ಚಳ್ಳಕೆರೆ ಅ.20. ಈ ಬರ ಬರಗಾಲವಿರುವುದರಿಂದ ಯಾರಿಗೂ ಹೊರೆಯಾಗದೆ ಸರಳವಾಗಿ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ದವ ಆಚರಣೆ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ನವೆಂಬರ್ 1ರಂದು ನಡೆಸುವ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಅರ್ಹರನ್ನು ಗುರುತಿಸಿ ಸಮಿತಿ ಮೂಲಕ ಕನ್ನಡ ರಸಜ್ಯೋತ್ಸವ ಪ್ರಶಸ್ತಿ ನೀಡಿ ಗೌರವ ಕೆಲಸ ಆಗ ಬೆರಕು ಕಾರ್ಯಕ್ರಮದ ಹೆಸರಿನಲ್ಲಿ ಅಧಿಕಾರಿಗಳಿಂದ ಹಣ ವಸೂಲಿ ಬೇಡ ಇರುವ ವ್ಯವಸ್ಥೆಯಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಸುವಂತೆ ತಿಳಿಸಿದರು.


ತಾಲೂಕು ಕವೇರಿಂದ ಮೆರವಣಿಗೆ ಮೂಲಕ ವೇದಿಕೆಯತ್ತ ಬರಲಾಗುವುದು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲು ಸೂಚಿಸಲಾಯಿತು.
ಕೃಷಿ, ಶಿಕ್ಷಣ ,, ಇನ್ನಿತರ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಕೊಟ್ಟು ಗೌರವಿಸುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ತಾಪಂ ಇಒ ಹೊನ್ನಯ್ಯ. ಚಳ್ಳಕೆರೆ ಠಾಣೆಯ ಪಿ ಐ ದೇಸಾಯಿ.ಕ್ಷೇತ್ರಶಿಕ್ಷಣಾಧಿಕಾರಿ ಸುರೇಶ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
0 Comments