ಐತಿಹಾಸಿಕ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಭರದ ಸಿದ್ದತೆ ಭಕ್ತಾಧಿಗಳ ಮೂಲ ಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮವಹಿಸಿ -ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ

by | 27/02/23 | ಸುದ್ದಿ


ನಾಯಕನಹಟ್ಟಿ.ಫೆ.27:
ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಮೂಲ ಸೌಕರ್ಯಕ್ಕೆ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಾಯಕನಹಟ್ಟಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಜಾತ್ರೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾರ್ಚ್ 3 ರಿಂದ 13ರ ವರೆಗೆ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಮಾರ್ಚ್ 10 ರಂದು ಜರುಗುವ ದೊಡ್ಡ ರಥೋತ್ಸವಕ್ಕೆ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ವಿವಿಧಡೆಗಳಿಂದ ಸುಮಾರು 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಕುಡಿಯುವ ನೀರು, ಆರೋಗ್ಯ, ನೈರ್ಮಲ್ಯ, ಸಮರ್ಪಕ ವಿದ್ಯುತ್ ವ್ಯವಸ್ಥೆ, ಬಂದೋಬಸ್ತ್, ಸಾರಿಗೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ಭಕ್ತಾಧಿಗಳಿಗೆ ಕಿರಿಕಿರಿ ಹಾಗೂ ಕಿರುಕುಳವಾಗಬಾರದು. ಜನರು ಸಂತೋಷದಿಂದ ಜಾತ್ರೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.
40 ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ: ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರ ಬಳಕೆ ಹಾಗೂ ಕುಡಿಯವ ನೀರು ಸರಬರಾಜು ಮಾಡಲು 40 ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. 6 ಕಡೆಗಳಲ್ಲಿ ಬೋರ್ ವೆಲ್‍ಗಳನ್ನು ಗುರುತಿಸಲಾಗಿದೆ. ನೀರು ಸಾಗಣಿಕೆ ನಡೆಸುವ ಟ್ಯಾಂಕರ್‍ಗಳನ್ನು ಸ್ವಚ್ಛಗೊಳಿಸಿ, ನೈರ್ಮಲೀಕರಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೀಲಾವತಿ ಸಭೆಗೆ ಮಾಹಿತಿ ನೀಡಿದರು.
ಈ ಬೋರ್‍ವೆಲ್‍ಗಳ ನೀರು ಕುಡಿಯಲು ಯೋಗ್ಯವಾಗಿದೇ ಎಂದು ಪರಿಶೀಲಿಸಿ ವರದಿ ನೀಡಲು ಆರೋಗ್ಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸರ್ಕಾರಿ ಕಚೇರಿ ಶೌಚಾಲಯಗಳು ಸಾರ್ವಜನಿಕರ ಬಳಕೆಗೆ ಲಭ್ಯ: ನಾಯಕನಟ್ಟಿ ಪಟ್ಟಣದ 5 ಕಡೆ ತಾತ್ಕಾಲಿಕವಾಗಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಕ್ರಮವಹಿಸಬೇಕು. ಇದರೊಂದಿಗೆ ಜಾತ್ರಾ ಮಹೋತ್ಸವ ಜರುಗುವ ದಿನಗಳಂದು ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಿಸಲು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಸೂಚನೆ ನೀಡಿದರು.
152 ಆರೋಗ್ಯ ಸಿಬ್ಬಂದಿ ನೇಮಕ: ಜಾತ್ರ ಮಹೋತ್ಸವದ ಅಂಗವಾಗಿ ಆರೋಗ್ಯ ಇಲಾಖೆಯಿಂದ 152 ಆರೋಗ್ಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಇದರಲ್ಲಿ 16 ಜನರ ವೈದ್ಯಾಧಿಕಾರಿಗಳು ಇರಲಿದ್ದಾರೆ. 4 ಕಡೆ ತಾತ್ಕಾಲಿಕವಾಗಿ ಕ್ಲಿನಿಕ್‍ಗಳನ್ನು ತೆರಯಲಾಗುವುದು. ಆಹಾರ ಹಾಗೂ ನೈರ್ಮಲ್ಯ ಮೇಲ್ವಿಚಾರಣೆಗಾಗಿ 8 ತಂಡಗಳು, ತುರ್ತು ಸೇವೆಗಳಿಗಾಗಿ 4 ಆಂಬ್ಯುಲೆನ್ಸ್, ಕೋವಿಡ್ ಲಸಿಕಾ ಕೇಂದ್ರ ಹಾಗೂ ಆರೋಗ್ಯ ಇಲಾಖೆ ಶಿಕ್ಷಣ, ಮಾಹಿತಿ ಸಂವಹನ ಮಳಿಗೆಯನ್ನು ಜಾತ್ರೆಯಲ್ಲಿ ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಸಭೆಯಲ್ಲಿ ಮಾಹಿತಿ ನೀಡಿದರು.
