ಎರಡು ದಿನಗಳಿಂದ ನಡೆಯುತ್ತಿರುವ ಪಕ್ಷಾಂತರ ಬೆಳವಣಿ ಗೆಯಿಂದ ಕಾಂಗ್ರೆಸ್‌ಪಕ್ಷದ ಯಾವ ಕಾರ್ಯಕರ್ತರು ಸಹ ಆತಂಕಪಡುವ ಅಗತ್ಯವಿಲ್ಲ ಎಂದು ಮುಖಂಡ ಡಾ.ಬಿ.ಯೋಗೀಶ್‌ಬಾಬು

by | 27/02/23 | ರಾಜಕೀಯ


ನಾಯಕನಹಟ್ಟಿ ಫೆ.27: ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಪಕ್ಷಾಂತರ ಬೆಳವಣಿ ಗೆಯಿಂದ ಕಾಂಗ್ರೆಸ್‌ಪಕ್ಷದ ಯಾವ ಕಾರ್ಯಕರ್ತರು ಸಹ ಆತಂಕಪಡುವ ಅಗತ್ಯವಿಲ್ಲ ಎಂದು ಮುಖಂಡ ಡಾ.ಬಿ.ಯೋಗೀಶ್‌ಬಾಬು ಹೇಳಿದರು.
ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಹೊರಮಠ ದೇವಾಲಯದ ಆವರಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮೊಳಕಾಲ್ಮುರು ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ನಡೆದ ಪಕ್ಷಾಂತರ ಚಟುವಟಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಪಕ್ಷದ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಸಿಎಲ್‌ಪಿ ನಾಯಕರಾದ ಸಿದ್ಧರಾಮಯ್ಯನವರು ಸೇರಿದಂತೆ ಕೆಪಿಸಿಸಿ ರಾಜ್ಯ ಪದಾಧಿಕಾರಿಗಳು ಪಕ್ಷ ಸಂಘಟನೆಗೆ ಆಧ್ಯತೆ ನೀಡಿ ಎಂದು ಸ್ಪಷ್ಟಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವ ಕಾರ್ಯಕರ್ತರೂ ಸಹ ಆತಂಕಪಡುವ ಅಗತ್ಯವಿಲ್ಲ. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಕ್ಕೆ ಈ ಹಿಂದೆ ನಡೆದ ಎಲ್ಲ ಸಾರ್ವತ್ರಿಕ ಚುನಾವಣೆಗಳಲ್ಲಿ ಅತಿಹೆಚ್ಚು ಬಾರಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ಮೊಳಕಾಲ್ಮುರು ಕ್ಷೇತ್ರವು ಕಾಂಗ್ರೆಸ್‌ಪಕ್ಷದ ಭದ್ರಕೋಟೆಯಾಗಿದ್ದು, ಪ್ರತಿಯೊಂದು ಬೂತ್‌ಮಟ್ಟದಲ್ಲೂ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿದ್ದಾರೆ. ಎಲ್ಲರೂ ಸೇರಿ ಪಕ್ಷವನ್ನು ಸಂಘಟಿಸಬೇಕಿದೆ. ಹಿಂದೆ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯನವರು ನೀಡಿದ ೧೬೫ ಭಾಗ್ಯಯೋಜನೆಗಳು ಇನ್ನೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿವೆ. ಹಾಗೂ ಮುಂದಿನ ದಿನಗಳಲ್ಲಿ ಮತದಾರರು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತಂದರೆ ರಾಜ್ಯದ ಪ್ರತಿ ಮಹಿಳೆಗೆ ರೂ.೨ಸಾವಿರ ನಗದು ನೀಡುವ ಗೃಹಲಕ್ಷಿö್ಮ ಯೋಜನೆ, ಪ್ರತಿಮನೆಗೂ ೨೦೦ ಯೂನಿಟ್ ಉಚಿತ ವಿದ್ಯುತ್, ಹಾಗೂ ಪ್ರತಿ ಕುಟುಂಬದ ಸದಸ್ಯರಿಗೆ ೧೦ಕೆಜಿ ಉಚಿತ ಅಕ್ಕಿ ವಿತರಿಸುವ ಖಚಿತ ಯೋಜನೆಗಳನ್ನು ಮನೆಮನೆಗೂ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ತಿಳಿಸುವ ಕಾರ್ಯ ಮಾಡಬೇಕಿದೆ. ಈ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದ್ದೆ ಕಾಂಗ್ರೆಸ್ ಅವದಿಯಲ್ಲಿ. ಹಾಗೇ ಕಳೆದ ೫ವರ್ಷಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಸಾಧನೆ ಶೂನ್ಯವಾಗಿದೆ. ಅಭಿವೃದ್ಧಿಯಲ್ಲಿ ಹಿಂದುಳಿದೆ. ಈ ಸತ್ಯಾಂಶಗಳನ್ನು ಕ್ಷೇತ್ರದ ಜನತೆಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದರು.
ಜಿ.ಪA.ಮಾಜಿ ಸದಸ್ಯ ಬಾಲರಾಜ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಇದೇವೇಳೆ ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಜಿ.ಪಿ.ನಾಗೇಶ್‌ರೆಡ್ಡಿ, ಪ.ಪಂ.ಸದಸ್ಯರಾದ ಸೈಯದ್‌ಅನ್ವರ್, ಕೆ.ಪಿ.ತಿಪ್ಪೇಸ್ವಾಮಿ, ಮಹೇಶ್ವರಿ, ಮುಖಂಡರಾದ ಶಾಮಸುಂದರರೆಡ್ಡಿ, ಪಾಪನಾಯಕ, ಗೌಡ್ರುತಿಪ್ಪೇಸ್ವಾಮಿ, ಜಾಕೀರ್‌ಹುಸೇನ್, ಅಮೀನುದ್ದೀನ್, ರುದ್ರಮುನಿ, ಕಾಳಪ್ಪ, ಪಾಲಾಕ್ಷಪ್ಪ, ಬಂಗಾರಪ್ಪ ಅವರೂ ಇದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page