ಚಿತ್ರದುರ್ಗ ಅ.07:
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1ರಲ್ಲಿ ಬರುವ ಉಪ್ಪಾರ ಮತ್ತು ಅದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ 2023-24ನೇ ಸಾಲಿಗೆ ಸಾಲ ಸಾಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ, ಅರಿವು-ಶೈಕ್ಷಣಿಕ ಸಾಲ ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ, ಯೋಜನೆಯಡಿ ಆಸಕ್ತರು ಸಾಲ ಸೌಲಭ್ಯ ಪಡೆಯಬಹುದು. ಆನ್‍ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ನವೆಂಬರ್ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
ರಾಜ್ಯದ ಖಾಯಂ ನಿವಾಸಿಗಳಾದ, ಉಪ್ಪಾರ ಹಾಗೂ ಅದರ ಉಪ ಸಮುದಾಯಗಳಿಗೆ ಸೇರಿದ ಜಾತಿ ಆದಾಯ ಪ್ರಮಾಣ ಪತ್ರ ಹೊಂದಿದ, 18 ರಿಂದ 55 ವರ್ಷಗಳ ಮಿತಿಯಲ್ಲಿರುವ, ಈ ಹಿಂದೆ ನಿಗಮ ಹಾಗೂ ಸರ್ಕಾರಿದಿಂದ ಸೌಲಭ್ಯ ಪಡೆದಿರುವವರು ಅರ್ಜಿ ಸಲ್ಲಿಸಬಹುದು.
ಕುಟುಂಬದ ಒಬ್ಬರಿಗೆ ಮಾತ್ರ ಸಾಲ ಸೌಲಭ್ಯ ಒದಗಿಸಲಾಗುವುದು, ಶೈಕ್ಷಣಿಕ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ ಪಡೆಯುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 30 ವರ್ಷಗಳು ಇರಬೇಕು. ಶೈಕ್ಷಣಿಕ ಸಾಲ ಮಂಜೂರಾತಿ ವಾರ್ಷಿಕ ರೂ.3.5 ಲಕ್ಷ, ಇತರೆ ಯೋಜನೆಗಳಿಗೆ ಗ್ರಾಮಾಂತರ ಪ್ರದೇಶದಲ್ಲಿ ವಾರ್ಷಿಕ ರೂ.98 ಸಾವಿರ ಹಾಗೂ ನಗರ ಪ್ರದೇಶದಲ್ಲಿ ವಾರ್ಷಿಕ ರೂ.1.20 ಲಕ್ಷ ಆದಾಯ ಮಿತಿ ನಿಗದಿಪಡಿಸಲಾಗಿದೆ. ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ನಿಯಮಾನುಸಾರ ಮಹಿಳೆಯರಿಗೆ ಶೇ.33 ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1% ರಷ್ಟು ಮೀಸಲಾತಿಯನ್ನು ನೀಡಲಾಗುವುದು.
ಅರ್ಜಿದಾರರು ಮೊಬೈಲ್ ಸಂಖ್ಯೆಯನ್ನು ಆಧಾರ್ ಹಾಗೂ ಬ್ಯಾಂಕ್ ಖಾತೆ ಜೊಡಣೆ ಮಾಡಿರಬೇಕು. ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ಹೊಂದಾಣಿಕೆಯಾಗಬೇಕು.
ಬೆಂಗಳೂರು ಒನ್, ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ http://upparadevelopment.karnataka.gov.xn--in-2sh3j6c8b/ ಕಚೇರಿ ದೂರವಾಣಿ ಸಂಖ್ಯೆ 080-22252555 ಗೆ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನವಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಇ. ಸಂಪತ್‍ಕುಮಾರ್ ತಿಳಿಸಿದ್ದಾರೆ.
ಉಪ್ಪಾರ ನಿಗಮ: ಸಾಲ ಸೌಲಭ್ಯಕ್ಕಾಗಿ ಅರ್ಜಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments