಗ್ರಾಮದ ಆನಂದಾಶ್ರಮದಲ್ಲಿ ಬ್ರಹ್ಮರ್ಷಿ ಸುಖಾನುಭವಿ ಜಗನ್ನಾಥ ಸ್ವಾಮಿಗಳವರ 20 ನೇ ವರ್ಷದ ಪುಣ್ಯಾರಾಧನಾ ಮಹೋತ್ಸವದ ಅಂಗವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ ಹಮ್ಮಿಕೊಳ್ಳಲಾಗಿದ್ದ ಶ್ರೀಶತಚಂಡಿಕಯಾಗ, ಶ್ರೀಶತರುದ್ರಯಾಗ ಮತ್ತು ಜ್ಞಾನಯಜ್ಞ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶುಭಕೋರಿ ಅವರು ಮಾತನಾಡಿದರು
ಈ ಸಂಧರ್ಭದಲ್ಲಿ ಬ್ರಹ್ಮರ್ಷಿ ಶಂಕರಾನಂದ ಸ್ವಾಮಿಗಳು ಮಾತನಾಡಿ ನಮ್ಮ ಆನಂದಾಶ್ರಮದ ಸಂಸ್ಥಾಪಕರಾದ ಶ್ರೀ ಪದ್ಮೀಯ ದೇಶಿ ಕವರ್ಯ ಪೂಜ್ಯ ಪಾದ ಸದ್ಗುರು ಶ್ರೋ- ಬ್ರಹ್ಮರ್ಷಿ ಸುಖಾನುಭವಿ ಜಗನ್ನಾಥ ಸ್ವಾಮಿಗಳವರ 20 ನೇ ವರ್ಷದ ಪುಣ್ಯಾರಾಧನಾ ಮಹೋತ್ಸವದ ಅಂಗವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ ವಿವಿಧ ಯಜ್ಞ ಯಾಗಾದಿಗಳನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭಾಗವಹಿಸಿ ಶುಭ ಕೋರಿರುವುದು ನಮ್ಮ ಆಶ್ರಮ ವಾಸಿಗಳಿಗೆ ಹಾಗೂ ಗ್ರಾಮಸ್ಥರಿಗೆ ತುಂಬಾ ಸಂತಸ ತಂದಿದೆ. ಶ್ರೀಯುತ ಸುಧಾಕರ್ ರವರಿಗೆ ರಾಜ ರಾಜೇಶ್ವರಿ ಹೆಚ್ಚಿನ ಆಯಸ್ಸು, ಆರೋಗ್ಯ, ಅಧಿಕಾರ ಅಂತಸ್ತು ಕೊಟ್ಟು ಕಾಪಾಡಲಿ ಎಂಬುದಾಗಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಆನಂದಾಶ್ರಮದ ಕಾರ್ಯಕಾರಿ ಸಮಿತಿ ಕಾರ್ಯದರ್ಶಿಗಳಾದ ಪಿ.ಗಿರಿಸ್ವಾಮಿ, ಖಜಾಂಚಿ ಟಿ. ಯತೀಶ್ ಕುಮಾರ್, ನಿರ್ದೇಶಕರುಗಳಾದ ಜಿ.ಗೌಡ ವೀರಣ್ಣ, ಆರ್.ಮಂಜುನಾಥ, ಆರ್.ವೆಂಕಟೇಶ,.ಪುಟ್ಟರಾಜು, ಭಜನೆ ರಂಗಸ್ವಾಮಿ,. ತಿಪ್ಪೇಸ್ವಾಮಿ, ವಿ.ಷಣ್ಮುಗಂ, ಎಚ್.ಮಹೇಶ್ ಕುಮಾರ್, ಶ್ರೀಮತಿ ಭಾಗ್ಯಮ್ಮ, ಶ್ರೀಮತಿ ಎಂ.ರಾಧಮ್ಮ, ತಾ.ಪಂ ಮಾಜಿ ಸದಸ್ಯೆ ಶ್ರೀಮತಿ ತಿಪ್ಪಮ್ಮ,ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹೇಮಲತ, ಎಮ್ ಜಿ ಕಾಲೋನಿ ಶಂಭು, ಮೇಘರಾಜ್, ಶ್ರೀರಾಮಾಂಜನೇಯ ದೇವಸ್ಥಾನ ಅಭಿವೃದ್ಧಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಟಿ.ಏಕಾಂತರಾಮು, ಕಾರ್ಯದರ್ಶಿ ಗಿರೀಶ್ ಗೌಡ್ರು, ಕಾಂಗ್ರೆಸ್ ಮುಖಂಡರಾದ ಜಯರಾಂ, ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page