ಆ.13 ಇಂದಿನಿಂದ 15 ರವರೆಗೆ ಹರ್ ಘರ್ ತಿರಂಗಾ ಮನೆ ಮನಗಳಲ್ಲಿ ಹಾರಾಡಲಿ ರಾಷ್ಟ್ರಧ್ವಜ : ಮೆರೆಯಲಿ ರಾಷ್ಟ್ರಪ್ರೇಮ-ಬಿ.ಟಿ. ಕುಮಾರಸ್ವಾಮಿ

by | 13/08/24 | ಸುದ್ದಿ

ಚಿತ್ರದುರ್ಗ ಆ.12:
78ನೇ ಸ್ವಾತಂತ್ರ್ಯಮಹೋತ್ಸವ ಹಿನ್ನಲೆಯಲ್ಲಿ ಆ.13 ಇಂದಿನಿಂದ 15 ವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಮೂರು ದಿನಗಳ ಕಾಲ ಜಿಲ್ಲೆಯ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಹರ್ ಘರ್ ತಿರಂಗಾ ಅಬಿಯಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ. ಇದಕ್ಕೆ ಚ್ಯುತಿ ಬಾರದ ಹಾಗೆ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ, ಅದರ ಸೆಲ್ಫೀ ಫೋಟೋವನ್ನು ವೆಬ್‍ಸೈಟ್ hargartiranga.com ನಲ್ಲಿ ಅಪ್‍ಲೋಡ್ ಮಾಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.
ಆಗಸ್ಟ್ 13 ರಿಂದ 15 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ನ್ಯಾಯಬೆಲೆ ಅಂಗಡಿ, ಸಂಘ-ಸಂಸ್ಥೆಗಳು, ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಬಾವುಟಕ್ಕೆ ಅಗೌರವ ತೋರಬಾರದು. ಕಡ್ಡಾಯವಾಗಿ ಧ್ವಜ ಸಂಹಿತೆಯನ್ನು ಪಾಲಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು. ಧ್ಜಜ ಸಂಹಿತೆಯಂತೆ ಪ್ರತಿದಿನ ಸಂಜೆ ಸೂರ್ಯಾಸ್ತದ ಮೊದಲು ಧ್ವಜವನ್ನು ಇಳಿಸಬೇಕು. ಈ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಬೈಕ್ ರ್ಯಾಲಿ ಹಾಗೂ ದೇಶಭಕ್ತಿ ಗೀತೆಗಳ ಗಾಯನ:

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸ್ಥಳೀಯ ಸಂಸ್ಥೆಗಳು, ನಗರಸಭೆ, ಕ್ರೀಡಾ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಹಯೋಗದೊಂದಿಗೆ ಆಗಸ್ಟ್ 13 ರಂದು ಬೈಕ್ ರ್ಯಾಲಿ ಆಯೋಜಿಸಬೇಕು. ಆಗಸ್ಟ್ 14 ರಂದು ಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಿರಂಗಾ ಯಾತ್ರೆ ಕೈಗೊಳ್ಳಬೇಕು. ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಹೋರಾಟದ ಮಹತ್ವ ಸಾರಲು ಚಿತ್ರಕಲೆ, ದೇಶ ಭಕ್ತಿ ಗೀತೆ, ಆಶುಭಾಷಣ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು. ಆಗಸ್ಟ್ 14 ರಂದು ಸಂಜೆ 5:30ಕ್ಕೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರ ಸಭೆ ವತಿಯಿಂದ ದೇಶಭಕ್ತಿ ಗೀತೆಗಳ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಕಚೇರಿಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಿರ್ದೇಶನ ನೀಡಿದರು.
ನಗರದ ತ.ರಾ.ಸು. ರಂಗಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ 5000 ರಾಷ್ಟ್ರಧ್ವಜಗಳು ಲಭ್ಯವಿದ್ದು, ಪ್ರತಿ ರಾಷ್ಟ್ರಧ್ವಜಕ್ಕೆ ರೂ.26 ದರ ನಿಗದಿಪಡಿಸಲಾಗಿದೆ. ಧ್ವಜ ಬೇಕಾದವರು ಖರೀದಿಸಬಹುದು. ಎಲ್ಲರಿಗೂ ಸುಲಭವಾಗಿ ಲಭ್ಯವಾಗುವ ರೀತಿಯ ಪ್ರತಿ ಅಂಚೆ ಕಚೇರಿ ಹಾಗೂ ರೈಲ್ವೇ ನಿಲ್ದಾಣಗಳಲ್ಲಿಯೂ ರಾಷ್ಟ್ರಧ್ವಜ ಮಾರಾಟ ಮಾಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿ.ಪಂ. ಉಪಕಾರ್ಯದರ್ಶಿ ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಸುಬ್ರಾನಾಯ್ಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Latest News >>

ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿ‌ಪರಿಶೀಲನೆ.

ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...

ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಿದ್ದತೆ ಸೆ.12 ರಂದು ಎನ್.ಜಿ.ಓ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ

ಚಿತ್ರದುರ್ಗ ಸೆ.10: ರಾಜ್ಯದ ಉತ್ತರ ತುದಿಯಿಂದ ದಕ್ಷಿಣ ತುದಿಯವರೆಗೆ ಮಾನವ ಸರಪಳಿ ರಚಿಸುವ ಮೂಲಕ ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಸೆ.14 ರಿಂದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ: ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ

ಚಿತ್ರದುರ್ಗ. ಸೆ.10: ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನವನ್ನು ಜಿಲ್ಲೆಯಾದ್ಯಂತ ಇದೇ ಸೆ.14 ರಿಂದ ಅಕ್ಟೋಬರ್ 2 ರವರೆಗೆ...

ಮಲ್ಲೂರಹಳ್ಳಿ ಗ್ರಾಮದ .ಅಂಗವಾಡಿ ಬಿ. ಕೇಂದ್ರದಲ್ಲಿ ಪೂರಕ ಪೌಷ್ಟಿಕ ಆಹಾರ ಶಿಬಿರಕ್ಕೆ ಚಾಲನೆ ನೀಡಿದ ಮುಖ್ಯ ಶಿಕ್ಷಕ ನಾರಾಯಣ ನಾಯ್ಕ.

ನಾಯಕನಹಟ್ಟಿ:: ತಾಯಿ ಮಗುವಿನ ಆರೋಗ್ಯಕ್ಕ ಪೌಷ್ಟಿಕ ಆಹಾರ ಅವಶ್ಯಕ ಎಂದು ಮಲ್ಲೂರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ...

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಸಾರ್ವಜನಿಕರಿಗೆ ಆತಂಕ ಬೇಡ: ಹೆಚ್ಎಂ ರೇವಣ್ಣ ಭರವಸೆ 

ಚಳ್ಳಕೆರೆ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತದೆ...

ಸೆ.. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ರಾಜ್ಯಾದ್ಯಂತ ಏಕಕಾಲಕ್ಕೆ ಮಾನವಸರಪಳಿ ನಿರ್ಮಾಣ ಜಿಲ್ಲೆಯಲ್ಲಿ 110 ಕಿ.ಮೀ. ಮಾನವ ಸರಪಳಿ ಯಶಸ್ವಿಗೊಳಿಸಲು ಸಿದ್ಧತೆ- ಡಿ. ಸುಧಾಕರ್ ಸೂಚನೆ

ಚಳ್ಳಕೆರೆ ಸೆ. 9 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಇದೇ ಸೆ. 15 ರಂದು ರಾಜ್ಯಾದ್ಯಂತ ಬೀದರ್‍ ನಿಂದ ಚಾಮರಾಜನಗರ ವರೆಗೆ...

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page