ಐದು ಜನರ ಸಾವು FSL ರಿಪೋರ್ಟ್ ಪ್ರಕಾರ ನಿದ್ದೆ ಮಾತ್ರೆ ಸೇವನೆಯಿಂದಲೇ‌ ಸಾವಾಗಿದೆ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ.

by | 16/05/24 | ಕಾನೂನು, ಕ್ರೈಂ, ತನಿಖಾ ವರದಿ

ಚಿತ್ರದುರ್ಗ, ಮೇ.16: ನಗರದ ಚಳ್ಳಕೆರೆ ಗೇಟ್​ ಸಮೀಪದ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಜಗನ್ನಾಥರೆಡ್ಡಿ ಎಂಬುವವರ ಮನೆಯಲ್ಲಿ 2023ರ ಡಿಸೆಂಬರ್ 28ರಂದು ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣಾರೆಡ್ಡಿ ಹಾಗೂ ನರೇಂದ್ರರೆಡ್ಡಿ ಸೇರಿದಂತೆ ಐವರ ಅಸ್ಥಿಪಂಜರ ಪತ್ತೆಯಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್(FSL) ರಿಪೋರ್ಟ್ ಬಂದಿದ್ದು, ಚಿತ್ರದುರ್ಗ ಪೊಲೀಸರ ಕೈ ಸೇರಿದೆ. ಈ ವರದಿಯಲ್ಲಿ ಸಾವಿನ ಕುರಿತು ಸತ್ಯಾಂಶ ಬಯಲಾಗಿದೆ.



ಎಸ್ಪಿ ಹೇಳಿದ್ದಿಷ್ಟು

ಇನ್ನು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ, ‘ 5 ಅಸ್ಥಿಪಂಜರ ಸಿಕ್ಕ ತಕ್ಷಣ, ಪೂರ್ತಿ ಮನೆ ಅಸ್ತವ್ಯಸ್ತತೆಯಲ್ಲಿತ್ತು. ಕೂಡಲೇ ಎಫ್‌ಎಸ್‌ಎಲ್ ಟೀಂ ಕರೆಸಿ ಸೂಕ್ತ ತನಿಖೆಗೆ ಆದೇಶ ನೀಡಲಾಯಿತು.
ತನಿಖಾ ತಂಡ ಹಾಗೂ FSL ತಂಡ ಸೇರಿ ಆ ಮನೆಯಿಂದ 71 ಸಾಕ್ಷ್ಯಗಳನ್ನು ಕಲೆ ಹಾಕಲಾಗಿತ್ತು. ಎಲ್ಲಾ ಸ್ಯಾಂಪಲ್ಸ್​ಗಳನ್ನು ದಾವಣಗೆರೆ, ಬೆಂಗಳೂರು ಲ್ಯಾಬೋರೇಟರಿಗೆ ಕಳುಹಿಸಲಾಗಿತ್ತು. ಇದು ತುಂಬಾ ಸೆನ್ಸಿಬಲ್ ಕೇಸ್ ಆಗಿದ್ದರಿಂದ ರಿಪೋರ್ಟ್ ತಡವಾಗಿ ಬಂದಿದೆ.

ಚಿತ್ರದುರ್ಗದಲ್ಲಿ 5 ಅಸ್ಥಿಪಂಜರ ಸಿಕ್ಕ ಪ್ರಕರಣ: ಆತ್ಮಹತ್ಯೆ ಮಾಡಿಕೊಂಡಿತಾ ಜಗನ್ನಾಥರೆಡ್ಡಿ ಕುಟುಂಬ?

ಈ ಬಗ್ಗೆ ಮೃತರ ಸಂಬಂಧಿಕ ಪವನ್ ಕುಮಾರ್ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದು ಜಗನ್ನಾಥ ರೆಡ್ಡಿ ಕುಟುಂಬವೇ ಎಂದು ಪವನ್ ದೂರು ನೀಡಿದ್ದರು. FSL ವರದಿಯಲ್ಲಿ ದೇಹಗಳ ಯಾವುದೇ ಭಾಗದಲ್ಲಿ ಗುರುತುಗಳು ಕಂಡು ಬಂದಿಲ್ಲ. ಅಸ್ಥಿಪಂಜರದ ಸ್ಯಾಂಪಲ್ ಗಳಲ್ಲಿ ನಿದ್ದೆ ಮಾತ್ರೆಗಳು ಸೇವನೆ ಮಾಡಿರುವ ಮಾಹಿತಿ ಸಿಕ್ಕಿದೆ.
ಐದು ಮಂದಿ ನಿದ್ದೆ ಮಾತ್ರೆ ಸೇವನೆಯಿಂದ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಾನಸಿಕ ಖಿನ್ನತೆ, ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

