ಬೆಂಗಳೂರು :
ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರು ಜಂಟಿಯಾಗಿ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿದಕ್ಕೆ ಧನ್ಯವಾದಗಳನ್ನು ಅರ್ಪಿಸಿದರಲ್ಲದೆ, ಹೂ ಗುಚ್ಛ ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿದ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ರವರು ಕಾಂಗ್ರೆಸ್ ಪಕ್ಷ ತಮಗೆ ಟಿಕೆಟ್ ನೀಡಿದ್ದಕ್ಕೆ ಹೂ ಗುಚ್ಛ ನೀಡಿ ಅಭಿನಂದಿಸಿ, ಗೌರವಿಸಿದರು.
ಈ ಕುರಿತು ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್ ಪಕ್ಷವು ತಮ್ಮನ್ನು ಗುರುತಿಸಿ ಆಗ್ನೇಯ ಕ್ಷೇತ್ರಕ್ಕೆ ಟಿಕೆಟ್ ನೀಡಿರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದಲ್ಲದೆ, ಹಿಂದುಳಿದ ವರ್ಗಕ್ಕೆ ಸೇರಿದ ನಮಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅತ್ಯಂತ ಸಂತಸ ತಂದಿದೆ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಕುಂಟರಾಮನಹಳ್ಳಿ ಗೋಪಿನಾಥ್, ಗೋಪಾಲ್ ಇತರರು ಹಾಜರಿದ್ದರು.
ಎಂಎಲ್ ಸಿ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್ ರಿಗೆ ಟಿಕೆಟ್ ಘೋಷಣೆ ಸಿಎಂ ಹಾಗೂ ಡಿಸಿಎಂ ಅಭಿನಂದಿಸಿದ ಪೂರ್ಣಿಮಾಶ್ರೀನಿವಾಸ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments