ಎಸ್ ಎಸ್ ಎಲ್ ಸಿ ಉತ್ತಮ ಫಲಿತಾಂಶಕ್ಕಾಗಿ ಮುಖ್ಯ ಶಿಕ್ಷಕರು ಶ್ರಮವಹಿಸಿ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ 

by | 08/07/24 | ಶಿಕ್ಷಣ


ಚಳ್ಳಕೆರೆ: ಅತಿಯಾದ ಆತ್ಮವಿಶ್ವಾಸ ಸರಿಯಾದ ಮಾರ್ಗದರ್ಶನವಿಲ್ಲದೆ ಕಳೆದ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಕಡಿಮೆ ಆಗಿರಬಹುದು ಆದರೆ ಈ ವರ್ಷ ಉತ್ತಮ ಫಲಿತಾಂಶಕ್ಕೆ ಎಲ್ಲರೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು  ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್‌ ಸುರೇಶ ಹೇಳಿದರು.

ನಗರದ ಹೊರವಲಯದ ಆದರ್ಶ ವಿದ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಇವರ ವತಿಯಿಂದ ಹಮ್ಮಿಕೊಂಡಿದ್ದ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ  ಪರೀಕ್ಷೆ ಫಲಿತಾಂಶ ಉತ್ತಮ ಪಡಿಸುವ ಕುರಿತು ಶಾಲಾ ಮುಖ್ಯಶಿಕ್ಷಕರ ಸಭೆಯಲ್ಲಿ ಮಾತನಾಡಿ, ಮುಂದೆ ಬರುವ ಪರೀಕ್ಷೆಗೆ ಪ್ರಾರಂಭದಿಂದಲೆ ತಯಾರಗಬೇಕು, ಪರೀಕ್ಷೆ ಉತ್ತಮ ಫಲಿತಾಂಶಕ್ಕೆ ಮುಖ್ಯ ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ.ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಮತ್ತೆ  ಆ ವಿದ್ಯಾರ್ಥಿಗಳು ಶಾಲೆಗೆ ಬರುವಂತೆ ಮಾಡಬೇಕು,ಮಕ್ಕಳ ಸಮಸ್ಯೆ ಗುರುತಿಸಿ ಅದರ ಪರಿಹಾರ ಮಾಡಬೇಕು, ಗುಣಮಟ್ಡದ ಫಲಿತಾಂಶದ ಬಗ್ಗೆ ಜಾಗೃತಿ ವಹಿಸಿಬೇಕು ಒತ್ತಡ ಬಂದಾಗ ಆವೇಶ ಭರಿತವಾಗಿ ಮಾತನಾಡುವುದು ,ಅಮೇಲೆ ಸುಮ್ಮನಾಗುವುದು ಮಾಡಬಾರದು.ಪ್ರಯೋಗಾಲಯಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಸಾಧನ ಸಲಕರಣೆ ಇಲ್ಲದಿದ್ದರೆ ಮುಖ್ಯ ಶಿಕ್ಷಕರೆ ಕೊಡಿಸಬೇಕು.ಕೆಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ.ಇಂತಹ ಸಮಯದಲ್ಲಿ  ಮುಖ್ಯ ಶಿಕ್ಷಕರು ಜವಾಬ್ದಾರಿ ವಹಿಸಬೇಕು ಒಟ್ಟಾರೆ ಬರುವ ಪರೀಕ್ಷೆ  ಗುಣ್ಣಮಟ್ಟಕ್ಕೆ ಈಗಿನಿಂದಲೆ ತಯಾರಗಬೇಕು ಎಂದರು.

ಈ ವೇಳೆ  ಪ್ರೌಡಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಶ್ತೀನಿವಾಸ್.ಕಾರ್ಯದರ್ಶಿ ಡಿ.ಪಾಲಯ್ಯ, ವಿಶ್ವಭಾರತಿ ಪ್ರೌಢಶಾಲಾ ಮುಖ್ಯಶಿಕ್ಷಕ  ಜಿ.ಟಿ.ವೀರಭದ್ರಪ್ಪ, ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕ ಅಶೋಕ ರೆಡ್ಡಿ, ಮುಖ್ಯ ಶಿಕ್ಷಕರದ ಮಂಜುನಾಥ್,ವಿಎಚ್.ವೀರಣ್ಣ,ಎ.ಈರಣ್ಣ,ಮಂಜುನಾಥ ರೆಡ್ಡಿ,ಮಾರುತಿ ಭಂಡಾರಿ ರವಿಶಂಕರ್. ಸೇರಿದಂತೆ ಮುಖ್ಯ ಶಿಕ್ಷಕರು ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಇದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page