ಇಂದಿನ ಅಧುನಿಕ ಕಾಲಘಟ್ಟದಲ್ಲೂ ಸಹ ಶ್ರೀ ರಾಮಾನುಜಾಚಾರ್ಯರ ತತ್ವಾದರ್ಶಗಳು ತೀರಾ ಪ್ರಸ್ತುತವಾಗಿದೆ ಎಂದು ಮೇಲುಕೋಟೆಯ ಯದುಗಿರಿ ಮಠದ ಶ್ರೀ ಶ್ರೀ ಯದುಗಿರಿ ಯತಿರಾಜ ರಾಮಾನುಜ ನಾರಾಯಣ ಜೀಯರ್ ಸ್ವಾಮೀಜಿ.

by | 16/05/24 | ಸುದ್ದಿ

‌‌
ಪರಶುರಾಮಪುರ
ಇಂದಿನ ಅಧುನಿಕ ಕಾಲಘಟ್ಟದಲ್ಲೂ ಸಹ ಶ್ರೀ ರಾಮಾನುಜಾಚಾರ್ಯರ ತತ್ವಾದರ್ಶಗಳು ತೀರಾ ಪ್ರಸ್ತುತವಾಗಿದೆ ಎಂದು ಮೇಲುಕೋಟೆಯ ಯದುಗಿರಿ ಮಠದ (ಮಲ್ಲೇಶ್ವರಂ ಬೆಂಗಳೂರು)41 ನೇ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಯದುಗಿರಿ ಯತಿರಾಜ ರಾಮಾನುಜ ನಾರಾಯಣ ಜೀಯರ್ ಸ್ವಾಮಿಗಳ ಅಭಿಪ್ರಾಯಪಟ್ಟರು
ಗ್ರಾಮದ ಪಾವಗಡ ರಸ್ತೆಯ ಲಕ್ಷ್ಮಿಚನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಶ್ರೀ ವೈಷ್ಣವ ಮಹಾಸಭಾ (ರಿ) ಬೆಂಗಳೂರು ಹಾಗೂ ಭಗವದ್ ಶ್ರೀ ರಾಮಾನುಜಾಚಾರ್ಯರ ಜಯಂತ್ಯುತ್ಸವ ಸಮಿತಿ (ರಿ) ಪರಶುರಾಮಪುರ ಹಾಗೂ ಆಂಧ್ರ ಮತ್ತು ಕರ್ನಾಟಕ ರಾಜ್ಯಗಳ ಶ್ರೀ ವೈಷ್ಣವ ಸಮುದಾಯದ ವತಿಯಿಂದ ಗ್ರಾಮದಲ್ಲಿ ಭಗವದ್ ಶ್ರೀ ರಾಮಾನುಜಾಚಾರ್ಯರ 1007 ನೇ ಜಯಂತ್ಯುತ್ಸವದ ಸಂಭ್ರಮಾಚರಣೆ ಪ್ರಯುಕ್ತ ಪಿಆರ್‌ಪುರದಲ್ಲಿ 35 ನೇ ಶ್ರೀ ರಾಮಾನುಜಾಚಾರ್ಯರ ಜಯಂತ್ಯುತ್ಸವದ ಅಂಗವಾಗಿ ಗುರುವಾರ ಆಯೋಜಿಸಿದ್ದ ಉಪನಯನದ ವಟುಗಳಿಗೆ ಶ್ರೀ ಗಳಿಂದ ಸಮಾಶ್ರಯಣ, ಮುದ್ರಾಧಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು
ಲೋಕ ಕಲ್ಯಾಣಾರ್ಥವಾಗಿ ಮಹಾಸುದರ್ಶನ ಹೋಮ ಹಾಗೂ ಪೂರ್ಣಾಹುತಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಉಪನಯನ ಕಾರ್ಯಕ್ರಮದ ಪೌರೋಹಿತ್ಯ ನೇತೃತ್ವವನ್ನು ಉಭಯ ವೇದಾಂತ ವಿದ್ವಾನ್ ಮಧುಸೂಧನ್ ಭಟ್ಟರು ಕತ್ರಿಗುಪ್ಪೆ, ಬೆಂಗಳೂರು, ಯಲಹಂಕದ ರಾಮು ರಾಮಾನುಜಜಂ ತುಮಕೂರಿನ ಶ್ರೀನಿವಾಸರಾಜ್ ತುಳಸೀ ಆಚಾರ್ಯರು ತಾವರೇಕೆರೆಯ ಹರಿಪ್ರಸಾದ್ ದಾವಣಗೆರೆಯ ಸುನಿಲ್ ಆಚಾರ್ಯ ನಡೆಸಿಕೊಟ್ಟರು
