ಈ ಬಾರಿಯ ಎಸ್ಎಸ್ ಎಲ್ ಸಿ ಫಲಿತಾಂಶದ ಕುಸಿತದ ಹಿನ್ನಲೆಯಲ್ಲಿ ಸಂಬಂಧಪಟ್ಟ ಅಧಿಕಾರಿ ವರ್ಗದವರನ್ನ ಅಮಾನತಗೊಳಿಸಲು ರಾಜ್ಯ ರೈತ ಸಂಘದಿಂದ ಆಗ್ರಹ

by | 15/05/24 | ಪ್ರತಿಭಟನೆ


ಹಿರಿಯೂರು:
ತಾಲ್ಲೂಕಿನಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲ್ಲೂಕುನಿರೀಕ್ಷಿತ ಮಟ್ಟದಲ್ಲಿ ಫಲಿತಾಂಶ ಗಳಿಸದಿರುವ ಹಿನ್ನಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಆರ್ ಪಿಓಗಳು ಹಾಗೂ ಫ್ರೌಢಶಾಲಾ ಮುಖ್ಯ ಶಿಕ್ಷಕರುಗಳನ್ನು ಅಮಾನತುಗೊಳಿಸಬೇಕು ಎಂಬುದಾಗಿ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮನವಿ ನೀಡಿದ ನಂತರ ತಾಲ್ಲೂಕು ಅಧ್ಯಕ್ಷ ಕೆ.ಟಿ.ತಿಪ್ಪೇಸವಾಮಿ ಮಾತನಾಡಿ ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡುತ್ತಿದ್ದ ತಾಲ್ಲೂಕಿನ ವಿದ್ಯಾರ್ಥಿಗಳ ಫಲಿತಾಂಶ ಈ ಬಾರಿ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಅನುದಾನಿತ ಹಾಗೂ ಖಾಸಗಿ ಶಾಲೆಗಳ ಫಲಿತಾಂಶಕ್ಕಿಂತ ಸರ್ಕಾರಿ ಶಾಲೆಗಳ ಫಲಿತಾಂಶ ಕಡಿಮೆಯಾಗಿದೆ.
ಕಳೆದ ಬಾರಿ ಚಿತ್ರದುರ್ಗ ಜಿಲ್ಲೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿತ್ತು. ಆದರೆ ಒಂದೇ ವರ್ಷಕ್ಕೆ ಜಿಲ್ಲೆಯೂ ಸಹ 21 ನೇ ಸ್ಥಾನಕ್ಕೆ ಕುಸಿದಿದೆ. ಗ್ರಾಮೀಣ ಭಾಗಗಳಲ್ಲಿ ಅತೀ ಹೆಚ್ಚು ರೈತ ಮಕ್ಕಳು, ಕೂಲಿ ಕಾರ್ಮಿಕರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಾರೆ.
ಉತ್ತಮ ಶಿಕ್ಷಣ ದೊರೆಯಲಿ ಎಂದು ಸರ್ಕಾರ ಹೆಚ್ಚಿನ ಅನುದಾನವನ್ನು ಸಹ ಒದಗಿಸುತ್ತದೆ.ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂಬ ಅನುಮಾನ ಮೂಡುತ್ತಿದ್ದು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ.
ಆದ ಕಾರಣ ಈ ಬಾರಿಯ ಕಳಪೆ ಫಲಿತಾಂಶ ಬರಲು ಕಾರಣವಾಗಿದೆ. ಈ ಬಗ್ಗೆ ಸರ್ಕಾರ ತನಿಖಾ ತಂಡ ರಚಿಸಿ ಸೂಕ್ತ ತನಿಖೆ ನಡೆಸಿ ನಿಯಮಾನುಸಾರ ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂಬುದಾಗಿ ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಸಿದ್ದರಾಮಣ್ಣ, ಅರಳಿಕೆರೆ ತಿಪ್ಪೇಸ್ವಾಮಿ, ತಿಮ್ಮಾರೆಡ್ಡಿ, ಗೋಪಾಲಪ್ಪ, ರಂಗಸ್ವಾಮಿ, ಮೀಸೆ ರಾಮಣ್ಣ, ಜಗನ್ನಾಥ್, ರಾಜೇಶ್, ರಾಮಕೃಷ್ಣ, ದಾಸಪ್ಪ, ಬಾಲಕೃಷ್ಣ, ಚಂದ್ರಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page