ಎಸ್‌ಎಂಎಸ್‌ ಮೂಲಕ ಮೇಲ್ಮನವಿಗೆ ಅವಕಾಶ: ಸಕಾಲ ಮಿಷನ್*

by | 02/12/23 | ಸುದ್ದಿ

*

ಚಿತ್ರದುರ್ಗ, ಡಿ. ೦2 (ಕರ್ನಾಟಕ ವಾರ್ತೆ): ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೊಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್ ಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಸಕಾಲ ಮಿಷನ್ ರಾಜ್ಯದಲ್ಲಿ ಜಾರಿಗೆ ತಂದಿದೆ.
ಅರ್ಜಿ ತಿರಸ್ಕೃತಗೊಂಡಿದ್ದಲ್ಲಿ ಅರ್ಜಿದಾರರು ಸಕ್ಷಮ ಪ್ರಾಧಿಕಾರಿಗೆ ಪ್ರಥಮ ಮೇಲ್ಮನವಿಯನ್ನು ಸಲ್ಲಿಸಲು ಸಕಾಲ ಮಿಷನ್ ಅವಕಾಶ ಕಲ್ಪಿಸಿದೆ. ನಾಗರೀಕರು ಈ ಅವಕಾಶವನ್ನು ಪರಿಣಾಮಕಾರಿಯಾಗಿ ಹಾಗೂ ಸುಲಭವಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಉದ್ದೇಶದಿಂದ ಅಪೀಲು ಹಾಕಲು ಲಿಂಕ್‌ನ್ನು ಎಸ್‌ಎಂಎಸ್‌ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಕಾಲ ಮಿಷನ್ನ ಹೆಚ್ಚುವರಿ ಯೋಜನಾ ನಿರ್ದೇಶಕಿ ಶ್ರೀಮತಿ ಪಲ್ಲವಿ ಆಕುರಾತಿ ಅವರು ತಿಳಿಸಿದ್ದಾರೆ.
ತಿರಸ್ಕೃತಗೊಂಡ ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ವಯಂಚಾಲಿತವಾಗಿ ಎಸ್‌ಎಂಎಸ್‌ ಕಳುಹಿಸುವ ಸೇವೆಯನ್ನು ಕಳೆದ ಸೆಪ್ಟೆಂಬರ್‌ ತಿಂಗಳಿನಿಂದ ಚಾಲನೆಗೊಳಿಸಿದೆ. ವಿದ್ಯುನ್ಮಾನ ನಾಗರೀಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಇದುವರೆಗೆ ಒಟ್ಟು 3,18,420 ಎಸ್‌ಎಂಎಸ್‌ಗಳನ್ನು ಕಳುಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಾರಿಗೆ ಇಲಾಖೆಯಲ್ಲಿ ಅರ್ಜಿಗಳ ಮಾಹಿತಿಯನ್ನು ಸಕಾಲ ತಂತ್ರಾಂಶಕ್ಕೆ ಮ್ಯಾನ್ಯುಯಲ್‌ ಆಗಿ ಪುಶ್‌ ಮಾಡುತ್ತಿದ್ದು, ಇದನ್ನು ಆಟೋಪುಷ್‌ಗೆ ಬದಲಾಯಿಸಲಾಗಿದೆ. ಇದರಿಂದ, ಸಕಾಲದಲ್ಲಿ ಬಾಕಿ ಇದ್ದ ಅರ್ಜಿಗಳ ಸಂಖ್ಯೆಯು ಗಣನೀಯವಾಗಿ ಇಳಿಕೆಗೊಂಡು 9691 ರಿಂದ 2682 ಗಳಿಗೆ ಇಳಿಕೆಯಾಗಿದೆ ಎಂದು ಪಲ್ಲವಿ ಅವರು ತಿಳಿಸಿದ್ದಾರೆ.
ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿರುವ ಸಕಾಲ ಯೋಜನೆಯಡಿ ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆಯನ್ನು ಗಮನಿಸಿ ಸಕಾಲ ಮಿಷನ್‌ ಹೊಸ ಹೊಸ ಸೇವೆಗಳನ್ನು ಸೇರ್ಪಡೆಗೊಳಿಸುತ್ತಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಅಸ್ತಿತ್ವದಲ್ಲಿರುವ ದೂರ ಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ ನಿಯಮಿತಗೊಳಿಸುವಿಕೆ ಮತ್ತು ಹೊಸ/ ಅಸ್ತಿತ್ವದಲ್ಲಿರುವ ಓವರ್‌ಗ್ರೌಂಡ್‌ ಕೇಬಲ್‌ ಮೂಲಸೌಕರ್ಯ/ಭೂಗತ ಕೇಬಲ್‌ ಮೂಲಸೌಕರ್ಯಕ್ಕಾಗಿ ಅನುಮತಿ/ನಿಯಮಿತಗೊಳಿಸುವಿಕೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅಲ್ಪ ಸಂಖ್ಯಾತರ ಇಲಾಖೆಯಿಂದ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ ಯೋಜನೆ, ಎಂಫಿಲ್ ಮತ್ತು ಪಿಹೆಚ್‌ಡಿ ಫೆಲೋಶಿಪ್‌ ಯೋಜನೆ ಹಾಗೂ ಐಐಟಿ, ಐಐಎಂ, ಐಐಎಸ್‌ಸಿ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಯೋಜನೆಗಳನ್ನು ಸಹ ಸಕಾಲದ ಅಡಿಯಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿದೆ ಎಂದು ಆಕುರಾತಿ ಅವರು ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ ಸ್ಟಾರ್ಟ್‌ ಅಪ್‌ ನೋಂದಣಿ ಮತ್ತು ಗೃಹ ಇಲಾಖೆಯಿಂದ ಬಾಡಿಗೆದಾರರ ಪೂರ್ವಾಪರ ಪರಿಶೀಲನೆ ಸೇರಿದಂತೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಉದ್ಯೋಗಾಕಾಂಕ್ಷಿಯ ನೋಂದಣಿ ದಾಖಲೆಯ ವರ್ಗಾವಣೆ, ಉದ್ಯೋಗಾಕಾಂಕ್ಷಿಗಳ ನೋಂದಣಿ, ಉದ್ಯೋಗಾಕಾಂಕ್ಷಿಗಳ ಮರುನೋಂದಣಿ ಮತ್ತು ಉದ್ಯೋಗಾಕಾಂಕ್ಷಿಗಳ ನೋಂದಣಿ ಪತ್ರದ ನವೀಕರಣ ಯೋಜನೆಗಳನ್ನು ಸಹ ಸಕಾಲ ವ್ಯಾಪ್ತಿಗೆ ತರಲಾಗಿದೆ ಎಂದು ಪ್ರಕಟಣೆಯಲ್ಲಿ ಸಕಾಲ ಮಿಷನ್ ಹೆಚ್ಚುವರಿ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page