ಗುರುವಾರ ಬೆಳಗ್ಗೆ ಗ್ರಾಮದ ಲಕ್ಷ್ಮಿಚನ್ನಕೇಶವಸ್ವಾಮಿ ರಾಮಾನುಜಾಚಾರ್ಯರಿಗೆ ಪಂಚಾಮೃತಾಭಿಷೇಕ ಹಾಗೂ ಹೂವಿನ ಅಲಂಕಾರ ಸೇವೆ ಸಲ್ಲಿಸಿದರು
ಶ್ರೀಗಳನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಿದ ಶ್ರೀ ವೈಷ್ಣವ ಸಮಾಜದವರು; ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಗ್ರಾಮಕ್ಕೆ ಆಗಮಿಸಿದ ಶ್ರೀ ಶ್ರೀ ಯದುಗಿರಿ ಯತಿರಾಜ ರಾಮಾನುಜ ನಾರಾಯಣ ಜೀಯರ್ ಸ್ವಾಮಿಗಳನ್ನು ಶ್ರೀ ವೈಷ್ಣವ ಸಮುದಾಯದವರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು ಆಂಧ್ರ ಕರ್ನಾಟಕ ರಾಜ್ಯಗಳ ಸಹಸ್ರಾರು ಭಕ್ತರು ಆಗಮಿಸಿದ್ದರು
ಸಂದರ್ಭದಲ್ಲಿನ ಅಖಿಲ ಕರ್ನಾಟಕ ಶ್ರೀ ವೈಷ್ಣವ ಮಹಾಸಭಾದ ಅಧ್ಯಕ್ಷ ರವಿ ನರಸಿಂಹನ್ ಕಾರ್ಯದರ್ಶಿ ಸುಗಂಧರಾಜು, ಸಾಲುಕಟ್ಟೆ ಶ್ರೀನಿವಾಸ, ಎಸ್ ಅನಂತ್, ಕೆ ಎಸ್ ಶ್ರೀನಿವಾಸ ಹೊಸದುರ್ಗ, ದಾವಣಗೆರೆಯ ವರದರಾಜು, ಚನ್ನಗಿರಿಯ ನರಸಿಂಹಮೂರ್ತಿ, ಶಿವಮೊಗ್ಗದ ಎಸ್ ಆರ್ ಗಿರೀಶ, ಗೌರವಾಧ್ಯಕ್ಷ ಟಿ ಎಲ್ ವೆಂಕಟರಾಜು, ಆಡಳಿತ ಮಂಡಳಿಯ ಅಧ್ಕಕ್ಷ ಎಸ್ ಎಚ್ ಸತ್ಯನಾರಾಯಣಮೂರ್ತಿ, ಕೆ ಬಿ ರಾಮಕೃಷ್ಣ, ಎಸ್ ಹನುಮಂತರಾಯ, ಪ್ರಭಾಕರ, ಗೋಪಾಲ, ಪಿ ಎಸ್ ಸುರೇಶ, ಪಿ ಎಸ್ ನಾಗರಾಜು, ದಿವಾಕರಮೂರ್ತಿ, ಎಸ್ ಶ್ರೀನಿವಾಸ, ಎಸ್ ಆದಿತ್ಯ, ರಂಗನಾಥ, ಗಾಯತ್ರಮ್ಮ, ಗೌರಮ್ಮ, ಅಶೋಕ ಮತ್ತಿತರರು ಭಾಗವಹಿಸುವರು ಎಂದು ಆಡಳಿತ ಮಂಡಳಿಯ ಅಧ್ಕ÷್ಷ ಎಸ್ ಎಚ್ ಸತ್ಯನಾರಾಯಣಮೂರ್ತಿ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಶ್ರೀ ವೈಷ್ಣವ ಸಮುದಾಯದವರು ಪಾಲ್ಗೊಂಡಿದ್ದರು

