ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

by | 06/09/24 | ಸುದ್ದಿ


ಚಿತ್ರದುರ್ಗ ಸೆ.06:
ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ ಯೋಜನೆಗಳಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವ ಕ್ರಮವನ್ನು ಕಡ್ಡಾಯಗೊಳಿಸಿ ಜಾರಿಗೆ ತರುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಕುರಿತು ಮೌಲ್ಯಮಾಪನ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬೆಂಗಳೂರಿನ ಐ.ಎಸ್.ಇ.ಸಿ ( Institute for Social Economic Change) ಸಂಸ್ಥೆಯಿಂದ ವಿವಿಧ ಇಲಾಖೆಗಳಿಂದ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಿದ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಗಳ ಪರಿಣಾಮಗಳ ಬಗ್ಗೆ ಮಾಲ್ಯಮಾಪನ ಕೈಗೊಳ್ಳುವ ಕುರಿತು ಸಭೆ ನಡೆಸಲಾಯಿತು.
ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅಧಿನಿಯಮ-2013 ರ ಪ್ರಕಾರ ಯೋಜನೆಗಳ ಮೌಲ್ಯಮಾಪನಕ್ಕೆ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಆದೇಶಿಸಿದ್ದಾರೆ. ಹೀಗಾಗಿ ರಾಜ್ಯದ 13 ಜಿಲ್ಲೆಗಳ 39 ತಾಲ್ಲೂಕುಗಳಲ್ಲಿ ಐ.ಎಸ್.ಇ.ಸಿ ಸಂಸ್ಥೆ ಅಧ್ಯಯನ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ಸಭೆಯಲ್ಲಿ ಕೃಷಿ, ತೋಟಗಾರಿಕೆ. ಪಶು ಸಂಗೋಪನೆ, ಮೀನುಗಾರಿಕೆ, ರೇಷ್ಮೆ, ಭಾರಿ ನೀರಾವರಿ, ಸಣ್ಣ ನೀರಾವರಿ, ಸಹಕಾರ, ಸಣ್ಣ ಕೈಗಾರಿಕೆ, ಕೈಮಗ್ಗ ಮತ್ತು ಜವಳಿ, ಕೌಶಲಾಭಿವೃದ್ದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಂಧನ, ವಸತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆಗಳ ಪ್ರಗತಿ ಪರಿಶೀಲನೆ ಜೊತೆಗೆ ಯೋಜನೆ ಅನುಷ್ಠಾನದಲ್ಲಿನ ಸಾಧಕ ಬಾಧಕಗಳ ಕುರಿತು ಚರ್ಚಿಸಲಾಯಿತು.
ಐ.ಎಸ್.ಇ.ಸಿ ಸಂಸ್ಥೆಯ ವಿಷಯ ತಜ್ಞ ವಿಜಯೇಂದ್ರ ಬಾಬು ಅಭಿಪ್ರಾಯ ವ್ಯಕ್ತಪಡಿಸಿ, ವಿವಿಧ ಇಲಾಖೆಗಳಲ್ಲಿ ಬ್ಯಾಂಕ್ ಸಾಲದೊಂದಿಗೆ ಎಸ್.ಸಿ ಹಾಗೂ ಎಸ್.ಟಿ ಫಲಾನುಭವಿಗಳಿಗೆ ನೀಡುವ ಸಬ್ಸಿಡಿ ಯೋಜನೆಗಳು ನಿರೀಕ್ಷಿತ ಮಟ್ಟದಲ್ಲಿ ಫಲಪ್ರದವಾಗುತ್ತಿಲ್ಲ. ಫಲಾನುಭವಿ ವಂತಿಕೆ ಆಧಾರದಲ್ಲಿ ಮನೆ ನಿರ್ಮಾಣ ಯೋಜನೆ ನೀಡುವ ಅನುದಾನ ಮೊತ್ತ ಕಡಿಮೆ ಇರುವ ಕಾರಣ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವಸತಿ ರಹಿತ ಎಸ್.ಸಿ ಹಾಗೂ ಎಸ್.ಟಿ ಜನರು ಮನೆ ನಿರ್ಮಾಣಕ್ಕೆ ಮುಂದೆ ಬರುತ್ತಿಲ್ಲ. ಮನೆ ನಿರ್ಮಾಣದ ಘಟಕ ವೆಚ್ಚವೂ ಹೆಚ್ಚಾಗಿದ್ದು ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ನೀಡುವ ಅನುದಾನವು ಕಡಿಮೆಯಿದೆ. ಇನ್ನೂ ಜಿಲ್ಲೆಯ ನಗರ ಪ್ರದೇಶದಲ್ಲಿ ಮನೆ ನಿರ್ಮಾಣದ ಗುರಿ ಶೇ.50 ರಷ್ಟು ಸಾಧನೆಯಾಗಿಲ್ಲ. ಆರಂಭಗೊಂಡ ಮನೆ ನಿರ್ಮಾಣಗಳ ಪೈಕಿ ಶೇ.10 ರಷ್ಟು ಕೂಡ ಪೂರ್ಣಗೊಂಡಿಲ್ಲ. ಈ ಹಿನ್ನಲೆಯಲ್ಲಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅಡಿ ಮನೆ ನಿರ್ಮಾಣದ ಘಟಕ ವೆಚ್ಚ ಹೆಚ್ಚಳ ಅಥವಾ ಸಂಪೂರ್ಣ ಮನೆ ನಿರ್ಮಾಣದ ಅನುದಾನವನ್ನು ವಿವಿಧ ಯೋಜನೆಗಳ ಅಡಿ ಹೊಂದಾಣಿಕೆ ಮಾಡಲು ಸರ್ಕಾರ ಅನುಮತಿ ನೀಡುವಂತೆ ಶಿಫಾರಸ್ಸು ಮಾಡುವುದಾಗಿ ಹೇಳಿದರು.
ಐ.ಎಸ್.ಇ.ಸಿ ಸಂಸ್ಥೆ ಎಲ್ಲಾ ಇಲಾಖೆ ಮುಖ್ಯಸ್ಥರಿಂದ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆ ಅನುಷ್ಠಾನದಲ್ಲಿ ತರಬೇಕಾದ ಮಾರ್ಪಾಡುಗಳ ಬಗ್ಗೆ ವರದಿ ಪಡೆದು ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಐ.ಎಸ್.ಇ.ಸಿ ಸಂಸ್ಥೆಯ ಯೋಜನಾ ನಿರ್ದೇಶಕ ಪ್ರೊ.ಮಾದೇಶ್ವರನ್ ಮತ್ತು ಪ್ರೊ. ಬಿ.ಪಿ.ವಾಣಿ, ಜಂಟಿ ಕೃಷಿನಿರ್ದೇಶಕ ಮಂಜುನಾಥ, ಡಿಯುಡಿಸಿ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಹಾಗೂ ಪ್ರಭಾರಿ ಯೋಜನಾಧಿಕಾರಿ ಮಧು ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Latest News >>

ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿ‌ಪರಿಶೀಲನೆ.

ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...

ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಿದ್ದತೆ ಸೆ.12 ರಂದು ಎನ್.ಜಿ.ಓ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ

ಚಿತ್ರದುರ್ಗ ಸೆ.10: ರಾಜ್ಯದ ಉತ್ತರ ತುದಿಯಿಂದ ದಕ್ಷಿಣ ತುದಿಯವರೆಗೆ ಮಾನವ ಸರಪಳಿ ರಚಿಸುವ ಮೂಲಕ ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಸೆ.14 ರಿಂದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ: ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ

ಚಿತ್ರದುರ್ಗ. ಸೆ.10: ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನವನ್ನು ಜಿಲ್ಲೆಯಾದ್ಯಂತ ಇದೇ ಸೆ.14 ರಿಂದ ಅಕ್ಟೋಬರ್ 2 ರವರೆಗೆ...

ಮಲ್ಲೂರಹಳ್ಳಿ ಗ್ರಾಮದ .ಅಂಗವಾಡಿ ಬಿ. ಕೇಂದ್ರದಲ್ಲಿ ಪೂರಕ ಪೌಷ್ಟಿಕ ಆಹಾರ ಶಿಬಿರಕ್ಕೆ ಚಾಲನೆ ನೀಡಿದ ಮುಖ್ಯ ಶಿಕ್ಷಕ ನಾರಾಯಣ ನಾಯ್ಕ.

ನಾಯಕನಹಟ್ಟಿ:: ತಾಯಿ ಮಗುವಿನ ಆರೋಗ್ಯಕ್ಕ ಪೌಷ್ಟಿಕ ಆಹಾರ ಅವಶ್ಯಕ ಎಂದು ಮಲ್ಲೂರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ...

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಸಾರ್ವಜನಿಕರಿಗೆ ಆತಂಕ ಬೇಡ: ಹೆಚ್ಎಂ ರೇವಣ್ಣ ಭರವಸೆ 

ಚಳ್ಳಕೆರೆ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತದೆ...

ಸೆ.. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ರಾಜ್ಯಾದ್ಯಂತ ಏಕಕಾಲಕ್ಕೆ ಮಾನವಸರಪಳಿ ನಿರ್ಮಾಣ ಜಿಲ್ಲೆಯಲ್ಲಿ 110 ಕಿ.ಮೀ. ಮಾನವ ಸರಪಳಿ ಯಶಸ್ವಿಗೊಳಿಸಲು ಸಿದ್ಧತೆ- ಡಿ. ಸುಧಾಕರ್ ಸೂಚನೆ

ಚಳ್ಳಕೆರೆ ಸೆ. 9 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಇದೇ ಸೆ. 15 ರಂದು ರಾಜ್ಯಾದ್ಯಂತ ಬೀದರ್‍ ನಿಂದ ಚಾಮರಾಜನಗರ ವರೆಗೆ...

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page