ಉದ್ಯೋಗದಲ್ಲಿನ ಒತ್ತಡಗಳ ನಿವಾರಣೆಗಾಗಿ ಯುವ ಜನತೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದ ಸಂಗತಿ: ವಿನಯ್ ಕುಮಾರ್ ಸುವರ್ಣ ಅಭಿಮತ

by | 23/01/24 | ಆರೋಗ್ಯ


ಚಳ್ಳಕೆರೆ:ಇತ್ತೀಚಿನ ದಿನಗಳಲ್ಲಿ ಉದ್ಯೋಗದಲ್ಲಿನ ಒತ್ತಡಗಳ ನಿವಾರಣೆಗಾಗಿ ಯುವ ಜನತೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಅತ್ಯಂತ ವಿಷಾದ ಸಂಗತಿಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾ ಜಿಲ್ಲಾ ನಿರ್ದೇಶಕ ವಿನಯ್ ಕುಮಾರ್ ಸುವರ್ಣ ಅಭಿಪ್ರಾಯಪಟ್ಟರು.

ನಗರದ ಬಿ ಎಂ ಜಿ ಎಚ್ ಎಸ್ ಶಾಲಾ ಅವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಹಾಗೂ ಚಳ್ಳಕೆರೆ ಯೋಜನಾ ಕಚೇರಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪಾನಮುಕ್ತ ಸದಸ್ಯರ ನವ ಜೀವನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಮಧ್ಯ ವ್ಯಸನಿಗಳನ್ನು ಕೀಳಾಗಿ ಕಾಣಲಾಗುತ್ತಿದೆ ಕೆಲವರು ಒತ್ತಡಗಳಿಗೆ ಒಳಗಾಗಿ ಇಂತಹ ದುಶ್ಚಟಗಳಿಗೆ ಬಲಿಯಾದರೆ ಇನ್ನು ಕೆಲವರು ಮೋಜು-ಮಸ್ತಿಗಾಗಿ ಮಧ್ಯವ್ಯಸನ ಮಾಡುತ್ತಾರೆ ಈ ಎಲ್ಲಾ ಸಂದರ್ಭಗಳನ್ನು ಮನಗಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಮಧ್ಯವರ್ಜನ ಶಿಬಿರಗಳನ್ನು ಸಮಿತಿ ವತಿಯಿಂದ ರಾಜ್ಯದಾದ್ಯಂತ ಕೈಗೊಂಡು ಯುವಜನತೆಯಲ್ಲಿ ಅರಿವು ಮೂಡಿಸಿದರ ಫಲವಾಗಿ ಇಂದು ಅನೇಕ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿವೆ ಇದು 1736ನೇ ಕಾರ್ಯಕ್ರಮವಾಗಿದ್ದು ತಾಲೂಕಿನ ಯುವ ಜನತೆ ಇದರ ಸದುಪಯೋಗ ಪಡೆದುಕೊಂಡು ನವ ಜೀವನೋತ್ಸಾಹ ಕಂಡುಕೊಂಡಿದ್ದಾರೆ ಮುಂದಿನ ದಿನಗಳಲ್ಲಿ ಇಂತಹ ಇನ್ನು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡು ಗ್ರಾಮೀಣ ಪ್ರದೇಶಗಳಲ್ಲಿಯೂ ಸಹ ಮಧ್ಯ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೊಡ್ಡರಂಗಪ್ಪ ಮಾತನಾಡಿ ಮಹಾತ್ಮ ಗಾಂಧೀಜಿಯವರ ಮಧ್ಯಮುಕ್ತ ಕನಸಿನ ಭಾರತ ಕಟ್ಟಲು ಯುವ ಜನತೆ ಮನಸ್ಸು ಮಾಡಬೇಕು ಮಧ್ಯವ್ಯಸನದಂತಹ ದುಷ್ಟಗಳಿಗೆ ಬಲಿಯಾಗುವ ಮುನ್ನ ತಮ್ಮ ಕುಟುಂಬದ ಹಾಗೂ ಮನೆಯ ಪರಿಸ್ಥಿತಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹು ಮುಖ್ಯವಾಗಿದೆ ತಾವು ದುಡಿದ ಹಣವನ್ನು ದುಶ್ಚಟಗಳಿಗೆ ಹಾಳು ಮಾಡದೆ ಕುಟುಂಬದ ನಿರ್ವಹಣೆಗಾಗಿ ಬಳಸಿದರೆ ಉತ್ತಮ ಜೀವನ ನಿರ್ವಹಣೆಗೆ ಸಹಕಾರಿಯಾಗುತ್ತದೆ ಈ ನಿಟ್ಟಿನಲ್ಲಿ ಯುವ ಜನತೆ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ಶಶಿಕಲಾ 

ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ನಾಗರಾಜ್ ಕುಲಾಲ್ ಮತ್ತು ಸಹಾಯಕ ಶಿಭಿರಾಧಿಕಾರಿ ರುದ್ರಪ್ಪ.ಗೌರವಾಧ್ಯಕ್ಷರಾದ ಪ್ರಕಾಶ್ ಸಲ್ವೆಂಟ್ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ನೇತಾಜಿ ಪ್ರಸನ್ನ ಮೇಲ್ವಿಚಾರಕರಾದ ಆರ್ ಅಶೋಕ್ ಮತ್ತು ಯೋಜನೆಯ ಮುಖ್ಯಸ್ಥರಾದ ಭವಾನಿ ವಿಮಲಾ.ಬೇಬಿ, ಭರತ್

ಮತ್ತು ಸಂಸ್ಥೆಯ ನೌಕರರು ಹಾಜರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page