Latest News >>

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ಲಕ್ಕೂರ ಆನಂದರ ಸಾಹಿತ್ಯ ಕೃಷಿ ನಾಡಿಗೆ ಪರಿಚಯಿಸಬೇಕಿದೆ: ಹುಲಿಕುಂಟೆ ಮೂರ್ತಿ

ಚಿತ್ರದುರ್ಗ ಮೇ.26 ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ಆನಂದ್ ಸಿ.ಲಕ್ಕೂರು ಮಾಡಿರುವ ಸಾಹಿತ್ಯ ಕೃಷಿಯನ್ನು...

ಕುಂಚಿಟಿಗರಿಗೆ ಕೇಂದ್ರ OBC ಮೀಸಲಾತಿಗಿಂತ EWS ಮೀಸಲಾತಿ ಉತ್ತಮ -ಎಸ್ ವಿ ರಂಗನಾಥ್.

ಹಿರಿಯೂರು ಇತ್ತೀಚೆಗೆ ಕುಂಚಿಟಿಗ ಸಮಾಜದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಏನೆಂದರೆ ಅದು ಕುಂಚಿಟಿಗರಿಗೆ ಕೇಂದ್ರ ಸರ್ಕಾರದ OBC...

ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದ ಕಾರಣ ಚಾನಲ್ ಒಳಗಡೆ ನೀರಿನಲ್ಲಿ ಇಳಿದು ಸಾಗಬೇಕು ಎಂಬುದು ಗ್ರಾಮಸ್ಥರ ಅಳಲು

ಹಿರಿಯೂರು: ತಾಲ್ಲೂಕಿನ ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಸರಿಯಾದ ದಾರಿ ಇಲ್ಲದ ಕಾರಣ ಈ ಊರಲ್ಲಿ ಯಾವುದೇ ವ್ಯಕ್ತಿ ಸತ್ತರೆ ಆ...

ವರಣುನ ಆರ್ಭಟಕ್ಕೆ ನೆಲಕ್ಕುರಿಳೆ ಬೆಳೆ- ಮನೆಗಳಿಗೆ ನುಗ್ಗಿದ ನೀರು-ಹಳ್ಳಕೊಳ್ಳಗೆ ನೀರು..

ಚಳ್ಳಕೆರೆ ಮೇ25 ವರುಣನ ಆರ್ಭಟಕ್ಕೆ ತೋಟಗಾರಿಕೆ ಬೆಳೆಗಳು ನೆಲಕ್ಕುರಿಳಿದರೆ ಮನೆಗಳಿಗೆ ನೀರು ನುಗ್ಗಿದ ಘಟನೆ ಜರುಗಿದೆ. ತಾಲೂಕಿನಾದ್ಯಂತ...

ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ. ₹ 71.41.325 ರೂ ಸಂಗ್ರಹ ಸಂತಾನ ಭಾಗ್ಯ ನೌಕರಿ ಆರ್ಥಿಕ ಆರೋಗ್ಯ ಸಂಪತ್ತು ಕರುಣಿಸುವಂತೆ ಹುಂಡಿಯಲ್ಲಿ ಲಿಖಿತ ಪತ್ರಗಳು‌ ಪತ್ತೆ ..!.

ನಾಯಕನಹಟ್ಟಿ:: ಮೇ.24. ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು...

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page