ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆಯ ಆವರಣದಲ್ಲಿ ವಜ್ರ ಮಹೋತ್ಸವ ಮತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

by | 03/01/24 | ಶಿಕ್ಷಣ


ನಾಯಕನಹಟ್ಟಿ:: ಪಟ್ಟಣದ ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆಯ ವಜ್ರ ಮಹೋತ್ಸವ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಬುಧವಾರ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಡಾ.ಹೆಚ್.ಎಂ.ವಿಜಯಕುಮಾರ್ ಉದ್ಘಾಟಿಸಿದರು.
ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆಯ ವಜ್ರ ಮಹೋತ್ಸವ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮ ದಿವ್ಯ ಸಾನಿಧ್ಯವಹಿಸಿದ ಜಗಳೂರು ತಾಲ್ಲೂಕಿನ ಕಣ್ವಕುಪ್ಪೆ ಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಆರ್ಶೀವಚನ ನೀಡಿದರು.

ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆ ವಜ್ರಮಹೋತ್ಸವ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮ
ವಿದ್ಯೆ ವಿವಾಧ ಸೃಷ್ಠಿಸಲು ಸಹಕಾರಿಯಾಗಬಾರದು


ನಾಯಕನಹಟ್ಟಿ :: ಇಂದಿನ ಆಧುನಿಕ ಯುಗದಲ್ಲಿ ಪಡೆದುಕೊಳ್ಳುತ್ತಿರುವ ಶಿಕ್ಷಣವು ಉನ್ನತ ಸಾಧನೆ ಮತ್ತು ಸಮಾಜದ ಏಳ್ಗಿಗೆ ಸಹಕಾರಿಯಾಗಬೇಕೇ ಹೊರತು ವಿವಾಧ ಸೃಷ್ಠಿಸಲು ನೆರವಾಗಬಾರದು ಎಂದು ಜಗಳೂರು ತಾಲ್ಲೂಕಿನ ಕಣ್ವಕುಪ್ಪೆ ಮಠದ ನಾಲ್ವಡಿ ಶಾಂತಲಿAಗ ಶಿವಾಚಾರ್ಯ ಸ್ವಾಮಿಗಳು ಅಭಿಮತ ವ್ಯಕ್ತಪಡಿಸಿದರು.

ಪಟ್ಟಣದ ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆಯ ಆವರಣದಲ್ಲಿ ಬುಧವಾರ ನಡೆದ ವಜ್ರ ಮಹೋತ್ಸವ ಮತು
ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಅವರು ಆರ್ಶೀವಚನ ನೀಡಿದರು.
ಮನುಷ್ಯ ತನ್ನ ಜೀವಮಾನದಲ್ಲಿ ತಾನು ಮಾಡಿದ ಒಳ್ಳೆಯ ಕೆಲಸಗಳನ್ನು ಮಾತ್ರ ಸಾರ್ವಜನಿಕರವಾಗಿ ಹೇಳಿಕೊಂಡು ಮುಂದೆ ಸಾಗುತ್ತಾನೆ. ಆದರೆ ತಾನು ಮಾಡಿದ ತಪ್ಪು ಕೆಲಸಗಳನ್ನು ವಿಗ್ರಹಮುಂದೆ ಹೇಳಿಕೊಳ್ಳುತ್ತಾನೆ. ಯಾವ ವ್ಯಕ್ತಿಯು ತಾನು ಮಾಡಿದ ತಪ್ಪುಗಳನ್ನು ಬಹಿರಂಗವಾಗಿ ಹೇಳಿಕೊಂಡು ಅವುಗಳನ್ನು ಆ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದೆ ಸಾಗುತ್ತಾನೋ ಅಂತವರ ಬದುಕು ನೆಮ್ಮದಿಯಿಂದ ಕೂಡಿರುತ್ತದೆ. ತಪ್ಪನ್ನು ಒಪ್ಪಿಕೊಳ್ಳುವುದೇ ನಿಜವಾದ ಸಂಸ್ಕಾರ. ಈ ಸಂಸ್ಕಾರ ಉತ್ತಮವಾದ ವಿದ್ಯೆಯಿಂದ ದೊರೆಯುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಉತ್ತಮವಾದ ಶಿಕ್ಷಣದ ಮೂಲಕ ಮೌಲ್ಯಗಳನ್ನು ಕಲಿಯಬೇಕು. ಯಾರು ಮೌಲ್ಯಗಳನ್ನು ಬದುಕಲ್ಲಿ ಅಳವಡಿಸಿಕೊಂಡಿರುತ್ತಾರೆಯೋ ಅವರು ದೈವ ಮತ್ತು ಧರ್ಮದ ಬಗ್ಗೆ ಅಪಾರವಾದ ಗೌರವವನ್ನು ಹೊಂದಿರುತ್ತಾರೆ. ಹಾಗೇ ನಮ್ಮ ಬದುಕಿಗೆ ಆದರ್ಶವಾಗಿ ಇರಬೇಕಾದ ಮೊದಲನೆ ವ್ಯಕ್ತಿ ಜನ್ಮ ನೀಡಿದ ಜನನಿ, ನಂತರ ತಂದೆ. ಅವರ ನಂತರ ಗುರು-ಹಿರಿಯರು ಮತ್ತು ಜನ್ಮಿಸಿದ ಊರು. ಇವುಗಳಿಗೆ ಬದುಕಿನುದ್ದಕ್ಕೂ ಶ್ರದ್ಧಾಭಕ್ತಿಯಿಂದ ನಡೆದುಕೊಂಡರೆ ಭಗವಂತನ ಕಾರುಣ್ಯ ದೊರೆಯುತ್ತದೆ ಎಂದರು.

ವಿದ್ಯಾಸAಸ್ಥೆಯ ಕಾರ್ಯದರ್ಶಿ ಎಂ.ವೈ.ಟಿ.ಸ್ವಾಮಿ ಮಾತನಾಡಿ, “೧೯೬೧-೬೨ರಲ್ಲಿ ಸ್ಥಾಪನೆಯಾದ ಶ್ರೀತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾಸಂಸ್ಥೆಯು ಗ್ರಾಮೀಣ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಯಶಸ್ವಿಯಾಗಿದೆ. ಇಂದಿಗೆ ವಿದ್ಯಾಸಂಸ್ಥೆಯು ಸ್ಥಾಪನೆಯಾಗಿ ೬೦ವರ್ಷ ತುಂಬಿದ್ದು, ಈಗಲೂ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಶ್ರಮಿಸುತ್ತಿದೆ” ಎಂದರು.

ವಿದ್ಯಾಸAಸ್ಥೆ ಅಧ್ಯಕ್ಷ ಜಿ.ಎಸ್.ಪ್ರಭುಸ್ವಾಮಿ, ಉಪಾಧ್ಯಕ್ಷ ಡಾ.ಹೆಚ್.ಎಂ.ವಿಜಯಕುಮಾರ್, ಕೋಶಾಧ್ಯಕ್ಷ ಕೆ.ಎಂ.ನಾಗರಾಜ್, ಮುಖಂಡ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಮಾತನಾಡಿದರು. ಪಟ್ಟಣದ ಪೊಲೀಸ್ ಠಾಣೆಯ ಪಿಎಸ್ಐ ದೇವರಾಜ್ ,ಶಾಲೆಯ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page