ಚಳ್ಳಕೆರೆ ಜನಧ್ವನಿ ವಾರ್ತೆ ಫೆ.10. ಹದಿನೆಂಟು ವರ್ಷ ತುಂಬಿದ ಹಾಗೂ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತಚಲಾಯಿಸುವಂತೆ ಸೆಕ್ಟರ್ ಅಧಿಕಾರಿ ಹಾಗೂ ತೋಟಗಾರಿಕೆ ಅಧಿಕಾರಿ ಶ್ರೀನಿವಾಸ್ ಹೇಳಿದರು. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಕೇಂದ್ರದ ಬಳಿ ಮುಂಬರುವ ವಿಧಾನ ಸಭಾ ಚುನಾವಣೆ ಅಂಗವಾಗಿ. ಇವಿಎಂ ಮತ್ತು ವಿವಿ ಪ್ಯಾಟ್‍ಗಳ ಮತ ಯಂತ್ರದ ಬಗ್ಗೆ ಪ್ರತ್ಯಾಕ್ಷತೆ ಜಾಗೃತಿ ಮೂಡಿಸಿ ಮಾತಮಾಡಿದರು. ವಿವಿ ಪ್ಯಾಡ್ ಮತಯಂತ್ರಗಳನ್ನು ಯಾವುದೇ ರೀತಿಯಲ್ಲೂ ಹ್ಯಾಕ್, ಟ್ಯಾಂಪರಿಂಗ್ ಮಾಡುವುದಕ್ಕೆ ಸಾಧ್ಯವಿಲ್ಲ.
ವಿವಿ ಪ್ಯಾಟ್ ಬಳಕೆಯಿಂದ ತಾನು ಯಾರಿಗೆ ಮತದಾನ ಮಾಡಿದ್ದೇನೆ ಎಂಬುದನ್ನು ಮತದಾರ ಮತದಾನ ಮಾಡಿದ ಕ್ಷಣದಲ್ಲಿ ವೀಕ್ಷಿಸಬಹುದಾಗಿದೆ. ಬ್ಯಾಲೆಟ್ ಯುನಿಟ್‍ನಲ್ಲಿ ಮತಗುಂಡಿ ಒತ್ತಿದ ನಂತರ, ಮತದಾರ, ತಾನು ಮತದಾನ ಮಾಡಿದ ವಿವರ ವಿವಿಪ್ಯಾಟ್‍ನಲ್ಲಿ 7 ಸೆಕೆಂಡ್‍ವರೆಗೆ ಪ್ರದರ್ಶನಗೊಳ್ಳಲಿದೆ. ಮತ ಚಲಾಯಿಸಿದ ಮತದಾರ ಮಾತ್ರ ವೀಕ್ಷಿಸಲು ಅವಕಾಶವಿರುತ್ತದೆ. ಇದರಿಂದ ಯಾವುದೇ ಗೊಂದಲ, ಸಮಸ್ಯೆ, ಅನುಮಾನ ಮತದಾರನಿಗೆ ಉಳಿಯುವುದಿಲ್ಲ. ತಾನು ಮತಚಲಾಯಿಸಿದ ವ್ಯಕ್ತಿ ಅಥವಾ ಚಿಹ್ನೆಗೆ ಮತದಾನವಾದ ಕುರಿತಂತೆ ಖಾತ್ರಿಪಡಿಸಿ ಮತಗಟ್ಟೆಯ ಕೊಠಡಿಯಿಂದ ತೆರಳಬಹುದಾಗಿದೆ.
ಪ್ರಜಾ ಪ್ರಭುತ್ವದಲ್ಲಿ ಚುನಾವಣಾ ಪ್ರಕ್ರಿಯೆ ಜೀವಾಳವಾಗಿದೆ ಪ್ರತಿಯೊಬ್ಬ ಅರ್ಹ ಮತದಾರರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಈ ವ್ಯವಸ್ಥೆಯನ್ನು ಸದೃಢಗೊಳಿಸಬೇಕು ಎಂದು ಹೇಳಿದರು.
ಸೆಕ್ಟರ್ ಅಧ ಮೋಹನ. ಗ್ರಾಮ ಲಕ್ಕಾಧಿಕಾರಿ ಸಂಘರ್ಷ ಬಾಬು ಇತರರಿದ್ದರು