ಸಿಸಿ ಟಿವಿ ಕಣ್ಗಾವಲು: ಜಾತ್ರಾ ಮಹೋತ್ಸವದ ಬಂದೋಬಸ್ತ್‍ಗಾಗಿ 2550 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಯಾವುದೇ ಅಹಿತಕರ ಘಟನೆ, ಕಳ್ಳತನ ಸಂಭವಿಸದಂತೆ ತಡೆಯಲು ಪಟ್ಟಣದ 30 ಕಡೆ ಸಿಸಿ ಟಿವಿ ಕ್ಯಾಮರಾ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. 3 ಕಡೆ ವಾಚ್ ಟವರ್, 22 ಕಡೆ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.
ಆಟೋದರ ನಿಗದಿ: ನಾಯಕನಹಟ್ಟಿ ಸಂಪರ್ಕಿಸುವ ಏಳು ಕಡೆಗಳಲ್ಲಿ ಚೆಕ್ ಪೋಸ್ಟ್ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಆಟೋಗಳು ಸಂಚರಿಸಿವೆ. ಗ್ರಾಹಕರಿಗೆ ಹೊರೆಯಾಗದಂತೆ ಆಟೋ ಚಾಲಕರೊಂದಿಗೆ ಸಮಾಲೋಚಿಸಿ ನಿರ್ದಿಷ್ಟ ದರವೊಂದನ್ನು ನಿಗದಿಪಡಿಸಲು ಕ್ರಮಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮುಕ್ತಿ ಬಾವುಟ ಹರಾಜು ಕೂಗಲು ನೋಂದಣಿ: ಮಾರ್ಚ್ 10 ರಂದು ಜರುಗುವ ದೊಡ್ಡ ರಥೋತ್ಸವಕ್ಕೂ ಮುನ್ನ ಜರುಗವ ಮುಕ್ತಿ ಬಾವುಟ ಹರಾಜಿನಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಕೊಳ್ಳಬೇಕು. ನೊಂದಣಿ ಸಮಯದಲ್ಲಿ ಬ್ಯಾಂಕ್ ಚೆಕ್‍ಬುಕ್ ಹಾಳೆಯೊಂದನ್ನು ದೇವಸ್ಥಾನದ ಸಮಿತಿಗೆ ನೀಡಬೇಕು. ಹರಾಜು ಕೂಗಿ ಮುಕ್ತಿ ಬಾವುಟ ಪಡೆದವರು ಮೂರು ತಿಂಗಳ ಒಳಗಾಗಿ ಹಣ ಸಂದಾಯ ಮಾಡುವಂತೆ ನಿಯಮಗಳನ್ನು ರೂಪಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಪ್ರಾಣಿಬಲಿ ಹಾಗೂ ಮದ್ಯ ಮಾರಾಟ ನಿಷೇಧ: ಜಾತ್ರಾ ಮಹೋತ್ಸವದಲ್ಲಿ ಕಡ್ಡಾಯವಾಗಿ ಪ್ರಾಣಿಬಲಿಯಂತಹ ಆಚರಣೆಗಳನ್ನು ನಿಷೇಧಿಸಲಾಗಿದೆ. ಪೊಲೀಸ್, ಪಟ್ಟಣ ಪಂಚಾಯತಿ ಹಾಗೂ ಪಶು ಇಲಾಖೆ ಅಧಿಕಾರಿಗಳು ಸನ್ನದ್ದವಾಗಿದ್ದು, ಪ್ರಾಣಿಬಲಿ ನೀಡುವುದನ್ನು ತಡೆಗಟ್ಟಬೇಕು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ತಿಳಿಸಿದರು.
ನಾಯಕನಹಟ್ಟಿ ಪಟ್ಟಣ ಮೂರು ಕಿ.ಮೀ. ವ್ಯಾಪ್ತಿಯ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಬೇಕು. ಪೊಲೀಸ್ ಚೆಕ್ ಪೋಸ್ಟ್‍ಗಳಲಿ ಇವುಗಳ ಕುರಿತು ಜಾಗೃತಿ ವಹಿಸಬೇಕು ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಚಳ್ಳಕೆರೆ ತಹಶೀಲ್ದಾರ್ ರೆಹಮಾನ್ ಪಾಷಾ, ನಾಯಕನಹಟ್ಟಿ ಪಟ್ಟಣ ಪಂಚಾಯತಿ ಅಧಿಕಾರಿ ಲೀಲಾವತಿ, ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಗಂಗಾಧರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page