ಒಣ ವಲಯದ ಹವಾಗುಣವು ಪಪ್ಪಾಯ ಬೆಳೆಗೆ ಸೂಕ್ತವಾಗಿದ್ದು, ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ರೈತರು ಪಪ್ಪಾಯ ಬೆಳೆಯನ್ನು ಬೆಳೆಯಲು ಮುಂದಾಗಬೇಕು ಎಂದು ಹಿರಿಯೂರಿನ ತೋಟಗಾರಿಕೆ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಶ್ರೀಧರ್

by | 13/02/24 | ಕೃಷಿ

ಚಳ್ಳಕೆರೆ ಫೆ 13.ಚಿತ್ರದುರ್ಗ ಜಿಲ್ಲೆಯ ಒಣ ವಲಯದ ಹವಾಗುಣವು ಪಪ್ಪಾಯ ಬೆಳೆಗೆ ಸೂಕ್ತವಾಗಿದ್ದು, ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ರೈತರು ಪಪ್ಪಾಯ ಬೆಳೆಯನ್ನು ಬೆಳೆಯಲು ಮುಂದಾಗಬೇಕು ಎಂದು ಹಿರಿಯೂರಿನ ತೋಟಗಾರಿಕೆ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಶ್ರೀಧರ್ ಹೇಳಿದರು.
ಮೈರಾಡ ಕಚೇರಿಯ ತಿಪ್ಪೇರುದ್ರಸ್ವಾಮಿ ರೈತ ಉತ್ಪಾದಕ ಕಂಪನಿ ಸಭಾಂಗಣದಲ್ಲಿ ಸೋಮವಾರ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ತೋಟಗಾರಿಕೆ ಮಹಾವಿದ್ಯಾಲಯ ಹಿರಿಯೂರು, ತಿಪ್ಪೇರುದ್ರಸ್ವಾಮಿ ರೈತಉತ್ಪಾದಕ ಕಂಪನಿ ಸಹಯೋಗದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಯು ರಾಜ್ಯದಲ್ಲಿ ಮಧ್ಯ ಒಣವಲಯದಲ್ಲಿ ಕಂಡು ಬರಲಿದ್ದು, ಮಳೆಯ ಕೊರತೆ ಯತೇಚ್ಛವಾಗಿರುತ್ತದೆ. ಇದರಿಂದ ಅಂತರ್ಜಲದ ಮಟ್ಟ ಕುಸಿದು ಕೊಳವೆಬಾವಿಗಳಲ್ಲಿ ಸಿಗುವ ಅತ್ಯಲ್ಪ ನೀರಿನಲ್ಲಿ ಜಿಲ್ಲೆಯ ನೂರಾರು ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಮಧ್ಯಮಾವಧಿ ಬೆಳೆಯಾದ ಪಪ್ಪಾಯ ಬೆಳೆಯು ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮವಾದ ರುಚಿ, ಇಳುವರಿ ಮತಯ್ತು ರೈತರಿಗೆ ಆದಾಯವನ್ನು ತಂದುಕೊಡುವ ಬೆಳೆಯಾಗಿದೆ. ಈ ಬೆಳೆಯಲ್ಲಿ ಹಲವು ತಳಿಗಳಿದ್ದು, ನಮ್ಮ ಜಮೀನುಗಳ ಭೂಮಿಯ ಫಲವತ್ತತೆ ಮಾರುಕಟ್ಟೆಯ ಜ್ಞಾನವನ್ನು ಅರಿತು ಪಪ್ಪಾಯ ಬೆಳೆಯನ್ನು ಬೆಳೆಯಲು ರೈತರು ಮುಂದಾಗಬೇಕು. ಮಣ್ಣಿನ ಆರೋಗ್ಯವನ್ನು ವೃದ್ಧಿಸಲು ಮಣ್ಣಿನ ಪರೀಕ್ಷೆ ಮಾಡಿಸಿಕೊಂಡು ಅಗತ್ಯವಾದ ಪೋಷಕಾಂಶಗಳನ್ನು ಭೂಮಿಗೆ ನೀಡಬೇಕು. ನಂತರ ಸ್ಥಳಿಯವಾಗಿ ಸಿಗುವ ಸಂಪನ್ಮೂಲಗಳನ್ನು ಬಳಸಿಕೊಂಡು ಜೀವಾಮೃತ ಮತ್ತು ಸಾವಯವ ಗೊಬ್ಬರಗಳನ್ನು ಬಳಸಬೇಕು. ವಿಜ್ಞಾನಿಗಳ ಮತ್ತು ಕೃಷಿ ಅಧಿಕಾರಿಗಳ ಮಾರ್ಗದರ್ಶನದಂತೆ ಅತ್ಯಲ್ಪ ರಾಸಾಯನಿಕಗಳನ್ನು ಬಳಸಿ ಉತ್ತಮವಾದ ಇಳುವರಿಯನ್ನು ಪಡೆಯಬಹುದು. ಹಾಗೇ ರಾಜ್ಯ ಅಂತರ ರಾಜ್ಯಗಳಲ್ಲಿ ಪಪ್ಪಾಯ ಹಣ್ಣಿಗೆ ಬೇಡಿಕೆಯಿದ್ದು, ಉತ್ತಮವಾದ ಬೆಲೆ ಸಿಗುತ್ತದೆ. ಪಪ್ಪಾಯ ಬೆಳೆಯನ್ನು ಸಮಗ್ರ ಕೃಷಿ ಪದ್ಧತಿಯಲ್ಲೂ ಬೆಳೆಯಬಹುದು. ಇದರಿಂದ ಹಲವು ಬೆಳೆಗಳಿಂದ ರೈತರ ಆದಾಯದಲ್ಲಿ ನಷ್ಟ ಕಡಿಮೆಯಾಗಿ ಆದಾಯ ದ್ವಿಗುಣವಾಗುತ್ತದೆ. ಈ ಬಗ್ಗೆ ಸೂಕ್ತ ಮಾರ್ಗದರ್ಶನ ಮತ್ತು ಉಚಿತ ಪ್ರಾತ್ಯಕ್ಷಿಕಗಳನ್ನು ನಮ್ಮ ಮಹಾವಿದ್ಯಾಲಯದಲ್ಲಿ ನೀಡಲಾಗುವುದು. ಆಸಕ್ತ ರೈತರು ಸಂಪರ್ಕಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ ಮಹಾವಿದ್ಯಾಲಯದ ಪ್ರಾಚಾರ್ಯ ಕೆ.ಮಂಜಪ್ಪ, ಪ್ರಾಧ್ಯಾಪಕ ಅಮರೇಶ್‌ಕುಮಾರ್ ಮಾತನಾಡಿದರು.
ಇದೇವೇಳೆ ತಿಪ್ಪೇರುದ್ರಸ್ವಾಮಿ ರೈತ ಉತ್ಪಾದಕ ಕಂಪನಿ ನಿರ್ದೇಶಕರಾದ ಬಿ.ಟಿ.ಪ್ರಕಾಶ್, ಬೋರಯ್ಯ, ಹೆಚ್.ಬಿ.ತಿಪ್ಪೇಸ್ವಾಮಿ, ರೈತರಾದ ನಾಗರಾಜ, ಬೋರಯ್ಯ, ಸಾಕಪ್ಪ, ರಂಗಪ್ಪ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page