ಏಕಬಳಕೆ ಪ್ಲಾಸ್ಟಿಕ್ ಕುರಿತು ಸಾರ್ವಜನಿಕರಿಗೆ ಅರಿವು ಚಂದ್ರವಳ್ಳಿ ಕೆರೆಯಲ್ಲಿ ಸ್ವಚ್ಛತಾ ಶ್ರಮದಾನ

by | 27/09/23 | ಆರೋಗ್ಯ


ಚಿತ್ರದುರ್ಗ ಸೆ.27:
ಚಿತ್ರದುರ್ಗ ನಗರದ ಐತಿಹಾಸಿಕ ಸ್ಥಳವಾದ ಚಂದ್ರವಳ್ಳಿ ಕೆರೆಯ ಸುತ್ತಮುತ್ತ ಪ್ರದೇಶದಲ್ಲಿ ಬುಧವಾರ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಆಂದೋಲನದ ಅಂಗವಾಗಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಂಡು, ಸಾರ್ವಜನಿಕರಿಗೆ ಏಕಬಳಕೆ ಪ್ಲಾಸ್ಟಿಕ್ ಕುರಿತು ಅರಿವು ಮೂಡಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ ಆಂದೋಲನ 2023ರ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 2 ರವರೆಗೆ ವಿಶೇಷ ಆಂದೋಲನ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಅಕ್ಟೋಬರ್ 1 ರಂದು ಏಕಕಾಲದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಏಕ್ ತಾರೀಖ್ ಏಕ್ ಗಂಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಹೆಚ್ಚು ಜನಜಂಗುಳಿ ಇರುವ ಸ್ಥಳಗಾದ ಬಸ್ ನಿಲ್ದಾಣ, ಸಮುದಾಯ ಭವನ, ಪ್ರವಾಸಿ ತಾಣಗಳು, ಸಾರ್ವಜನಿಕ ಸ್ಥಳಗಳಲ್ಲಿ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಶ್ರಮದಾನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಕರು, ಆಶಾ-ಅಂಗನವಾಡಿ ಕಾರ್ಯಕರ್ತರು, ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page