ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

by | 05/07/24 | ಸುದ್ದಿ

ಚಿತ್ರದುರ್ಗ ಜುಲೈ.4:
ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ. ಮುಖ್ಯವಾಗಿ ರೂ.11.50 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಕೋಟೆಯ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಧ್ವನಿ ಬೆಳಕು ವ್ಯವಸ್ಥೆಯನ್ನು ಅಳವಡಿಸಲಾಗುವುದು. ಈ ಯೋಜನೆ ಅನುಷ್ಠಾನಕ್ಕೆ ಭಾರತೀಯ ಪುರಾತತ್ವ ಇಲಾಖೆ ಅನುಮತಿಯನ್ನು ಶೀಘ್ರ ಪಡೆದುಕೊಳ್ಳುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಕೋಟೆಗೆÉ ಪ್ರತಿ ತಿಂಗಳು 35 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಾರೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಕೋಟೆಯನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಇದರ ಅಡಿ, ರೂ.75 ಲಕ್ಷದಲ್ಲಿ ಮಕ್ಕಳ ಉದ್ಯಾನವನ, ರೂ.1 ಕೋಟಿ ವೆಚ್ಚದಲ್ಲಿ ಅಕ್ಕ ತಂಗಿಯರ ಹೊಂಡದ ಬಳಿ ನೀರಿನ ಕಾರಂಜಿಗಳನ್ನು ನಿರ್ಮಿಸಲಾಗುವುದು. ಇದರ ಜೊತೆಗೆ ಕೋಟೆಯ ಒನಕೆ ಓಬವ್ವ ಕಿಂಡಿಯ ಬಳಿಯ ಹನುಮಾನ ದ್ವಾರದಿಂದ ಚಂದ್ರವಳ್ಳಿ ತೋಟಕ್ಕೆ ತೆರಳಲು 3 ಮೀಟರ್ ಅಗಲದ ಹಾಗೂ 1.5 ಕಿ.ಮೀ ಉದ್ದದ ನೂತನ ಕಾಲುದಾರಿ ಮಾಡಲಾಗುವುದು.
ಚಂದ್ರವಳ್ಳಿ ಕೆರೆಯ ಸುತ್ತ ರೂ.3.75 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರಾಕ್, ಬೀದಿ ದೀಪಗಳನ್ನು ಅಳವಡಿಸಲಾಗುವುದು. ರೂ.15 ಲಕ್ಷದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ರೂ.75 ಲಕ್ಷದಲ್ಲಿ ವಾಹನ ನಿಲುಗಡೆ, ರೂ.1 ಕೋಟಿ ವೆಚ್ಚದಲ್ಲಿ ಚಂದ್ರವಳ್ಳಿ ಗುಹೆಗೆ ವಿದ್ಯುತ್ ದೀಪಗಳ ಅಳವಡಿಕೆ, ರೂ.6 ಕೋಟಿ ವೆಚ್ಚದಲ್ಲಿ ಮಕ್ಕಳ ಆಟಿಕೆ ಟ್ರೈನ್, ರೂ.1.25 ಕೋಟೆ ವೆಚ್ಚದಲ್ಲಿ ಚಂದ್ರವಳ್ಳಿ ಸಂಪರ್ಕಿಸುವ ರಸ್ತೆ ಬೀದಿ ದೀಪ ಅಳವಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಶೀಘ್ರವೇ ಪುರಾತತ್ವ ಇಲಾಖೆಯಿಂದ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ಪಡೆದುಕೊಳ್ಳುವಂತೆ ಹೇಳಿದರು.
ಕೆ.ಎಂ.ಇ.ಆರ್.ಸಿ ಅನುದಾನದ ಅಡಿಯಲ್ಲಿಯೇ ಹೊಸದುರ್ಗ ತಾಲ್ಲೂಕಿನ ಹಾಲು ರಾಮೇಶ್ವರದಲ್ಲಿ ಧರ್ಮಛತ್ರ, ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ, ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗುವುದು. ಹೊಳಲ್ಕೆರೆ ತಾಲ್ಲೂಕಿನ ದೊಡ್ಡಹೊಟ್ಟೆ ರಂಗನಾಥ ಸ್ವಾಮಿ ಬೆಟ್ಟಕ್ಕೆ ಮೆಟ್ಟಿಲುಗಳ ನಿರ್ಮಾಣ, ಬೆಟ್ಟದಲ್ಲಿ ಕಲ್ಯಾಣಿಯ ಪುನರುಜ್ಜೀವನ, ಧರ್ಮಛತ್ರ, ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ, ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗುವುದು.
ವಿ.ವಿ.ಸಾಗರ ಜಲಾಶಯದ ಹಿನ್ನೀರಿನಲ್ಲಿ ಸಾಹಸಮಯ ಜಲಕ್ರೀಡೆ ಆರಂಭಿಸಲು ಸಹ ಯೋಜನೆ ರೂಪಿಸಲಾಗಿದೆ. ಒಂದು ಜಿಲ್ಲೆ ಒಂದು ತಾಣ ಯೋಜನೆಯಡಿ ವಾಣಿ ವಿಲಾಸ ಸಾಗರವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿ, ಇದರೊಂದಿಗೆ ಚಂದ್ರವಳ್ಳಿ ಕೆರೆಯಲ್ಲಿ ಜಲಕ್ರೀಡೆ ಹಾಗೂ ದೋಣಿ ವಿಹಾರಕ್ಕೂ ಯೋಜನೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಕಾಯ್ದೆ 2015 ಅಡಿ ಜಿಲ್ಲೆಯ ಪ್ರಮುಖ ಹೋಟೆಲ್‍ಗಳ ನೊಂದಣಿ ಕಡ್ಡಾಯವಾಗಿ ಮಾಡಬೇಕು. ಇದರಿಂದ ಜಿಲ್ಲೆಗೆ ಭೇಟಿ ನೀಡಿದ ಹೊರ ದೇಶ ಹಾಗೂ ಹೊರ ರಾಜ್ಯದ ಪ್ರವಾಸಿಗರ ಮಾಹಿತಿ ಲಭ್ಯವಾಗುತ್ತಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ನಿರ್ದೇಶನ ನೀಡಿದರು.
ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಯಾತ್ರಿ ನಿವಾಸಗಳು ಸಾರ್ವಜನಿಕರ ಬಳಕೆ ಒದಗುವಂತಾಗಬೇಕು. ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ನಿರ್ಮಿಸಿರುವ ಯಾತ್ರಿ ನಿವಾಸಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಿ, ನಿರ್ವಹಣೆ ಜವಬ್ದಾರಿ ವಹಿಸುವಂತೆ ಹೇಳಿದರು.
ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಕಿರುಹೊತ್ತಿಗೆ ಮುದ್ರಿಸಬೇಕು. ಇದರಲ್ಲಿ ಕೇಂದ್ರ, ರಾಜ್ಯ ಹಾಗೂ ಪ್ರವಾಸೊದ್ಯಮ ಇಲಾಖೆಯಿಂದ ನಿರ್ವಹಿಸುತ್ತಿರುವ ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿ ಇರಬೇಕು ಎಂದರು.
ಸಭೆಯಲ್ಲಿ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ತಹಶೀಲ್ದಾರರುಗಳಾದ ಡಾ.ನಾಗವೇಣಿ, ಪಾತೀಮ ಬಿಬಿ, ತಿರುಪತಿ ಪಾಟೀಲ್, ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಶಶಿಕುಮಾರ್ ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page