FSL ರಿಪೋರ್ಟ್ ಪ್ರಕಾರ ನಿದ್ದೆ ಮಾತ್ರೆ ಸೇವನೆಯಿಂದಲೇ‌ ಸಾವಾಗಿದೆ. ಆದ್ರೆ ಕಿಚನ್​ನಲ್ಲಿ ಇರುವ ಎರಡು ಪಾತ್ರೆಗಳಲ್ಲಿ ಸೈನೈಡ್ ಸಿಕ್ಕಿದೆ ಎಂದು FSL ನಲ್ಲಿ ಪತ್ತೆಯಾಗಿದೆ. ಅಸ್ಥಿಪಂಜರಗಳ ದೇಹದಲ್ಲಿ ಸೈನೈಡ್ ಸೇವನೆ ಮಾಡಿರುವುದು ಕಂಡು ಬಂದಿಲ್ಲ. ಆ ಮನೆಯಲ್ಲಿ‌ ಔಷಧಿಗಳು, ಮಾತ್ರೆಗಳು ಸಿಕ್ಕಿವೆ. ನಮ್ಮ‌‌ ತನಿಖೆ ಪ್ರಕಾರ ಫೆಬ್ರವರಿ, ಮಾರ್ಚ್ 2019 ರಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪೋಸ್ಟ್ ಮಾರ್ಟ್ಂ ರಿಪೋರ್ಟ್ ನಲ್ಲಿ ಖಚಿತವಾಗಿ ಹೇಳಲಾಗಿಲ್ಲ. ಆದ್ರೆ, ನಮ್ಮ ಎಲ್ಲಾ ರೀತಿಯ ಆಯಾಮಗಳ ತನಿಖೆಯಲ್ಲಿ ಈ ಸತ್ಯಾಂಶ ಬೆಳಕಿಗೆ ಬಂದಿದೆ. ಮುಂದುವರೆದ ತನಿಖೆಯನ್ನು CPI ಗೆ ಒಪ್ಪಿಸಲಾಗಿದೆ. ಇದು ಸಾವಿಗೆ ಸೂಕ್ತ ಕಾರಣ ಏನು ಎಂಬುದು ಬೆಳಕಿಗೆ ಬರಲಿದೆ. CPI ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ ಎಂದರು.

ಘಟನೆ ವಿವರ

2023 ಡಿ.29 ರಂದು ಚಿತ್ರದುರ್ಗದಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ನಾಥರೆಡ್ಡಿ ಕುಟುಂಬ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತಹತ್ಯೆಗೆ ಶರಣಾಗಿದ್ದಾರೆ ಎಂಬ ಅಂಶ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತು. ಬಳಿಕ ಪೊಲೀಸರು ಡೆತ್ ನೋಟ್ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದರು. ಈ ಡೆತ್​ನೋಟ್​ನಲ್ಲಿ, ‘ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ 2013ರಲ್ಲಿ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದನು. ಇದೇ ವರ್ಷ ನರೇಂದ್ರರೆಡ್ಡಿ ಗೆಳೆಯರ ಜತೆ ಸೇರಿ ಬಿಡದಿ ಬಳಿ ವಾಹನವೊಂದನ್ನು ತಡೆದು ದರೋಡೆ ಮಾಡಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದನು. ಈ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ಕೆಲದಿನಗಳ ಕಾಲ ಜೈಲಿನಲ್ಲಿದ್ದನು. ನರೇಂದ್ರರೆಡ್ಡಿಯ ಈ ಕೃತ್ಯದಿಂದ ಮನನೊಂದ ಕುಟುಂಬ, ಡೆತ್​ ನೋಟ್​ ಬರೆದಿಟ್ಟು 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಈ ಎಲ್ಲ ವಿಷಯ ಡೆತ್​ ನೋಟ್​ನಲ್ಲಿತ್ತು. ಇದೀಗ ಎಫ್​ಎಸ್​ಎಲ್​ ವರದಿಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಗ್ಗೆ ಉಲ್ಲೇಖಿಸಲಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page